
ಅರ್ಧ ಶತಕ ಸಿಡಿಸಿದ ಅಶ್ವಿನ್
ಶ್ರೇಯಸ್ ಐಯ್ಯರ್ ಎರಡನೇ ದಿನದಾಟದಲ್ಲಿ ತಮ್ಮ ಮೊತ್ತಕ್ಕೆ ಕೇವಲ 4 ರನ್‌ಗಳನ್ನು ಸೇರಿಸಿ 86 ರನ್‌ಗೆ ವಿಕೆಟ್ ಕಳೆದುಕೊಂಡರು. ಈ ಮೂಲಕ ಟೆಸ್ಟ್‌ನಲ್ಲಿ ಎರಡನೇ ಶತಕ ಗಳಿಸುವ ಅವಕಾಶ ಕಳೆದುಕೊಂಡರು. ನಂತರ ಆರ್ ಅಶ್ವಿನ್ ಹಾಗೂ ಕುಲ್‌ದೀಪ್ ಯಾದವ್ ಜೋಡಿ ಅದ್ಭುತ ಜೊತೆಯಾಟದಲ್ಲಿ ಭಾಗಿಯಾದರು. ಈ ಜೋಡಿ 8ನೇ ವಿಕೆಟ್‌ಗೆ ಬರೊಬ್ಬರಿ 92 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ಅಶ್ವಿನ್ 58 ರನ್‌ಗಳಿಸಿ ಔಟಾದರೆ ಕುಲ್ದೀಪ್ ಯಾದವ್ 40 ರನ್‌ಗಳ ಕೊಡುಗೆ ನೀಡಿದರು.

ಬೌಲಿಂಗ್‌ನಲ್ಲಿ ಕುಲ್‌ದೀಪ್, ಸಿರಾಜ್ ಮೋಡಿ
ಇನ್ನು ಬೌಲಿಂಗ್‌ನಲ್ಲಿಯೂ ಟೀಮ್ ಇಂಡಿಯಾ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಯಶಸ್ಸು ಸಾಧಿಸಿದೆ. ಆರಂಭದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆಘಾತ ನೀಡುವಲ್ಲಿ ಯಶಸ್ವಿಯಾದರು. ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕುಲ್‌ದೀಪ್ ಯಾದವ್ ಸ್ಪಿನ್ ಮೋಡಿಗೆ ಬಾಂಗ್ಲಾ ದಾಂಡಿಗರು ಫೆವಿಲಿಯನ್ ಹಾದಿ ಹಿಡಿದರು. ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಪಡೆದುಕೊಂಡರೆ ಕುಲ್‌ದೀಪ್ ಯಾದವ್ 4 ವಿಕೆಟ್ ಕಬಳಿಸಿ ಟೆಸ್ಟ್ ಮಾದರಿಗೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಇನ್ನು ಎರಡನೇ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 133 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡಿದ್ದು 271 ರನ್‌ಗಳ ಹಿನ್ನಡೆಯಲ್ಲಿದೆ.
Year Ender 2022 ರಲ್ಲಿ ಟೀಂ ಇಂಡಿಯಾವನ್ನು ಕಾಡಿದ ಪ್ರಮುಖ ಸಮಸ್ಯೆಗಳು, ವಿವಾದಗಳ ನಡುವೆ ತಂಡದ ಸಾಧನೆಗಳು

ಇತ್ತಂಡಗಳ ಆಡುವ ಬಳಗ
ಬಾಂಗ್ಲಾದೇಶ ಆಡುವ ಬಳಗ: ಝಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ಎಬಾಡೋತ್ ಹೊಸೈನ್
ಬೆಂಚ್: ಮಹಮ್ಮದುಲ್ ಹಸನ್ ಜಾಯ್, ಮೊಮಿನುಲ್ ಹಕ್, ಶೋರಿಫುಲ್ ಇಸ್ಲಾಂ, ಅನಾಮುಲ್ ಹಕ್, ರೆಜೌರ್ ರೆಹಮಾನ್ ರಾಜ
ಟೀಮ್ ಇಂಡಿಯಾ ಆಡುವ ಬಳಗ: ಶುಬ್ಮನ್ ಗಿಲ್, ಕೆಎಲ್ ರಾಹುಲ್ (ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್,
ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೀಕರ್ ಭರತ್, ನವದೀಪ್ ಸೈನಿ, ಅಭಿಮನ್ಯು ಈಶ್ವರನ್, ಸೌರಭ್ ಕುಮಾರ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕಟ್