ICC Women's World Cup: ಭಾರತ, ಆಸ್ಟ್ರೇಲಿಯಾ ಬಿಗ್ ಫೈಟ್: ಸ್ಮೃತಿ ಮೇಲೆ ಕಣ್ಣು
ವಿಶಾಖಪಟ್ಟಣಂ: ಭಾರತದಲ್ಲಿ ನಡೆಯುತ್ತಿರುವ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ರೋಚಕ ಘಟ್ಟದತ್ತ ಮುಖ ಮಾಡಿದೆ. ಈ ಸಾಲಿನ ವಿಶ್ವಕಪ್‌ನಲ್ಲಿ ಬಿಗ್ ಮ್ಯಾಚ್ ಎಂದೇ ಗುರುತಿಸಿಕೊಂಡಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಭಾರತದ್ದಾಗಿದೆ. ಇನ್ನು ಆಸ್ಟ್ರೇಲಿಯಾ ಈ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಲು ಪ್ಲ್ಯಾನ್ ಮಾಡಿಕೊಂಡಿದೆ.
ಉಭಯ ತಂಡದಲ್ಲೂ ಸ್ಟಾರ್ ಆಟಗಾರ್ತಿಯರು ಇದ್ದು ಎಲ್ಲರ ಚಿತ್ತ ಕದ್ದಿದ್ದಾರೆ. ಈ ವಿಶ್ವಕಪ್‌ಗೂ ಮುನ್ನ ನಡೆದ ಏಕದಿನ ಸರಣಿಯಲ್ಲಿ ಎರಡೂ ತಂಡಗಳು ಶ್ರೇಷ್ಠ ಪ್ರದರ್ಶನ ನೀಡಿದ್ದವು. ಭಾನುವಾರವೂ ಇದೇ ರೀತಿಯ ಪ್ರದರ್ಶನವನ್ನು ಅಭಿಮಾನಿಗಳು ಎದುರು ನೋಡ್ತಾ ಇದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಕಂಡ ಸೋಲಿನಿಂದ ಪಾಠ ಕಲಿತಿರುವ ಭಾರತ, ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ.

ಇದೇ ಮೈದಾನದಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಪಂದ್ಯವನ್ನು ಕೈ ಚೆಲ್ಲಿತ್ತು. ಈ ಪಿಚ್ ಬ್ಯಾಟರ್‌ಗಳಿಗೆ ಸಹಾಯ ಮಾಡುವ ಸಾಧ್ಯತೆ ಇದೆ. ಇನ್ನು ಚೇಸ್ ಮಾಡುವ ವೇಳೆ ಮಂಜು ಬೀಳುವ ಸಾಧ್ಯತೆ ಇದ್ದು, ಟಾಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ.
ಸ್ಮೃತಿ ಆಕರ್ಷಣೆ
ಪ್ರಸಕ್ತ ವಿಶ್ವಕಪ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವ ಸ್ಮೃತಿ ಮಂಧಾನ, ಆಸ್ಟ್ರೇಲಿಯಾ ವಿರುದ್ಧ ಲಯ ಕಂಡುಕೊಳ್ಳಬೇಕಿದೆ. ಇವರು ವಿಶ್ವಕಪ್‌ಗೂ ಮುನ್ನ ನಡೆದ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಮಹತ್ವದ ಪಂದ್ಯದಲ್ಲೂ ಸ್ಮೃತಿ ಇದೇ ಆಟವನ್ನು ಆಡಬೇಕಿದೆ. ಇನ್ನು ಆರಂಭಿಕ ಪ್ರತಿಕಾ ರಾವಲ್ ಚಿಕ್ಕ ಚಿಕ್ಕ ಇನಿಂಗ್ಸ್ ಕಟ್ಟುತ್ತಿದ್ದು ಇದನ್ನು ಬಿಗ್ ಇನಿಂಗ್ಸ್ ಆಗಿ ಕನ್ವರ್ಟ್ ಮಾಡುವ ಅವಶ್ಯಕತೆ ಇದೆ.
