India vs Australia: ದೆಹಲಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಭವಿಷ್ಯ ನುಡಿದ ಸುನಿಲ್ ಗವಾಸ್ಕರ್

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ದುರದೃಷ್ಟಕರ ರೀತಿಯಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಬೇಕಾಯಿತು. ಹೀಗಾಗಿ ಟೆಸ್ಟ್ ಮಾದರಿಯಲ್ಲಿ ಕೊಹ್ಲಿಯ ರನ್ ಬರ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯೆ ನೀಡಿದ್ದು ದೆಹಲಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಚಾರವಾಗಿ ಭವಿಷ್ಯ ನುಡಿದಿದ್ದಾರೆ. ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಸುದೀರ್ಘ ಕಾಲದಿಂದ ಕಾಯುತ್ತಿರುವ ಟೆಸ್ಟ್ ಶತಕ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಬರುವ ಸಾಧ್ಯತೆಯಿದೆ ಎಂದಿದ್ದಾರೆ. ವಿರಾಟ್ ಕೊಹ್ಲಿ ತವರು ದೆಹಲಿಯಲ್ಲಿ ಈ ಪಂದ್ಯ ನಡೆಯುತ್ತಿರುವ ಕಾರಣ ತವರಿನಲ್ಲಿ ಕೊಹ್ಲಿ ಶತಕ ಸಿಡಿಸಲಿದ್ದಾರೆ ಎಂದು ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ.
ಕಳೆದ ಕೆಲ ವರ್ಷಗಳಿಂದ ವಿರಾಟ್ ಕೊಹ್ಲಿ ಟೆಸ್ಟ್ ಮಾದರಿಯಲ್ಲಿ ರನ್‌ಗಳಿಸಲು ಪದರಾಡುತ್ತಿದ್ದಾರೆ. ಕಳೆದ 21 ಟೆಸ್ಟ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 25.80 ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿದ್ದು 929 ರನ್ ಮಾತ್ರವೇ ಗಳಿಸಿದ್ದಾರೆ. ಇದರಲ್ಲಿ ಆರು ಅರ್ಧ ಶತಕ ಸೇರಿದೆ. ಈ ಮೂಲಕ ವಿರಾಟ್ ಕೊಹ್ಲಿಯ ಒಟ್ಟಾರೆ ಟೆಸ್ಟ್ ಮಾದರಿಯ ಸರಾಸರಿ 50ಕ್ಕಿಂತ ಕೆಳಗಿಳಿದಿದೆ. ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ 12 ರನ್ ಮಾತ್ರವೇ ಗಳಿಸಿದ್ದರು.
"ಕೇವಲ ಒಂದು ಇನ್ನಿಂಗ್ಸ್ ಮಾತ್ರವೇ ಬೇಕಾಗಿದೆ. ಈ ಸರಣಿಯಲ್ಲಿ ಇನ್ನು ಕೂಡ ಮೂರು ಟೆಸ್ಟ್ ಪಂದ್ಯಗಳು ಬಾಕಿಯಿದೆ. ಕೊಹ್ಲಿಯಂಥಾ ಆಟಗಾರರು ಪ್ರತಿ ಪಂದ್ಯದಲ್ಲಿಯೂ ರನ್‌ಗಳಿಸುವ ನಿರೀಕ್ಷೆಯಿರುತ್ತದೆ. ಆದರೆ ಇದು ಕೇವಲ ಒಂದು ಇನ್ನಿಂಗ್ಸ್‌ನ ವಿಚಾರವಾಗಿದೆ. ನನಹೆ ಅನಿಸುವ ಪ್ರಕಾರ ಅವರ ಶತಕ ಅವರ ತವರು ದೆಹಲಿಯಲ್ಲಿಯೇ ಬರಲಿದೆ ಅನಿಸುತ್ತದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.
ನಾಯಕ ರೋಹಿತ್ ಬ್ಯಾಟಿಂಗ್ ಗವಾಸ್ಕರ್ ಮೆಚ್ಚುಗೆ: ಇನ್ನು ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮಾಡಿರುವ ಬ್ಯಾಟಿಂಗ್ ಪ್ರದರ್ಶನವನ್ನು ಗವಾಸ್ಕರ್ ಕೊಂಡಾಡಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕದ ಮೂಲಕ ಮುಂದೆನಿಂತು ತಂಡವನ್ನು ಮುನ್ನಡೆಸಿದ್ದಾರೆ.
"ಇದು ನಾಯಕನ ಇನ್ನಿಂಗ್ಸ್ ಆಗಿತ್ತು. ಇಂಥಾ ಪಿಚ್‌ನಲ್ಲಿ ಮುಂದೆ ನಿಂದು ಅವರು ದಾರಿ ತೋರಿಸುವ ಅಗತ್ಯವಿತ್ತು, ಅದನ್ನು ಅವರು ಮಾಡಿ ತೋರಿಸಿದ್ದಾರೆ. ಯಾಕೆಂದರೆ ಅಲ್ಲಿ ಬ್ಯಾಟಿಂಗ್ ಮಾಡುವುದು ಸುಲಭವಾಗಿರಲಿಲ್ಲ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವ ಪಿಚ್‌ನಲ್ಲಿ ಆಡುವುದನ್ನು ಅವರು ಇಷ್ಟಪಡುತ್ತಾರೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17ರಂದು ಶುಕ್ರವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications