ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಮ್‌ಬ್ಯಾಕ್‌ಗೆ ಸಜ್ಜಾದ ಬೂಮ್ರಾ: ಎನ್‌ಸಿಎನಲ್ಲಿ ಬೌಲಿಂಗ್ ಅಭ್ಯಾಸ ಆರಂಭಿಸಿದ ಭಾರತದ ವೇಗಿ

India vs Australia Test: Jasprit Bumrah starts bowling in nets at NCA set to in 3rd Test of BGT series

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ ಸ್ಕ್ವಾಡ್ ಘೋಷಣೆ ಮಾಡಲಾಗಿದೆ. ಗಾಯದ ಕಾರಣದಿಂದಾಗಿ ವಿಶ್ರಾಂತಿಯಲ್ಲಿದ್ದ ಟೀಮ್ ಇಂಡಿಯಾದ ವೇಗಿ ಈ ಎರಡು ಪಂದ್ಯಗಳಿಂದಲೂ ಹೊರಗುಳಿದಿದ್ದಾರೆ. ಈ ಸಂದರ್ಬದಲ್ಲಿ ಟೀಮ್ ಇಂಡಿಯಾ ಅಭಿಮಾನಿಗಳು ಖುಷಿಪಡುವಂತಾ ಸುದ್ದಿ ಹೊರಬಿದ್ದಿದೆ.

ಟೀಮ್ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರು ಹಾಗೂ ನಾಲ್ಕನೇ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಬೂಮ್ರಾ ತಮ್ಮ ಫಿಟ್‌ನೆಸ್ ಕಂಡುಕೊಳ್ಳುವಲ್ಲಿ ಯಶಸ್ವುಯಾಗಿದ್ದು ಸದ್ಯ ಬೆಂಗಳೂರಿನ ಎನ್‌ಸಿಎನಲ್ಲಿ ಅಭ್ಯಾಸದಲ್ಲಿ ನಿರತವಾಗಿದ್ದಾರೆ. ಈ ಮೂಲಕ ಕಮ್‌ಬ್ಯಾಕ್‌ಗೆ ಸಜ್ಜಾಗಿದ್ದಾರೆ.

IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್IND vs NZ 3rd T20: ಕಿವೀಸ್ ವಿರುದ್ಧ ಶತಕ ಬಾರಿಸಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಬೂಮ್ರಾ ಇಲ್ಲದಿದ್ದರೂ ಭಾರತದ ವೇಗದ ಬೌಲಿಂಗ್ ವಿಭಾಗ ಬಲಿಷ್ಠವಾಗಿಯೇ ಗೋಚರಿಸುತ್ತಿದೆ. ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಜಯದೇವ್ ಉನಾದ್ಕಟ್ ವೇಗದ ಬೌಲಿಂಗ್‌ನಲ್ಲಿ ಬಲ ನೀಡಲಿದ್ದಾರೆ. ಆದರೆ ಅನುಭವಿ ವೇಗಿ ಬೂಮ್ರಾ ಭಾರತೀಯ ತಂಡದಲ್ಲಿದ್ದರೆ ಎದುರಾಳಿಗಳಿಗೆ ಮತ್ತಷ್ಟು ನಡುಕವುಂಟಾಗುವುದರಲ್ಲಿ ಅನುಮಾನವಿಲ್ಲ.

ಇನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ನಾಗ್ಪುರದಲ್ಲಿ ಅಭ್ಯಾಸ ಶಿಬಿರದಲ್ಲಿ ಭಾಗಿಯಾಗಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಆಟಗಾರರು ನಾಗ್ಪುರಕ್ಕೆ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದ ಆಟಗಾರರು ಈಗಾಗಲೇ ಭಾರತಕ್ಕೆ ಆಗಮಿಸಿದ್ದು ಬೆಂಗಳೂರಿನ ಆಲೂರಿನಲ್ಲಿ ಭಾರತದ ವಿರುದ್ಧದ ಸರಣಿಗೆ ಸಿದ್ಧತೆ ನಡೆಸುತ್ತಿದ್ದಾರೆ.

ಅಹ್ಮದಾಬಾದ್‌ನಲ್ಲಿ ಶುಬ್ಮನ್ ಅಬ್ಬರ: ಅಪರೂಪದ ಸಾಧನೆ ಮಾಡಿದ ಗಿಲ್ಅಹ್ಮದಾಬಾದ್‌ನಲ್ಲಿ ಶುಬ್ಮನ್ ಅಬ್ಬರ: ಅಪರೂಪದ ಸಾಧನೆ ಮಾಡಿದ ಗಿಲ್

ಭಾರತದ ಸ್ಕ್ವಾಡ್ ಹೀಗಿದೆ(ಮೊದಲ 2 ಟೆಸ್ಟ್ ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್

ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್ಶಾ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್

Story first published: Friday, February 3, 2023, 5:50 [IST]
Other articles published on Feb 3, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X