Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

BGT 2023: ಆಸ್ಟ್ರೇಲಿಯಾಗೆ ಆಘಾತ; 2ನೇ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜ ಬ್ಯಾಟಿಂಗ್ ಅನುಮಾನ!

India vs Australia: Usman Khawaja doubtful to bat on last day on Ahmedabad test

ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಪಂದ್ಯದ ಅಂತಿಮ ದಿನದಾಟಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೆಲಿಯಾ ತಂಡ ಬ್ಯಾಟಿಂಗ್‌ನಲ್ಲಿ ಯಶಸ್ಸು ಪಡೆಯಲು ಕಾರಣವಾದ ಉಸ್ಮಾನ್ ಖವಾಜಾ ಎರಡನೆ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿಯುವುದು ಅನುಮಾನ ಎನ್ನಲಾಗಿದೆ. ಉಸ್ಮಾನ್ ಖವಾಜ ಗಾಯಗೊಂಡಿದ್ದು ನಾಲ್ಕನೇ ದಿನ ಫೀಲ್ಡಿಂಗ್‌ಗೂ ಇಳಿದಿರಲಿಲ್ಲ. ಹೀಗಾಗಿ ಅಂತಿಮ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ನಡೆಸುವುದು ಕೂಡ ಅನುಮಾನ ಮೂಡಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆರಂಭಿಸಿದಾಗ ಉಸ್ಮಾನ್ ಖವಾಜಾ ಆರಂಭಿಕನಾಗಿ ಕಣಕ್ಕಿಳಿದಿಲ್ಲ. ಟ್ರೆವಿಸ್ ಹೆಡ್ ಜೊತೆಗೆ ಮ್ಯಾಥ್ಯೂ ಕನ್ನೇಮನ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅಲ್ಲದೆ ಆಸ್ಟ್ರೇಲಿಯಾ ಮೊದಲ ವಿಕೆಟ್ ಕಳೆದುಕೊಂಡ ಬಳಿಕವೂ ಮ್ಯಾರ್ನಸ್ ಲ್ಯಾಬುಶೈನ್ ಅವರೇ ಕಣಕ್ಕೆ ಇಳಿದಿದ್ದಾರೆ.

ಅಂದಹಾಗೆ ಉಸ್ಮಾನ್ ಖವಾಜಾ ಫಿಲ್ಡಿಂಗ್ ಸಂದರ್ಭದಲ್ಲಿ ಗಾಯಗೊಂಡಿದ್ದು ಬಳಿಕ ಭಾನುವಾರ ಅಂತಿಮ ಹಂತದಲ್ಲಿ ಫೀಲ್ಡಿಂಗ್ ನಡೆಸಲು ಕೂಡ ಮೈದಾನಕ್ಕೆ ಇಳಿದಿರಲಿಲ್ಲ. ಬೌಂಡರಿ ಗೆರೆಯ ಬಳಿಕ ಕ್ಯಾಚ್ ಹಿಡಿಯುವ ವಿಫಲ ಯತ್ನ ನಡೆಸಿದ ಬಳಿಕ ಉಸ್ಮಾನ್ ಖವಾಜ ಗಾಯಗೊಂಡು ಮೈದಾನ ತೊರೆದಿದ್ದರು.

ಆಸ್ಟ್ರೇಲಿಯಾ ಮಾತ್ರವಲ್ಲದೆ ಟೀಮ್ ಇಂಡಿಯಾ ಕೂಡ ಈ ಪಂದ್ಯದಲ್ಲಿ ಗಾಯದ ಕಾರಣದಿಂದಾಗಿ ಹಿನ್ನಡೆ ಅನುಭವಿಸಿದೆ. ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಐಯ್ಯರ್ ಕೂಡ ಎರಡನೇ ದಿನದಾಟದ ಫೀಲ್ಡಿಂಗ್ ವೇಳೆ ಬೆನ್ನುನೋವಿಗೆ ಒಳಗಾಗಿದ್ದರು. ಹೀಗಾಗಿ ಬಳಿಕ ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಿರಲಿಲ್ಲ.

ಇನ್ನು ಉಸ್ಮಾನ್ ಖವಾಜಾ ಆಸ್ಟ್ರೇಲಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದರು. ಬರೊಬ್ಬರಿ 422 ಎಸೆತಗಳನ್ನು ಎದುರಿಸಿದ ಖವಾಜ 180 ರನ್‌ಗಳಿಸಿ ಔಟಾದರು. ಇನ್ನು ಈ ಸರಣಿಯುದ್ದಕ್ಕೂ ಖವಾಜ ಅದ್ಭತ ಬ್ಯಾಟಿಂಗ್ ಪ್ರದರ್ಶಿಸಿದ್ದು ಸರಣಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ.

ಇನ್ನು ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಬ್ಮನ್ ಗಿಲ್ ಅವರ ಭರ್ಜರಿ ಶತಕದ ನೆರವಿನಿಂದ ಭರ್ಜರಿ ಮುನ್ನಡೆ ಪಡೆದುಕೊಂಡಿದೆ. ವಿರಾಟ್ ಕೊಹ್ಲಿ ಸುದೀರ್ಘ ಕಾಲದ ಬಳಿಕ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದು 186 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ 570 ರನ್‌ಗಳಿಸಿದ್ದು 91 ರನ್‌ಗಳ ಮುನ್ನಡೆ ಸಾಧಿಸಿದೆ. ಕೊನೆಯ ದಿನದ ಪ್ರದರ್ಶನ ಈಗ ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್

ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುಹ್ನೆಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್

Story first published: Monday, March 13, 2023, 10:56 [IST]
Other articles published on Mar 13, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+