ಮಧ್ಯಮ ಕ್ರಮಾಂಕದಲ್ಲಿ ಹರ್ಲಿನ್ ಡಿಯೋಲ್, ಜೆಮಿಮಾ ರೋಡ್ರಿಗಸ್, ನಾಯಕಿ ಹರ್ಮನ್ ಪ್ರೀತ್ ಕೌರ್ ಒತ್ತಡವನ್ನು ಮೆಟ್ಟಿ ನಿಲ್ಲಬೇಕಿದೆ. ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಆಟವನ್ನೇ ಮತ್ತೊಮ್ಮೆ ಆಡಿದರೆ ಗೆಲುವಿನ ಆಸೆ ಚಿಗುತ್ತದೆ. ಆಲ್‌ರೌಂಡರ್‌ಗಳಾದ ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ಸ್ನೇಹಾ ರಾಣಾ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ. ಕ್ರಾಂತಿ ಗೌಡ, ಶ್ರೀ ಚರಣಿ ತಮ್ಮ ಬಿಗುವಿನ ದಾಳಿಯ ಮೂಲಕ ಆಸೀಸ್ ಬ್ಯಾಟರ್‌ಗಳನ್ನು ಕಾಡಬೇಕಿದೆ.
ಸಂಭಾವ್ಯ ಭಾರತ ತಂಡ: ಸ್ಮೃತಿ ಮಂಧಾನ, ಪ್ರತಿಕಾ ರಾವಲ್, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚಾರಣಿ.
ಸ್ಟಾರ್‌ಗಳೇ ಬಲ
ಆಸ್ಟ್ರೇಲಿಯಾ ತಂಡದಲ್ಲೂ ಸ್ಟಾರ್ ಆಟಗಾರ್ತಿಯರು ಇದ್ದು, ಈ ಆಟಗಾರ್ತಿಯರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಇವರನ್ನು ಕಟ್ಟಿ ಹಾಕುವುದು ಭಾರತಕ್ಕೆ ಸವಾಲು ಆಗಿರಲಿದೆ. ಆಸ್ಟ್ರೇಲಿಯಾ ಸಹ ಈ ಪಂದ್ಯವನ್ನು ಗೆದ್ದ ಅಗ್ರ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಕನಸು ಕಾಣುತ್ತಿದೆ.

ಸಂಭಾವ್ಯ ಆಸ್ಟ್ರೇಲಿಯಾ ತಂಡ: ಅಲಿಸ್ಸಾ ಹೀಲಿ (ನಾಯಕಿ ಮತ್ತು ವಿಕೆಟ್ ಕೀಪರ್), ಫೋಬ್ ಲಿಚ್‌ಫೀಲ್ಡ್, ಎಲ್ಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸೌತರ್‌ಲ್ಯಾಂಡ್, ಆಶ್ಲೀ ಗಾರ್ಡ್‌ನರ್, ತಹಲಿಯಾ ಮೆಕ್‌ಗ್ರಾತ್, ಜಾರ್ಜಿಯಾ ವೇರ್‌ಹ್ಯಾಮ್/ಸೋಫಿ ಮೊಲಿನೆಕ್ಸ್, ಕಿಮ್ ಗಾರ್ತ್, ಅಲಾನಾ ಕಿಂಗ್, ಮೇಗನ್ ಶಟ್.
ಪ್ರಮುಖ ಅಂಕಿ ಅಂಶಗಳು
1> ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸ್ಮೃತಿ 58 ರನ್ ಬಾರಿಸುವಲ್ಲಿ ಯಶಸ್ವಿಯಾದರೆ, ಇವರು ಏಕದಿನ ಕ್ರಿಕೆಟ್‌ನಲ್ಲಿ 5 ಸಾವಿರ ರನ್ ಪೂರೈಸಲಿದ್ದಾರೆ.
2> ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ್ತಿ ಬೆತ್ ಮೂನಿ 93 ರನ್ ಕಲೆ ಹಾಕಿದಲ್ಲಿ ಇವರು ಸಹ ಏಕದಿನ ಫಾರ್ಮೆಟ್‌ನಲ್ಲಿ 3 ಸಾವಿರ ರನ್ ಗಡಿ ತಲುಪಲಿದ್ದಾರೆ.
3> ದೀಪ್ತಿ ಶರ್ಮಾ 3 ವಿಕೆಟ್ ಪಡೆದಿದ್ದೇ ಆದಲ್ಲಿ, ಏಕದಿನ ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications