Team India Test Squad: ಭಾರತ ತಂಡದಲ್ಲಿ ಉಪನಾಯಕನ ಸ್ಥಾನ ಕಾಣೆ; ಕಾರಣ ನೀಡಿದ ಹರ್ಭಜನ್ ಸಿಂಗ್

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಬಿಸಿಸಿಐ ಭಾನುವಾರ ಪ್ರಕಟಿಸಿದೆ. ಈಗಾಗಲೇ ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದು 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಇನ್ನು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಬ್ಯಾಟಿಂಗ್ ಕಳಪೆ ಫಾರ್ಮ್ ಮುಂದುವರೆಸಿರುವ ಕೆಎಲ್ ರಾಹುಲ್ ಕುರಿತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಕೆಎಲ್ ರಾಹುಲ್ ಬ್ಯಾಟ್‌ನೊಂದಿಗೆ ಕಳಪೆ ರನ್ ಗಳಿಸುತ್ತಿದ್ದಾರೆ. ಆದರೆ ಹೆಚ್ಚು ಗಮನಾರ್ಹವಾದ ವಿಷಯವೆಂದರೆ ಉಪನಾಯಕನ ಸ್ಥಾನದಿಂದ ಅವರ ಹೆಸರನ್ನು ತೆಗೆದುಹಾಕಲಾಗಿದೆ. ಇದು ಕೆಎಲ್ ರಾಹುಲ್ ಅವರನ್ನು ಮೀರಿ ಆಯ್ಕೆಗಾರರು ಬೇರೊಬ್ಬರನ್ನು ನೋಡಬಹುದು ಎಂಬ ಸೂಚನೆ ನೀಡುತ್ತದೆ ಎಂದಿದ್ದಾರೆ.

ಕೆಎಲ್ ರಾಹುಲ್ ಬದಲಿಗೆ ಶುಭ್ಮನ್ ಗಿಲ್‌ಗೆ ಅವಕಾಶ
ಯುವ ಆಟಗಾರ ಶುಭ್ಮನ್ ಗಿಲ್ ಅವರಿಗೆ ಭಾರತ ತಂಡದಲ್ಲಿ ಅರ್ಹವಾದ ಅವಕಾಶ ಸಿಕ್ಕಿದ್ದು, ಆರಂಭಿಕರ ಕ್ರಮಾಂಕದಲ್ಲಿ ಉತ್ತಮ ರನ್ ಗಳಿಸಲು ಗಿಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ಕೆಎಲ್ ರಾಹುಲ್ ಇದೀಗ ಉಪನಾಯಕರಾಗಿಲ್ಲ. ತಂಡವನ್ನು ಘೋಷಿಸಲಾಗಿದ್ದರೂ, ಕೆಎಲ್ ರಾಹುಲ್ ಅವರನ್ನು ಉಪನಾಯಕನಾಗಿ ಹೆಸರಿಸದಿರಲು ಕಾರಣವೆಂದರೆ ಕೆಎಲ್ ರಾಹುಲ್ ಬದಲಿಗೆ ಶುಭ್ಮನ್ ಗಿಲ್ ಅವರನ್ನು ಮುಂದಿನ ಪಂದ್ಯಕ್ಕೆ ಆಯ್ಕೆ ಮಾಡಲಾಗುವುದು ಎಂದು ನಾನು ಭಾವಿಸುತ್ತೇನೆ," ಎಂದಿಉ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತಿಳಿಸಿದ್ದಾರೆ.
"ಶುಭ್ಮನ್ ಗಿಲ್ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಆತನಿಗೆ ಖಂಡಿತವಾಗಿಯೂ ಅವಕಾಶ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಕೆಎಲ್ ರಾಹುಲ್ ಅವರಿಂದ ಉಪನಾಯಕನ ಸ್ಥಾನ ಕಿತ್ತುಕೊಂಡಿರುವುದು ಅವರು ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ತೋರಿಸುತ್ತದೆ," ಎಂದು 42 ವರ್ಷದ ಹರ್ಭಜನ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಎಲ್ ರಾಹುಲ್ ಗುಣಮಟ್ಟದ ಆಟಗಾರ, ಯಾವುದೇ ಅನುಮಾನವಿಲ್ಲ
ಕೆಎಲ್ ರಾಹುಲ್ ಬಗ್ಗೆ ಹೇಳುವುದಾದರೆ, ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಸಮಯವನ್ನು ತೆಗೆದುಕೊಳ್ಳಬೇಕು ಮತ್ತು ಆತ ಬ್ಯಾಟಿಂಗ್ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ದೇಶೀಯ ಕ್ರಿಕೆಟ್‌ಗೆ ಹಿಂತಿರುಗಬೇಕು ಎಂದು ಹರ್ಭಜನ್ ಸಿಂಗ್ ಸಲಹೆ ನೀಡಿದರು. ಕೆಎಲ್ ರಾಹುಲ್ ವಿಶ್ವದ ಅಗ್ರಮಾನ್ಯ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ. ಆದರೆ ಸ್ವಲ್ಪ ಸಮಯವನ್ನು ನೀಡಬೇಕು ಎಂದು ಹೇಳಿದರು.
"ನಾನು ಕೆಎಲ್ ರಾಹುಲ್ ಅವರನ್ನು ವಿಶ್ವ ಕ್ರಿಕೆಟ್‌ನ ಅಗ್ರ ಬ್ಯಾಟರ್‌ಗಳಲ್ಲಿ ಒಬ್ಬರೆಂದು ಪರಿಗಣಿಸುತ್ತೇನೆ. ಕೆಎಲ್ ರಾಹುಲ್ ಭಾರತ ತಂಡವನ್ನು ಹೊರತುಪಡಿಸಿ, ಸ್ವಲ್ಪ ಬಿಡುವು ಮಾಡಿಕೊಂಡು ದೇಶೀಯ ಕ್ರಿಕೆಟ್‌ನಲ್ಲಿ ಆಡುವುದು, ರನ್ ಗಳಿಸಲು ಪ್ರಯತ್ನಿಸಬೇಕು. ಆತ್ಮವಿಶ್ವಾಸವನ್ನು ಮರಳಿ ಪಡೆಯುವುದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ. ನಂತರ ಅವನನ್ನು ಮರಳಿ ರಾಷ್ಟ್ರೀಯ ತಂಡಕ್ಕೆ ತನ್ನಿ. ಅವನು ಗುಣಮಟ್ಟದ ಆಟಗಾರ, ಅದರಲ್ಲಿ ಯಾವುದೇ ಸಂದೇಹವಿಲ್ಲ," ಎಂದು ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಸಲಹೆ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ 3 ಮತ್ತು 4ನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications