For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸುನಿಲ್ ಗವಾಸ್ಕರ್

India vs Australia: Sunil Gavaskar praises Hardik Pandya captaincy ahead of series against Australia

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯವಾಗಿದೆ. ಇದೀಗ ಈ ಎರಡು ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿದ್ದು ಶುಕ್ರವಾರದಿಂದ ಮುಂಬೈನಲ್ಲಿ ಮೊದಲ ಪಂದ್ಯವನ್ನಾಡುವ ಮೂಲಕ ಈ ಸರಣಿಗೆ ಚಾಲನೆ ದೊರೆಯಲಿದೆ.

ಇನ್ನು ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿದ್ದು ಕೌಟುಂಬಿಕ ಕಾರಣಗಳಿಂದಾಗಿ ಕಣಕ್ಕಿಳಿಯುತ್ತಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮಾತನಾಡಿದ್ದು ವಿಶೇಷ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

"ಹಾರ್ದಿಕ್ ಪಾಂಡ್ಯ ನಾಯಕನಾದಾಗ ತಂಡ ಉತ್ತಮ ಭಾವದಲ್ಲಿರುವುದನ್ನು ಗಮನಿಸಬಹುದು. ಅದಕ್ಕೆ ಅವರು ಆಟಗಾರರನ್ನು ನಿಭಾಯಿಸುವ ರೀತಿಯೂ ಕಾರಣವಾಗಿರಬಹುದು. ಆಟಗಾರರ ಭುಜಹಿಡಿದು ಅವರು ಮಾತನಾಡಿಸುತ್ತಿರುತ್ತಾರೆ. ಆಟಗಾರರು ಒತ್ತಡವಿಲ್ಲದೆ ಆರಾಮವಾಗಿರವಂತೆ ಅವರು ಮಾಡುತ್ತಾರೆ. ಆಟದಲ್ಲಿ ಇದು ಬಹಳ ಮುಖ್ಯವಾಗಿದ್ದು ಆಟಗಾರರು ತಮ್ಮ ಸಹಜಶೈಲಿಯ ಆಟವನ್ನು ಆಡಲು ಸಾಧ್ಯವಾಗುತ್ತದೆ. ಅವರು ಆಟಗಾರರನ್ನು ಉತ್ತೇಜಿಸುತ್ತಾ ಇರುತ್ತಾರೆ. ಇದು ಉತ್ತಮವಾದ ಬೆಳವಣಿಗೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

"ಆತ ನಾಯಕತ್ವದಲ್ಲಿ ತನ್ನನ್ನು ಸಾಬೀತುಪಡಿಸಿಕೊಂಡು ಬಂದಿದ್ದಾರೆ. ಟಿ20 ಮಾದರಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮುನ್ನಡೆಸಿದ ರೀತಿಯಿಂದ ನನಗೆ ಅವರು ಮೆಚ್ಚುಗೆಯಾಗಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಅವರು ಗೆಲ್ಲಲು ಸಾಧ್ಯವಾದರೆ ಮುಂದಿನ ವಿಶ್ವಕಪ್ ನಂತರ ಭಾರತ ತಂಡದ ನಾಯಕತ್ವಕ್ಕೆ ಅವರ ಹೆಸರು ಖಂಡಿತವಾಗಿಯೂ ಮುಂಚೂಣಿಯಲ್ಲಿರುತ್ತದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಇನ್ನು ಟೆಸ್ಟ್ ಸರಣಿಯ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡದ ಆಟಗಾರರು ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಶುಬ್ಮನ್ ಗಿಲ್ ಮೊದಲಾದ ಆಟಗಾರರ ಅಹ್ಮದಾಬಾದ್‌ನಿಂದ ಮುಂಬೈಗೆ ತೆರಲಿದ್ದಾರೆ. ಮಾರ್ಚ್ 15ರಿಂದ ಟೀಮ್ ಇಂಡಿಯಾ ಆಟಗಾರರು ಏಕದಿನ ಸರಣಿಗೆ ಅಭ್ಯಾಸ ಆರಂಭಿಸಲಿದ್ದಾರೆ.

ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೈನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ

Story first published: Tuesday, March 14, 2023, 15:35 [IST]
Other articles published on Mar 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+