Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲ್ಲ ಪೂರ್ಣ ಪ್ರಮಾಣದ ತಂಡ: ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ

ವಿಶ್ವಕಪ್ ಟೂರ್ನಿಗೆ ಕೇವಲ ಎರಡು ವಾರಗಳು ಮಾತ್ರವೇ ಬಾಕಿಯಿರುವಾಗ ಟೀಮ್ ಇಂಡಿಯಾ ಏಕದಿನ ಸರಣಿಯೊಂದನ್ನು ಆಡಲು ಸಜ್ಜಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಆಡಲಿದೆ. ಆದರೆ ಈ ಸರಣಿಯಲ್ಲಿ ಭಾರತ ತಂಡ ಪೂರ್ಣಪ್ರಮಾಣದ ತಂಡದೊಂದಿಗೆ ಆಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ತಂಡದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ಈ ಮೂವರಿಗೂ ಸರಣಿಯಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ವಿಶ್ವಕಪ್ ಸನಿಹದಲ್ಲಿರುವಾಗ ಈ ನಿರ್ಧಾರ ಅಚ್ಚರಿಗೂ ಕಾರಣವಾಗಿದೆ.

team-india-key-players-set-to-get-rest-from-odi-series

ಆಟಗಾರರ ಕೆಲಸದ ಹೊರೆಯನ್ನು ಪರಿಗಣಿಸಿ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಸರಣಿಯ ಸಮಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮ್ಯಾನೇಜ್‌ಮೆಂಟ್ ಖಚಿತಪಡಿಸುತ್ತದೆ. ಈ ಬಗ್ಗೆ ಈವರೆಗೂ ಯಾವುದೇ ಅಧಿಕೃತ ಪ್ರಕಟಣೆ ಇಲ್ಲದಿದ್ದರೂ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಆಟಗಾರರ ಕೆಲಸದ ಹೊರೆಯನ್ನು ಸೂಕ್ತ ರೀತಿಯಲ್ಲಿ ಹಂಚಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ. ಈ ಸರಣಿಯ ಬಳಿಕ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದ್ದು ಅದಾದ ಬಳಿಕ ವಿಶ್ವಕಪ್‌ನಲ್ಲಿ ಕಣಕ್ಕಿಳಿಯಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಸೆಪ್ಟೆಂಬರ್ 22ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 24ಕ್ಕೆ ನಡೆದರೆ 27ಕ್ಕೆ ಮೂರನೇ ಪಂದ್ಯ ನಡೆಯಲಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ಕೊನೆಯ ಹಂತದ ಸಿದ್ಧತೆ ನಡೆಸಲಿದೆ.

Story first published: Monday, September 18, 2023, 20:53 [IST]
Other articles published on Sep 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+