India vs Australia: ಉಮೇಶ್ ಯಾದವ್ ಸಿಕ್ಸರ್‌ಗೆ ಬೆಚ್ಚಿಬಿದ್ದ ಕೊಹ್ಲಿ!: ವಿಡಿಯೋ ವೈರಲ್

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಕಳಪೆ ಪ್ರದರ್ಶನ ನೀಡಿದೆ. ಇದರ ಪರಿಣಾಮವಾಗಿ ಟೀಮ್ ಇಂಡಿಯಾ ಕೇವಲ 109 ರನ್‌ಗಳಿಗೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ತಂಡ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ. ಆದರೆ ಭಾರತದ ಇನ್ನಿಂಗ್ಸ್‌ನ ಅಂತ್ಯದಲ್ಲಿ ಉಮೇಶ್ ಯಾದವ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಲ ಕಾಲ ಮನರಂಜಿಸಿದರು.
ಉಮೇಶ್ ಯಾದವ್ ಕೇವಲ 13 ಎಸೆತಗಳಲ್ಲಿ 17 ರನ್ ಬಾರಿಸಿ ಗಮನಸೆಳೆದರು. ಈ ಸಂದರ್ಭದಲ್ಲಿ ಅವರು ಎರಡು ಸಿಕ್ಸರ್ ಸಿಡಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅದರಲ್ಲೂ ಮರ್ಫಿ ಎಸೆದ ಎಸೆತವೊಂದನ್ನು ಭರ್ಜರಿಯಾಗಿ ಸಿಕ್ಸರ್‌ಗೆ ಅಟ್ಟಿದ್ದರು ಉಮೇಶ್ ಯಾದವ್. ಈ ಭರ್ಜರಿ ಹೊಡೆತಕ್ಕೆ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ನೀಡಿದ ಪ್ರತಿಕ್ರಿಯೆ ಸಾಕಷ್ಟು ವೈರಲ್ ಆಗಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟರ್‌ಗಳೆಲ್ಲಾ ಅಲ್ಪ ಮೊತ್ತಕ್ಕೆ ಫೆವಿಲಿಯನ್‌ಗೆ ಸೇರಿಕೊಂಡಿದ್ದರು. ತಂಡ ನೂರರ ಗಡಿದಾಟುವುದು ಕೂಡ ಕಷ್ಟ ಎಂಬ ಸ್ಥಿತಿಯಿತ್ತು. ಈ ಹಂತದಲ್ಲಿ ಬ್ಯಾಟಿಂಗ್‌ಗೆ ಇಳಿದ ಉಮೇಶ್ ಯಾದವ್ ರನ್ ವೇಗವನ್ನು ಹೆಚ್ಚಿಸಿ ಕೆಳ ಹಂತದಲ್ಲಿ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಈ ಸಂದರ್ಭದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ಗಮನಸೆಳೆದಿದ್ದಾರೆ. ಉಮೇಶ್ ಯಾದವ್ ಸಿಕ್ಸರ್ ಸಿಡಿಸಿದ ರೀತಿಗೆ ಫೆವಿಲಿಯನ್‌ನಲ್ಲಿದ್ದ ವಿರಾಟ್ ಕೊಹ್ಲಿ ಕೈ ಎತ್ತಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೊಹ್ಲಿಯ ಈ ಪ್ರತಿಕ್ರಿಯೆ ಅಭಿಮಾನಿಗಳ ಮನಗೆದ್ದಿದೆ.
ಅಂದ ಹಾಗೆ ಇಂದೋರ್ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಸ್ವತಃ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ನಾಯಕನ ನಿರ್ಧಾರವನ್ನು ಸಮರ್ಥನೆ ಮಾಡಿಕೊಳ್ಳುವಂತೆ ಯಾವ ಆಟಗಾರನಿಂದಲೂ ಪ್ರದರ್ಶನ ಬಾರಲಿಲ್ಲ. ಸ್ವತಃ ರೋಹಿತ್ ಶರ್ಮಾ ಕೂಡ ವೈಫಲ್ಯ ಕಂಡಿದ್ದಾರೆ. ಆರಂಭದಿಂದಲೂ ಸ್ಪಿನ್‌ಗೆ ಅದ್ಭುತವಾಗಿ ಸ್ಪಂದಿಸುತ್ತಿರುವ ಪಿಚ್‌ನಲ್ಲಿ ಆಸಿಸ್ ನಾಯಕ ಸ್ಟೀವ್ ಸ್ಮಿತ್ ತಮ್ಮ ಬೌಲರ್‌ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ಆರಂಭಿಕ ಯಶಸ್ಸು ಸಾಧಿಸಿದ್ದಾರೆ.
ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (WK), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (WK), ಮಿಚೆಲ್ ಸ್ಟಾರ್ಕ್, ಅಥಾನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications