ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ವೃತ್ತಿ ಜೀವನದ ಎರಡು ಅತಿ ದೊಡ್ಡ ಮೈಲಿಗಲ್ಲಿನ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ

India vs Australia: Virat Kohli eye on major career milestones ahead of T20I series

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಎರಡು ದ್ವಿಪಕ್ಷೀಯ ಸರಣಿಯಲ್ಲಿ ಭಾಗಿಯಾಗಲಿದೆ. ಅದರಲ್ಲಿ ಒಂದು ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ. ಅದಾದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಭಾರತ ತಂಡ ಮೂರು ಪಂದ್ಯಗಳ ಚುಟುಕು ಸರಣಿಯಲ್ಲಿ ಭಾಗಿಯಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಮೊದಲಿಗೆ ಆರಂಭವಾಗಲಿದ್ದು ಮುಂದಿನ ಮಂಗಳವಾರ ಈ ಸರಣಿಗೆ ಚಾಲನೆ ದೊರೆಯಲಿದೆ.

ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಸಾಖಷ್ಟು ಕುತೂಹಲ ಮೂಡಿಸಿದ್ದು ಎರಡು ತಂಡಗಳ ಆಟಗಾರರು ವಿಶ್ವಕಪ್‌ಗೆ ಮುನ್ನ ತಮ್ಮ ಲಯವನ್ನು ಪರೀಕ್ಷಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಅದರಲ್ಲೂ ಆಸ್ಟ್ರೇಲಿಯಾದಲ್ಲಿಯೇ ಈ ಬಾರಿಯ ವಿಶ್ವಕಪ್ ಟೂರ್ನಿ ನಡೆಯುತ್ತಿರುವ ಕಾರಣ ಭಾರತಕ್ಕೆ ಈ ತಂಡವನ್ನು ಎದುರಿಸಲು ಮಹತ್ವದ ಟೂರ್ನಿಗೂ ಮುನ್ನ ಸಿಕ್ಕ ಅವಕಾಶ ಟೂರ್ನಿಯ ಸಂದರ್ಭದಲ್ಲಿ ಅನುಕೂವಾಗಬಹುದು ಎಂಬುದು ಲೆಕ್ಕಾಚಾರ.

ವಿದೇಶಿ ಲೀಗ್‌ಗಳಲ್ಲಿ ಆಡಲು ನ್ಯೂಜಿಲೆಂಡ್‌ ತಂಡದಿಂದ ದೂರವುಳಿದ ಆಲ್‌ರೌಂಡರ್ ಜಿಮ್ಮಿ ನೀಶಮ್ವಿದೇಶಿ ಲೀಗ್‌ಗಳಲ್ಲಿ ಆಡಲು ನ್ಯೂಜಿಲೆಂಡ್‌ ತಂಡದಿಂದ ದೂರವುಳಿದ ಆಲ್‌ರೌಂಡರ್ ಜಿಮ್ಮಿ ನೀಶಮ್

ಈ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡು ಮಹತ್ವದ ಮೈಲಿಗಲ್ಲುಗಳನ್ನು ಸಾಧಿಸುವ ಅವಕಾಶವಿದೆ. ಹಾಗಾದರೆ ಆ ಎರಡು ಮೈಲಿಗಲ್ಲುಗಳು ಯಾವುದು? ಮುಂದೆ ಓದಿ..

ಅದ್ಭುತ ಲಯದಲ್ಲಿರುವ ವಿರಾಟ್ ಕೊಹ್ಲಿ

ಅದ್ಭುತ ಲಯದಲ್ಲಿರುವ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸುದೀರ್ಘ ಕಾಲದಿಂದ ಫಾರ್ಮ್ ಕೊರತೆಯನ್ನು ಅನುಭವಿಸುತ್ತಿದ್ದರು. ಆದರೆ ಕಳೆದ ಏಷ್ಯಾಕಪ್ ಟೂರ್ನಿಯ ಸಂದರ್ಭದಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್‌ನಿಂದ ಭರ್ಜರಿ ರನ್ ಹರಿದುಬಂದಿದೆ. ಈ ಸಂದರ್ಭದಲ್ಲಿ ಅವರು ಸುದೀರ್ಘ ಎರಡೂವರೆ ವರ್ಷಗಳಿಂದ ಕಾಯುತ್ತಿದ್ದ ಶತಕವನ್ನು ಕೂಡ ಬಾರಿಸಿದ್ದು ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವಕಪ್ ಸನಿಹದಲ್ಲಿರುವ ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಟಿ20 ಕ್ರಿಕೆಟ್‌ನಲ್ಲಿ ಭಾರತೀಯನಾಗಿ ಪ್ರಪ್ರಥಮ ಸಾಧನೆಗೆ ಸಜ್ಜು

