ಭಾರತ ಒಡಿಐ ತಂಡಕ್ಕೆ ನಟರಾಜನ್ ಸೇರ್ಪಡೆ, ಟೆಸ್ಟ್‌ನಿಂದ ಇಶಾಂತ್ ಔಟ್

ಸಿಡ್ನಿ: ನವೆಂಬರ್ 27ರಿಂದ ನಡೆಯಲಿರುವ ಭಾರತ vs ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಗಾಗಿ ಭಾರತ ಒಡಿಐ ತಂಡಕ್ಕೆ ವೇಗಿ ಟಿ ನಟರಾಜನ್ ಸೇರ್ಪಡೆಯಾಗಿದ್ದಾರೆ. ಟೆಸ್ಟ್ ತಂಡದಿಂದ ಅನುಭವಿ ವೇಗಿ ಇಶಾಂತ್ ಶರ್ಮಾ ಹೊರ ಬಿದ್ದಾರೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಹೇಳಿದೆ.
ಭಾರತ-ಆಸ್ಟ್ರೇಲಿಯಾ ಸರಣಿಗೂ ಮುನ್ನ ವೇಗಿ ನವದೀಪ್ ಸೈನಿ ಬೆನ್ನು ನೋವಿನ ಕಾರಣ ನೀಡಿರುವುದರಿಂದ ಏಕದಿನ ತಂಡದಲ್ಲಿ ಮೀಸಲು ಆಟಗಾರರಾಗಿ ನಟರಾಜ್ ಅವರನ್ನು ತರಲಾಗಿದೆ. ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ಫಿಟ್ನೆಸ್ ಪರೀಕ್ಷೆ ಡಿಸೆಂಬರ್ 11ರಂದು ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.
ಇಶಾಂತ್ ಶರ್ಮಾ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ಉಂಟಾಗಿದ್ದ ಸೈಡ್ ಸ್ಟ್ರೇನ್‌ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರೀಗ ಫಿಟ್‌ನೆಸ್ ಬೆಳೆಸಿಕೊಳ್ಳುವುದಕ್ಕಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಇಶಾಂತ್ ಶರ್ಮಾ ಬಾರ್ಡರ್-ಗವಾಸ್ಕರ್ ಟ್ರೋಫಿಯಿಂದ ಹೊರ ಬಿದ್ದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ
ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಬ್ಮನ್ ಗಿಲ್, ಕೆ.ಎಲ್. ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್, ಟಿ. ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications