ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ವಿಶೇಷ ಮೈಲಿಗಲ್ಲು ಸ್ಥಾಪಿಸಿದ ವಿರಾಟ್ ಕೊಹ್ಲಿ

India vs Australia: team india captain Virat Kohli joins 250 club

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆಯೇ ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೆಲಿಯಾ ವಿರುದ್ಧದ ಏಕದಿನ ಪಂದ್ಯದ ಮೂಲಕ 250ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ 2ನೇ ಪಂದ್ಯ ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆಯುತ್ತಿದೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 250 ಏಕದಿನ ಪಂದ್ಯಗಳ ಈ ವಿಶೇಷ ಮೈಲಿಗಲ್ಲನ್ನು ಸ್ಥಾಪಿಸಿದ ಭಾರತದ 6ನೇ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಭಾರತ vs ಆಸ್ಟ್ರೇಲಿಯಾ, 2ನೇ ಏಕದಿನ ಪಂದ್ಯ: Live ಸ್ಕೋರ್ಭಾರತ vs ಆಸ್ಟ್ರೇಲಿಯಾ, 2ನೇ ಏಕದಿನ ಪಂದ್ಯ: Live ಸ್ಕೋರ್

ಭಾರತದ ಪರವಾಗಿ ಅತ್ಯಂತ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್ ಮೊದಲನೇ ಸ್ಥಾನದಲ್ಲಿದ್ದಾರೆ. ಎರಡು ದಶಕಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 463 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದು ಅತ್ಯಂತ ಹೆಚ್ಚು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನಾಡಿದ ಆಟಗಾರ ಎನಿಸಿದ್ದಾರೆ.

ಎರಡು ವಿಶ್ವಕಪ್ ವಿಜೇತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಧೋನಿ 347ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅದಾದ ಬಳಿಕ ಮಾಜಿ ನಾಯಕರಾದ ರಾಹುಲ್ ದ್ರಾವಿಡ್ (340 ಪಂದ್ಯ), ಮೊಹಮ್ಮದ್ ಅಜರುದ್ಧೀನ್(334 ಪಂದ್ಯ) ಮತ್ತು ಸೌರವ್ ಗಂಗೂಲಿ( 308 ಪಂದ್ಯ) ಇದ್ದಾರೆ.

ಆಯ್ಕೆಗಾರರ ಅಂತಿಮ ಕ್ಷಣದ ನಿರ್ಧಾರದತ್ತ ಬೊಟ್ಟು ಮಾಡಿದ ಮೊಹಮ್ಮದ್ ಕೈಫ್ಆಯ್ಕೆಗಾರರ ಅಂತಿಮ ಕ್ಷಣದ ನಿರ್ಧಾರದತ್ತ ಬೊಟ್ಟು ಮಾಡಿದ ಮೊಹಮ್ಮದ್ ಕೈಫ್

2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ ವಿರಾಟ್ ಕೊಹ್ಲಿ ಈಗ 12 ವರ್ಷಗಳ ಕ್ರಿಕೆಟ್ ವೃತ್ತಿಜೀವನವನ್ನು ಪೂರೈಸಿದ್ದು ಏಕದಿನ ಕ್ರಿಕೆಟ್‌ನಲ್ಲಿ 11,888 ರನ್‌ಗಳನ್ನು ಬಾರಿಸಿದ ದಾಖಲೆ ಹೊಂದಿದ್ದರೆ. 59.14 ರ ಸರಾಸರಿಯಲ್ಲಿ ವಿರಾಟ್ ಬ್ಯಾಟ್ ಬೀಸಿದ್ದಾರೆ.

Story first published: Monday, November 30, 2020, 10:05 [IST]
Other articles published on Nov 30, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X