ಟಿ20 ಕ್ರಿಕೆಟ್‌ನಲ್ಲಿ ಭಾರತೀಯನಾಗಿ ಪ್ರಪ್ರಥಮ ಸಾಧನೆಗೆ ಸಜ್ಜು

ವಿರಾಟ್ ಕೊಹ್ಲಿ ಕ್ರಿಕೆಟ್‌ನಲ್ಲಿ ಸಾಕಷ್ಟು ದಾಖಲೆಗಳನ್ನು ಮಾಡಿದ್ದಾರೆ. ಇದೀಗ ಈ ದಾಖಲೆಗಳ ಪಟ್ಟಿಗೆ ಮತ್ತೊಂದು ಸೇರಿಕೊಳ್ಳುವ ಅವಕಾಶವಿದೆ. ಟಿ20 ಮಾದರಿಯಲ್ಲಿ ವಿರಾಟ್ ಕೊಹ್ಲಿ 11,000 ರನ್‌ಗಳಿಸುವ ಸನಿಹದಲ್ಲಿದ್ದಾರೆ. ಈ ಸಾಧನೆ ಮಾಡಲು ವಿರಾಟ್ ಕೊಹ್ಲಿಗೆ ಇನ್ನು ಕೇವಲ 98 ರನ್‌ಗಳ ಅಗತ್ಯವಿದೆ. ಆಸಿಸ್ ವಿರುದ್ಧದ ಸರಣಿಯಲ್ಲಿ ಇದು ಸಾಧ್ಯವಾದರೆ ಈ ಸಾಧನೆ ಮಾಡಿದ ಭಾರತದ ಮೊದಲ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ ವಿರಾಟ್ ಕೊಹ್ಲಿ. ಸದ್ಯ 349 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 10902 ರನ್‌ಗಳನ್ನು ಗಳಿಸಿದ್ದಾರೆ. ಒಟ್ಟು ಆರು ಶತಕಗಳನ್ನು ಚುಟುಕು ಮಾದರಿಯಲ್ಲಿ ಗಳಿಸಿರುವ ವಿರಾಟ್ ಕೊಹ್ಲಿ 80 ಅರ್ಧ ಶತಕ ಗಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೊಂದು ಸಾಧನೆ

ಇನ್ನು 11000 ರನ್‌ಗಳ ಸಾಧನೆಯ ಹೊರತಾಗಿ ಮತ್ತೊಂದು ಪ್ರಮುಖ ಸಾಧನೆ ಮಾಡುವ ಅವಕಾಶವೂ ವಿರಾಟ್ ಕೊಹ್ಲಿಗೆ ಇದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರವಾಗಿ ಅತಿ ಹೆಚ್ಚು ರನ್‌ಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಅವಕಾಶ ವಿರಾಟ್ ಕೊಹ್ಲಿಗೆ ಇದೆ. ಸದ್ಯ ಈ ಸ್ಥಾನದಲ್ಲಿ ಕನ್ನಡಿಗ ರಾಹುಲ್ ದ್ರಾವಿಡ್ ಇದ್ದು 24,064 ರನ್‌ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಈ ಸಾಧನೆ ಮಾಡಲು 62 ರನ್‌ಗಳ ಅಗತ್ಯವಿದೆಯಷ್ಟೇ. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನನಲ್ಲಿ ವಿರಾಟ್ ಕೊಹ್ಲಿ 24,002 ರನ್‌ಗಳಿಸಿದ್ದಾರೆ.

ಆಸಿಸ್ ವಿರುದ್ಧದ ಸರಣಿ ವೇಳಾಪಟ್ಟಿ

ಆಸಿಸ್ ವಿರುದ್ಧದ ಸರಣಿ ವೇಳಾಪಟ್ಟಿ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಸೆಪ್ಟೆಂಬರ್ 20 ಮಂಗಳವಾರದಿಂದ ಆರಂಭವಾಗಲಿದ್ದು ಸೆಪ್ಟೆಂಬರ್ 25 ಭಾನುವಾರದವರೆಗೆ ನಡೆಯಲಿದೆ. ಮೊಹಾಲಿ, ನಾಗ್ಪುರ ಮತ್ತು ಹೈದರಾಬಾದ್ ಮೂರು ತಾಣಗಳಲ್ಲಿ ಈ ಪಂದ್ಯಗಳು ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ

Story first published: Saturday, September 17, 2022, 10:58 [IST]
Other articles published on Sep 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X