For Quick Alerts
ALLOW NOTIFICATIONS  
For Daily Alerts
 

Ind vs Aus : ಆಸ್ಟ್ರೇಲಿಯಾದ ಇಬ್ಬರು ಸ್ಟಾರ್ ಆಟಗಾರರು ಸೀಮಿತ ಓವರ್‌ಗಳ ಸರಣಿಯಿಂದ ಔಟ್

India vs Australia: Warner, Cummins to miss remaining limited-overs games

ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಆದರೆ ಈ ಮಧ್ಯೆ ದೊಡ್ಡ ಆಘಾತವೊಂದು ಆಸ್ಟ್ರೇಲಿಯಾ ತಂಡಕ್ಕೆ ಎದುರಾಗಿದೆ, ಆಸ್ಟ್ರೇಲಿಯಾ ತಂಡದ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಏಕದಿನ ಸರಣಿಯ ಅಂತಿಮ ಪಂದ್ಯ ಹಾಗೂ ಟಿ20 ಪಂದ್ಯಗಳ ಸರಣಿಯಿಂದ ಹೊರಬಿದ್ದಿದ್ದಾರೆ. ಇದರ ಜೊತೆಗೆ ಪ್ಯಾಟ್‌ ಕಮ್ಮಿನ್ಸ್ ಕೂಡ ಮುಂದಿನ ವೈಟ್ ಬಾಲ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ

ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯ ಫೀಲ್ಡಿಂಗ್ ಸಂದರ್ಭದಲ್ಲಿ ಡೇವಿಡ್ ವಾರ್ನರ್ ಗಾಯಗೊಂಡಿದ್ದರು. ತೊಡೆಸಂಧು ಒತ್ತಡಕ್ಕೆ ಒಳಗಾಗಿ ಡೇವಿಡ್ ವಾರ್ನರ್ ತಕ್ಷಣವೇ ಮೈದಾನವನ್ನು ತೊರೆದಿದ್ದರು. ಆದರೆ ಅವರು ಮುಂದಿನ ಸೀಮಿತ ಓವರ್‌ಗಳ ಪಂದ್ಯಗಳಿಂದ ಹೊರಗುಳಿಯುವುದನ್ನು ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ. ಇದೇ ಸಂದರ್ಭಣದಲ್ಲಿ ವಾರ್ನರ್ ಟೆಸ್ಟ್ ಸರಣಿಗೂ ಲಭ್ಯರಾಗುವುದು ಅನುಮಾನ ಎನ್ನಲಾಗುತ್ತಿದೆ.

ಡೇವಿಡ್ ವಾರ್ನರ್ ಭಾರತದ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ನಾಯಕ ಆರೋನ್ ಫಿಂಚ್ ಜೊತೆ ಸೇರಿ ಶತಕದ ಜೊತೆಯಾಟವನ್ನು ಸೀಡಿದ್ದರು. ಈ ಎರಡು ಪಂದ್ಯಗಳಲ್ಲೂ ವಾರ್ನರ್ ಅರ್ಧ ಶತಕವನ್ನು ಸಿಡಿಸಿ ಮಿಂಚಿದ್ದರು.

ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಅವರು ಮುಂದಿನ ಒಂದು ಏಕದಿನ ಹಾಘೂ ಮೂರು ಟಿ20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂಬುದು ಕೂಡ ಖಚಿತವಾಗಿದೆ. ಆದರೆ ಪ್ಯಾಟ್ ಕಮ್ಮಿನ್ಸ್ ಯಾವುದೇ ಗಾಯದ ಕಾರಣಕ್ಕೆ ಹೊರಗುಳಿಯುತ್ತಿಲ್ಲ. ಟೆಸ್ಟ್ ಸರಣಿಗೂ ಮುನ್ನ ಕಮ್ಮಿನ್ಸ್‌ಗೆ ವಿಶ್ರಾಂತಿಯನ್ನು ನಿಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇನ್ನು ಡೇವಿಡ್ ವಾರ್ನರ್ ಸ್ಥಾನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಡಿ ಆರ್ಕಿ ಶಾರ್ಟ್ ಅವರನ್ನು ಟಿ20 ಸ್ಥಾನಕ್ಕೆ ಬದಲಿ ಆಟಗಾರನಾಗಿ ಸೇರ್ಪಡೆಗೊಳಿಸಿದೆ. ಶೀಘ್ರದಲ್ಲೇ ಶಾರ್ಟ್ ಆಸ್ಟ್ರೇಲಿಯಾ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆದರೆ ಪ್ಯಾಟ್ ಕಮ್ಮಿನ್ಸ್ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡದೆ ಸ್ಥಾನ ಖಾಲಿಬಿಟ್ಟಿದೆ.

Story first published: Monday, November 30, 2020, 10:00 [IST]
Other articles published on Nov 30, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+