ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೇಡದ ದಾಖಲೆ ಬರೆದ ಜಸ್ಪ್ರೀತ್ ಬೂಮ್ರಾ
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ಈ ಮೂಲಕ ಪ್ರವಾಸಿ ಆಸ್ಟ್ರೇಲಿಯಾ ವೈಟ್‌ವಾಶ್ ಅವಮಾನದಿಂದ ಪಾರಾಗಿದೆ. ರಾಜ್‌ಕೋಟ್‌ನ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಆಸಿಸ್ ದಾಂಡಿಗರ ಅಬ್ಬರದ ಬಳಿಕ ಭಾರತೀಯ ಅಗ್ರ ಕ್ರಮಾಂಕ ಕೂಡ ಉತ್ತಮ ಪ್ರದರ್ಶನ ನೀಡಿತಾದರೂ ಗೆಲುವು ಮಧ್ಯಮ ಕ್ರಮಾಂಕದಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಹೀಗಾಗಿ ಬೃಹತ್ ಅಂತರದ ಸೋಲು ಅನುಭವಿಸುವಂತಾಗಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ತಮ್ಮ ಹೆಸರಿನಲ್ಲಿ ಬೇಡದ ದಾಖಲೆಯೊಂದನ್ನು ಬರೆದುಕೊಂಡಿದ್ದಾರೆ. ಆಸಿಸ್ ವಿರುದ್ಧದ ಈ ಪಂದ್ಯದಲ್ಲಿ ಬೂಮ್ರಾ ಅತ್ಯಂತ ದುಬಾರಿಯೆನಿಸಿದ್ದಾರೆ. ಈ ಪಂದ್ಯದಲ್ಲಿ ವೈಯಕ್ತಿಕವಾಗಿ ತಮ್ಮ ಅತ್ಯಂತ ದುಬಾರಿ ಸ್ಪೆಲ್ ಬೌಲಿಂಗ್ ಮಾಡಿದ್ದಾರೆ ಜಸ್ಪ್ರೀತ್ ಬೂಮ್ರಾ.

ಈ ಪಂದ್ಯದಲ್ಲೊ ಬೂಮ್ರಾ ಅವರು ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ವಿಕೆಟ್ ಕಬಳಿಸಿ ಯಶಸ್ಸು ಸಾಧಿಸಿದರು. ಆದರೆ ತಮ್ಮ 10 ಓವರ್‌ಗಳ ಸ್ಪೆಲ್‌ನಲ್ಲಿ 81 ರನ್‌ಗಳನ್ನು ಬಿಟ್ಟುಕೊಟ್ಟಿದ್ದರಿಂದ ಅವರು ಈ ಪಂದ್ಯದಲ್ಲಿ ಭಾರತದ ಅತ್ಯಂತ ದುಬಾರಿ ಬೌಲರ್ ಎನಿಸಿಕೊಂಡಿದ್ದಾರೆ. ಹಾಗಾಗಿಯೇ ಬೂಮ್ರಾ ತಮ್ಮ ಹೆಸರಿನಲ್ಲಿ ಅನಗತ್ಯ ದಾಖಲೆಯನ್ನು ಬರೆದುಕೊಂಡಿದ್ದಾರೆ. ಈ ಹಿಂದೆ ಬುಮ್ರಾ 2017 ರಲ್ಲಿ ಕಟಕ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯದಲ್ಲಿ 81 ರನ್‌ಗಳನ್ನು ನೀಡಿದ್ದರು, ಆದರೆ ಅದು 9 ಓವರ್‌ಗಳ ಸ್ಪೆಲ್ ಆಗಿತ್ತು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ತನ್ವೀರ್ ಸಂಘ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್, ಸೀನ್ ಅಬ್ಬೋಟ್, ಆಡಮ್ ಝಂಪಾ, ಮಾರ್ಕಸ್ ಸ್ಟೋನಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications