For Quick Alerts
ALLOW NOTIFICATIONS  
For Daily Alerts
 

India vs Australia: ವಿಶ್ವಕಪ್ ಮೊದಲು ಕುಟುಂಬ ನಂತರ: ಸರಣಿ ಸೋಲಿನ ಬೆನ್ನಲ್ಲೇ ಗವಾಸ್ಕರ್ ಖಡಕ್ ಮಾತು

India vs Australia: Sunil Gavaskar said Rohit Sharma should play all ODIs in 2023

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಕಳೆದುಕೊಂಡಿದೆ. ಚೆನ್ನೈನಲ್ಲಿ ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ 21 ರನ್‌ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಬಳಿಕ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಕಟುವಾದ ಸಲಹೆ ನೀಡಿದ್ದಾರೆ.

ವಿಶ್ವಕಪ್‌ನಂತಾ ಮಹತ್ವದ ಟೂರ್ನಿ ಮುಂದಿರುವಾಗ ಕೌಟುಂಬಿಕ ಬದ್ಧತೆಗಳು ಪ್ರಮುಖವಾಗಬಾರದು. ಅದು ತುರ್ತು ವಿಚಾರವಾಗಿದ್ದಾಗ ಮಾತ್ರವೇ ಹಿಂದಕ್ಕೆ ಸರಿಯಬೇಕು ಎಂದಿದ್ದಾರೆ ಸುನಿಲ್ ಗವಾಸ್ಕರ್. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಕೌಟುಂಬಿಕ ಕಾರಣದಿಂದಾಗಿ ಅವರು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಪಂದ್ಯದಿಂದ ಹೊರಗುಳಿದಿದ್ದರು.

ಇನ್ನು ತಂಡವನ್ನು ಪ್ರಕಟಿಸುವಾಗಲೇ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿತ್ತು. ಹಾಗಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮೊದಲ ಏಕದಿನ ಪಂದ್ಯಕ್ಕೆ ನಾಯಕನನ್ನಾಗಿ ನೇಮಿಸಲಾಗಿತ್ತು. ಆದರೆ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮಾತ್ರವೇ ಭಾರತ ಗೆಲುವು ಸಾಧಿಸಲು ಯಶಸ್ವುಯಾಯಿತು. ಸರಣಿಯಲ್ಲಿ ಉಳಿದ ಎರಡು ಪಂದ್ಯಗಳಲ್ಲಿಯೂ ಸೋಲು ಕಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಸುನಿಲ್ ಗವಾಸ್ಕರ್ ರೋಹಿತ್ ಶರ್ಮಾ ಮುಂದಿನ ವಿಶ್ವಕಪ್ ದೃಷ್ಟಿಯಿಂದ ಎಲ್ಲಾ ಈ ವರ್ಷ ಬರಲಿರುವ ಎಲ್ಲಾ ಏಕದಿನ ಸರಣಿಯಲ್ಲಿಯೂ ಆಡಬೇಕಿದೆ ಎಂದಿದ್ದಾರೆ. "ನನ್ನ ಪ್ರಕಾರ ರೋಹಿತ್ ಎಲ್ಲಾ ಪಂದ್ಯದಲ್ಲಿಯೂ ಆಡಬೇಕಿದೆ. ಒಂದು ಪಂದ್ಯದಲ್ಲಿ ಆಡಿ ಉಳಿದ ಪಂದ್ಯಗಳಿಂದ ವಿಶ್ರಾಂತಿ ಪಡೆಯುವ ನಾಯಕನನ್ನು ಹೊಂದಿರಲು ಸಾಧ್ಯವಿಲ್ಲ. ಇದು ಬಹಳ ಮುಖ್ಯವಾಗಿದೆ" ಎಂದಿದ್ದಾರೆ ಸುನಿಲ್ ಗವಾಸ್ಕರ್.

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಿರ್ಣಾಯಕ ಹಾಗೂ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದ್ದು ಮುಖಭಂಗಕ್ಕೆ ಒಳಗಾಗಿದೆ. ಈ ಮೂಲಕ ಸುದಿರ್ಘ ಕಾಲದ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಸರಣಿ ಸೋಲು ಕಂಡಿದೆ. ಅಲ್ಲದೆ ಭಾರತದಲ್ಲೇ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ನಡೆಸುತ್ತಿರುವ ಸಿದ್ಧತೆಯಲ್ಲಿ ಹಿನ್ನಡೆ ಕಂಡಿದೆ.

ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 269 ರನ್‌ಗಳಿಸಿ ಆಲೌಟ್ ಆಗಿತ್ತು. ಇದನ್ನು ಬೆನ್ನಟ್ಟಿದ ಭಾರತ ತಂಡ ಕೇವಲ 248 ರನ್‌ಗಳಿಗೆ ಆಲೌಟ್ ಆಗಿದ್ದು ಟೀಮ್ ಇಂಡಿಯಾ 21 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಈ ಮೂಲಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿದೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಜಯದೇವ್ ಉನದ್ಕತ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ನಾಥನ್ ಎಲ್ಲಿಸ್

Story first published: Wednesday, March 22, 2023, 23:55 [IST]
Other articles published on Mar 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+