ಅಕ್ಷರ್ ಪಟೇಲ್ ವಿಚಾರವಾಗಿ ತಪ್ಪು ಮಾಡಿತಾ ಭಾರತ?: ಟೀಮ್ ಇಂಡಿಯಾ ಎಡವಟ್ಟನ್ನು ಬೊಟ್ಟು ಮಾಡಿದ ಜಾಫರ್!

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾತ ಸೋಲಿನ ಅಂಚಿನಲ್ಲಿದೆ. ಎರಡೂ ಇನ್ನಿಂಗ್ಸ್‌ನಲ್ಲಿಯೂ ಕಳಪೆ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡ ಗೆಲ್ಲಲು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 75 ರನ್‌ಗಳ ಗುರಿ ನಿಗದಿಪಡಿಸಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಚೇತೇಶ್ವರ್ ಪೂಜಾರ ಅರ್ಧ ಶತಕ ಸಿಡಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಟೀಮ್ ಇಂಡಿಯಾ ಪರವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲೇ ಇಲ್ಲ.
ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಮಹತ್ವದ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದಾರೆ. ಟೀಮ್ ಇಂಡಿಯಾ ಇಂದೋರ್ ಪಂದ್ಯದಲ್ಲಿ ಅಕ್ಷರ್ ಪಟೇಲ್ ವಿಚಾರವಾಗಿ ತಪ್ಪು ನಡೆಯನ್ನು ತೆಗೆದುಕೊಂಡಿತು ಎಂದಿದ್ದಾರೆ ವಾಸಿಂ ಜಾಫರ್. ಈ ಸರಣಿಯಲ್ಲಿ ಅಕ್ಷರ್ ಪಟೇಲ್ ಪ್ರದರ್ಶಿಸಿರುವ ಬ್ಯಾಟಿಂಗ್ ಕೌಶಲ್ಯವನ್ನು ಮುಂದಿಟ್ಟು ಈ ಮಾತನ್ನು ಹೇಳಿದ್ದಾರೆ ವಾಸಿಂ ಜಾಫರ್.

ಕೆಳ ಕ್ರಮಾಂಕದಲ್ಲಿ ಅಕ್ಷರ್ ಬ್ಯಾಟಿಂಗ್
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಅಕ್ಷರ್ ಪಟೇಲ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ಅಜೇಯವಾಗಿ ಉಳಿದಿದ್ದಾರೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿಯೂ ಅಕ್ಷರ್ ಪಟೇಲ್ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು. ಅದನ್ನು ಪರಿಗಣಿಸಿ ಅಕ್ಷರ್ ಪಟೇಲ್ ಅವರನ್ನು ಬ್ಯಾಟಿಂಗ್‌ನಲ್ಲಿ ಮೆಲಿನ ಕ್ರಮಾಂಕದಲ್ಲಿ ಕಳುಹಿಸಬಹುದಾಗಿತ್ತು ಎಂಬ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ ವಾಸಿಂ ಜಾಫರ್.

ಜಾಫರ್ ಹೇಳಿದ್ದೇನು?
"ಭಾರತದ ಥಿಂಕ್ ಟ್ಯಾಂಕ್ ಅಕ್ಷರ್ ಪಟೇಲ್ ಅವರನ್ನು ಎರಡು ಇನ್ನಿಂಗ್ಸ್‌ನಲ್ಲಿಯೂ ಮೇಲಿನ ಕ್ರಮಾಂಕದಲ್ಲಿ ಕಳುಹಿಸದೆ ಲಯ ಕಳೆದುಕೊಂಡಿದೆ. ಎರಡು ಇನ್ನಿಂಗ್ಸ್ನಲ್ಲಿಯೂ ಅವರು ಜೊತೆಗಾರನಿಲ್ಲದೆ ಉಳಿಯಬೇಕಾಯಿತು. ಆತ 6 ಅಥವಾ 7ನೇ ಕ್ರಮಾಂಕದಲ್ಲಿ ಆಡಬೇಕು ಅಂಥಾ ಫಾರ್ಮ್‌ನಲ್ಲಿದ್ದುಕೊಂಡು 9ನೇ ಕ್ರಮಾಂಕದಲ್ಲಿ ಅಲ್ಲ" ಎಂದಿದ್ದಾರೆ ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್.

ಆಸ್ಟ್ರೇಲಿಯಾ ಮುಂದೆ ಸುಲಭ ಸವಾಲು
ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಅತ್ಯಂತ ಸುಲಭ ಸವಾಲನ್ನು ನೀಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲಲು ಕೇವಲ 75 ರನ್‌ಗಳ ಅಗತ್ಯ ಮಾತ್ರವೇ ಇದೆ. ಇನ್ನೂ ಮೂರು ದಿನಗಳ ಸಂಪೂರ್ಣ ಆಟ ಬಾಕಿಯಿದ್ದು ಭಾರತ ಪಂದ್ಯವನ್ನು ಉಳಿಸಿಕೊಳ್ಳಬೇಕಾದರೆ ಪವಾಡದ ನಿರೀಕ್ಷೆಯಲ್ಲಿದ್ದಾರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು. ನಾಯಕ ರೋಹಿತ್ ಶರ್ಮಾ ಸೇರಿದಂತೆ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಪಿನ್ ದಾಳಿಗೆ ಸಂಪೂರ್ಣವಾಗಿ ನಿರುತ್ತರವಾಗಿದ್ದರು.

ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥಾನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications