
ನಾಗ್ಪುರ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ದಿನ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತದ ಶಿಸ್ತಿನ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ಕೇವಲ 177ರನ್‌ಗಳಿಗೆ ಆಲೌಟ್ ಆಗಿದ್ದು ಹಿನ್ನಡೆ ಅನುಭವಿಸಿದೆ. ಈ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಬಗ್ಗೆ ಈಗ ಸಾಕಷ್ಟು ಮೆಚ್ಚುಗೆಗಳು ಹರಿದುಬರುತ್ತಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಕೂಡ ರವೀಂದ್ರ ಜಡೇಜಾ ಪ್ರದರ್ಶನದ ಬಗ್ಗೆ ವಿಶೇಷವಾಗಿ ಪ್ರಶಂಸಿದ್ದು ರವೀಂದ್ರ ಜಡೇಜಾ ಅವರನ್ನು ಜಾದೂಗಾರ ಎಂದು ಕರೆದಿದ್ದಾರೆ.
ನಾಗ್ಪುರ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ ಆಸ್ಟ್ರೇಲಿಯಾದ ಐದು ವಿಕೆಟ್ ಕಬಳಿಸಯವಲ್ಲಿ ಯಶಸ್ವಿಯಾದರು. ಈ ಪ್ರದರ್ಶನದ ಬಳಿಕ ಸುರೇಶ್ ರೈನಾ ವಿಶೇಷ ಮೆಚ್ಚುಗೆ ಸೂಚಿಸಿದ್ದಾರೆ. "ರವೀಂದ್ರ ಜಡೇಜಾ ಅವರದ್ದು ಎಂಥಾ ಅದ್ಭುತ ಕಮ್‌ಬ್ಯಾಕ್. ಆತ ಯಾವಾಗಲೂ ಜಾದೂಗಾರನಂತೆಯೇ ಕಾರ್ಯನಿರ್ವಹಿಸುತ್ತಾರೆ. ಐದು ವಿಕೆಟ್‌ಗಳ ಗೊಂಚಲಿಗೆ ಅಭಿನಂದನೆಗಳು ಚಾಂಪಿಯನ್" ಎಂದು ರೈನಾ ಮೆಚ್ಚುಗೆ ಸೂಚಿಸಿದ್ದಾರೆ.
ಇನ್ನು ಮಾಜಿ ಆಟಗಾರ ಮೊಹಮ್ಮದ್ ಕೈಫ್ ಕೂಡ ಜಡೇಜಾ ಪ್ರದರ್ಶನಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಗಾಯದಿಂದ ವಾಪಾಸಾಗಿ ಈ ರೀತಿಯ ಪ್ರದರ್ಶನ ನೀಡುವುದು ಸುಲಭವಲ್ಲ ಎಂದಿದ್ದಾರೆ ಕೈಫ್. "ಗಾಯದಿಂದ ಮರಳಿ ಅತ್ಯುನ್ನತ ಮಟ್ಟದಲ್ಲಿ ಆಡುವುದು ಸುಲಭವಲ್ಲ. ಅದು ನೀವು ಸರ್ ಜಡೇಜಾ ಆಗಿದ್ದರೆ ಮಾತ್ರ ಸಾಧ್ಯ. ಆತ ಭಯಾನಕ" ಎಂದಿದ್ದಾರೆ" ಮೊಹಮ್ಮದ್ ಕೈಫ್.
ಈ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಮೂಲಕ ಆಸ್ಟ್ರೇಲಿಯಾ ತಂಡವನ್ನು ಧ್ವಂಸಗೊಳಿಸಿದ್ದಾರೆ ರವೀಂದ್ರ ಜಡೇಜಾ. ಇದು ಅವರ 11ನೇ ಐದು ವಿಕೆಟ್‌ಗಳ ಗೊಂಚಲಾಗಿದ್ದು ಆಸ್ಟ್ರೇಲಿಯಾ ವಿರುದ್ಧ ಅವರ ನಾಲ್ಕನೆಯದು ಎಂಬುದು ಗಮನಾರ್ಹ ಅಂಶ. ಇನ್ನು ಕಳೆದ ವರ್ಷದ ಜುಲೈನಲ್ಲಿ ಬರ್ಮಿಂಗ್‌ಹ್ಯಾ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು.
ರವೀಂದ್ರ ಜಡೇಜಾ ಆಸ್ಟ್ರೇಲಿಯಾದ ಪ್ರಮುಖ ಆಟಗಾರರಾದ ಮಾರ್ನಸ್ ಲ್ಯಾಬುಶೈನ್ ಹಾಗೂ ಸ್ಟೀವ್ ಸ್ಮಿತ್ ಸೇರಿದಂತೆ ಒಟ್ಟು ಐದು ವಿಕೆಟ್ ಪಡೆದುಕೊಂಡು ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಭಾರೀ ಏಟು ನೀಡಿದ್ದಾರೆ. ಇನ್ನು ಟೀಮ್ ಇಂಡಿಯಾದ ಮತ್ತೋರ್ ಬೌಲರ್ ಆರ್ ಅಶ್ವಿನ್ ಕೂಡ ಈ ಪಂದ್ಯದಲ್ಲಿ ಮೂರು ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನು ಭಾರತದ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 177 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ. ಆಸ್ಟ್ರೇಲಿಯಾ ಪರವಾಗಿ ಯಾವ ಒಬ್ಬ ಆಟಗಾರ ಕೂಡ ಅರ್ಧ ಶತಕದ ಗಡಿ ದಾಟಲು ಸಾಧ್ಯವಾಗಲಿಲ್ಲ. ಲ್ಯಾಬುಶೈನ್ 49 ರನ್ ಗಳಿಸಿದ್ದು ತಂಡದ ಪರ ದಾಖಲಾದ ಅತಿ ಹೆಚ್ಚಿನ ಸ್ಕೋರ್ ಆಗಿದೆ. ಉಳಿದಂತೆ ಸ್ಟೀವ್ ಸ್ಮಿತ್ 37 ರನ್‌ಗಳ ಕೊಡುಗೆ ನೀಡಿದರೆ ಅಲೆಕ್ಸ್ ಕ್ಯಾರಿ 36 ರನ್ ಗಳಿಸಿ ಔಟಾದರು.
ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಬೆಂಚ್: ಶುಬ್ಮನ್ ಗಿಲ್, ಕುಲದೀಪ್ ಯಾದವ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಉಮೇಶ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಮ್ಯಾಟ್ ರೆನ್ಶಾ, ಪೀಟರ್ ಹ್ಯಾಂಡ್ಸ್ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಟಾಡ್ ಮರ್ಫಿ, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಟ್ರಾವಿಸ್ ಹೆಡ್, ಮಿಚೆಲ್ ಸ್ವೆಪ್ಸನ್, ಮಿಚೆಲ್ ಸ್ಟಾರ್ಕ್, ಕ್ಯಾಮರೂನ್ ಗ್ರೀನ್, ಆಷ್ಟನ್ ಅಗರ್, ಲ್ಯಾನ್ಸ್ ಮೋರಿಸ್