
ಪಂದ್ಯದ ದಿನಾಂಕ ಮತ್ತು ಸ್ಥಳ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯಲಿದೆ. ಜನವರಿ 7ರಿಂದ ಈ ಪಂದ್ಯ ನಡೆಯಲಿದೆ.

ಪಂದ್ಯದ ಸಮಯ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮುಂಜಾನೆಯೇ ಆರಂಭವಾಗಲಿದೆ. ಭಾರತೀಯ ಕಾಲಮಾನ ಬೆಳಗಿನ ಜಾವ 5 ಗಂಟೆಗೆ ಪಂದ್ಯದ ಆರಂಭವಾಗಲಿದೆ. ಅಂದರೆ ಆಸ್ಟ್ರೇಲಿಯಾದ ಸಿಡ್ನಿಯ ಕಾಲಮಾನದ ಪ್ರಕಾರ 10:30ಕ್ಕೆ ಅಲ್ಲಿ ಆರಂಭವಾಗಲಿದೆ.

ಪಂದ್ಯದ ನೇರಪ್ರಸಾರ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯದ ನೇರಪ್ರಸಾರ ಸೋನಿ ನೆಟ್ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಆನ್‌ಲೈನ್‌ನಲ್ಲಿ ವೀಕ್ಷಿಸುವವರು ಸೋನಿ ಲಿವ್ ಮೂಲಕ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ. ಜಿಯೋ ಟಿವಿಯಲ್ಲೂ ಉಚಿತವಾಗಿ ಪಂದ್ಯ ವೀಕ್ಷಿಸಬಹುದು

ಟೀಮ್ ಇಂಡಿಯಾ ಆಡುವ ಬಳಗ
ರೋಹಿತ್ ಶರ್ಮಾ(ಉಪನಾಯಕ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ನಾಯಕ), ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್) ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ನವ್‌ದೀಪ್ ಸೈನಿ.

ಆಸ್ಟ್ರೇಲಿಯಾ ಸಂಭಾವ್ಯ ಆಡುವ ಬಳಗ
ಡೇವಿಡ್ ವಾರ್ನರ್, ವಿಲ್ ಪುಕೊವ್ಸ್ಕಿ, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಮ್ಯಾಥ್ಯೂ ವೇಡ್, ಟಿಮ್ ಪೈನ್(ನಾಯಕ), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ನಥನ್ ಲಿಯಾನ್.


Click it and Unblock the Notifications
