
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಂದಿನ 27ನೇ ತಾರೀಕಿನಿಂದ ಸೀಮಿತ ಓವರ್‌ಗಳ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಮೊದಲಿಗೆ ಮೂರು ಏಕದಿನ ಪಮದ್ಯಗಳು ನಡೆಯಲಿದ್ದು ಆ ಭಲಿಕ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಈ ಆರು ಪಂದ್ಯಗಳ ಪೈಕಿ ಐದು ಪಂದ್ಯಗಳ ಟಿಕೆಟ್ ಸಂಪೂರ್ಣವಾಗಿ ಮಾರಾಟವಾಗಿದೆ.
2 ಮತ್ತು 3ನೇ ಏಕದಿನ ಪಂದ್ಯ ಸಿಡ್ನಿ ಹಾಗೂ ಮನಿಕಾ ಓವಲ್‌ನಲ್ಲಿ ನಡೆಯಲಿದ್ದು ಈ ಪಂದ್ಯಗಳ ಟಿಕೆಟ್ ಸಂಪೂರ್ಣವಾಗಿ ಮಾರಾಟವಾಗಿದೆ. ಆದರೆ ನೆವೆಂಬರ್ 27ರಿಮದು ನಡೆಯಲಿರುವ ಮೊದಲ ಪಂದ್ಯದ ಟಿಕೆಟ್‌ಗಳು ಕೆಲ ಟಿಕೆಟ್‌ಗಳು ಮಾತ್ರೇ ಉಳಿದುಕೊಂಡಿದ್ದು ಶೀಘ್ರದಲ್ಲೇ ಸಂಪೂರ್ಣವಾಗಿ ಮಾರಾಟವಾಗುವ ನಿರೀಕ್ಷೆಯಿದೆ.
ಟಿ20 ಸರಣಿಯ ಪಮದ್ಯಗಳು ಕೂಡ ಮನುಕಾ ಓವರ್ ಹಾಗೂ ಎಸ್‌ಸಿಜಿಯಲ್ಲಿ ನಡೆಯಲಿದ್ದು ಎಲ್ಲಾ ಪಂದ್ಯಗಳ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿದೆ ಎಂದು ಸಿಎ ಮಾಹಿತಿಯನ್ನು ನೀಡಿದೆ. ಈ ಸರಣಿಗಾಗಿ ಕ್ರೀಡಾಂಗಣದ ಸಾಮರ್ಥ್ಯದ ಅರ್ಧದಷ್ಟು ಪ್ರೇಕ್ಷಕರಿಕೆ ಅವಕಾಶವನ್ನು ನೀಡಲಾಗುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಪುನರಾಗಮನವನ್ನು ಕ್ರಿಕೆಟ್ ಅಭಿಮಾನಿಗಳು ಕಾತುರತೆಯಿಂದ ಕಾಯುತ್ತಿದ್ದಾರೆ. ಅವರಿಗಾಗಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಕಾರ್ಯಕಾರಿಣಿ ನಿರ್ವಾಹಕ ಆಂಟೊನಿ ಎವಿರಾರ್ಡ್ ಮಾಹಿತಿಯನ್ನು ನೀಡಿದ್ದಾರೆ.
ಕೊರೊನಾ ವೈರಸ್ ಬಳಿಕ ಟೀಮ್ ಇಂಡಿಯಾ ಆಡುತ್ತಿರುವ ಮೊದಲ ಕ್ರಿಕೆಟ್ ಸರಣಿ ಇದಾಗಿದೆ. ಆಸ್ಟ್ರೇಲಿಯಾ ಕೂಡ ಪ್ರೇಕ್ಷಕರ ಸಮ್ಮುಖದಲ್ಲಿ ಆಎಉವ ಮೊದಲ ಕ್ರಿಕೆಟ್ ಪಂದ್ಯಾವಳಿ ಇದಾಗಿರಲಿದೆ. ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳೊಮದಿಗೆ ಪ್ರೇಕ್ಷಕರಿಗೆ ಕ್ರೀಡಾಂಗಣದಲ್ಲಿ ಅವಕಾಶವನ್ನು ನೀಡಲಾಗುತ್ತಿದೆ.