Ind vs Ban 2nd ODI: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಭಾರತ, ಸಂಭಾವ್ಯ XI, ನೇರಪ್ರಸಾರದ ಮಾಹಿತಿ

ಭಾರತ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 1 ವಿಕೆಟ್ ಅಂತರದ ಸೋಲು ಅನುಭವಿಸಿದ್ದು ಆಘಾತಕ್ಕೆ ಒಳಗಾಗಿದೆ. ಇದೀಗ ಎರಡನೇ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿದ್ದು ಬುಧವಾರ ಈ ಪಂದ್ಯ ಆಯೋಜನೆಯಾಗಲಿದೆ.
ಮೊದಲ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿರುವ ಕಾರಣ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆತಿಥೇಯ ತಂಡದ ವಿರುದ್ಧ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ. ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿಯೂ ಹಿನ್ನಡೆ ಅನುಭವಿಸಿರುವುದು ಮ್ಯಾನೇಜ್‌ಮೆಂಟ್‌ಗೆ ತಲೆನೋವಾಗಿದೆ. ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸಲು ಟೀಮ್ ಇಂಡಿಯಾ ಎದುರು ನೋಡುತ್ತಿದೆ. ಈ ಪಂದ್ಯ ಕೂಡ ಢಾಕಾದ ಶೇರ್ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ.

ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯ ಡಿಸೆಂಬರ್ 7 ಬುಧವಾರ ನಡೆಯಲಿದೆ. ಢಾಕಾದಲ್ಲಿರುವ ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಕೂಡ ಆತಿಥ್ಯ ವಹಿಸಿಕೊಳ್ಳಲಿದೆ. ಸರಣಿಯ ಮೊದಲ ಪಂದ್ಯ ಕೂಡ ಇದೇ ಮೈದಾನದಲ್ಲಿ ಆಯೋಜನೆಯಾಗಿತ್ತು. ಬೆಳಿಗ್ಗೆ 11:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 11 ಗಂಟೆಗೆ ಟಾಸ್ ನಡೆಯಲಿದೆ.
ನೇರಪ್ರಸಾರ: ಭಾರತದಲ್ಲಿ ಈ ಪಂದ್ಯ ಸೋನಿ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಅಲ್ಲದೆ ಸೋನಿ ಲಿವ್‌ನಲ್ಲಿಯೂ ಈ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ವರದಿ ಹೀಗಿದೆ
ಶೇರ್ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಬೌಲಿಂಗ್ ವಿಭಾಗ ಸಂಪೂರ್ಣ ಮೇಲುಗೈ ಸಾಧಿಸಿದ್ದು ನೋಡಿದ್ದೇವೆ. ಇಲ್ಲಿ ವೇಗಿಗಳು ಹೆಚ್ಚು ಪರಿಣಾಮಕಾರಿಯಾಗಿದ್ದು ಎರಡನೇ ಪಂದ್ಯದಲ್ಲಿಯೂ ಇದು ಮುಂದುವರಿಯುವ ಸಾಧ್ಯತೆಯಿದೆ. ಇನ್ನು ಮಧ್ಯಮ ಓವರ್‌ಗಳ ಅವಧಿಯಲ್ಲಿ ಸ್ಪಿನ್ನರ್‌ಗಳು ಕೂಡ ಪರಿಣಾಮಕಾರಿಯಾಗಲಿದ್ದಾರೆ. ಇ್ನು ಟಾಸ್ ಗೆದ್ದ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದು ಇಲ್ಲಿ ಉತ್ತಮ ನಿರ್ಧಾರವಾಗಲಿದೆ.

ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ XI
ಬಾಂಗ್ಲಾದೇಶ XI: ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ ರಿಯಾದ್, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್ ಮತ್ತು ಹಸನ್ ಮಹಮೂದ್.
ಟೀಮ್ ಇಂಡಿಯಾ XI: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ದೀಪಕ್ ಚಹಾರ್ ಮತ್ತು ಮೊಹಮ್ಮದ್ ಸಿರಾಜ್.

ಎರಡು ತಂಡಗಳ ಸಂಪೂರ್ಣ ಸ್ಕ್ವಾಡ್ ಹೀಗಿದೆ
ಬಾಂಗ್ಲಾದೇಶ ಸ್ಕ್ವಾಡ್: ಲಿಟನ್ ದಾಸ್ (ನಾಯಕ), ನೂರುಲ್ ಹಸನ್ (ವಿಕೆಟ್ ಕೀಪರ್), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮಹಮ್ಮದುಲ್ಲಾ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಯಾಸಿರ್ ಅಲಿ, ನಜ್ಮುಲ್ ಹೊಸೈನ್ ಶಾಂಟೊ, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications