Ind vs Ban 2ನೇ ಟೆಸ್ಟ್: ಮೊದಲ ದಿನ ಭಾರತದದ್ದೇ ಆಟ: ಅಲ್ಪ ಮೊತ್ತಕ್ಕೆ ಬಾಂಗ್ಲಾ ಆಲೌಟ್

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಡಾಕಾದಲ್ಲಿ ನಡೆಯುತ್ತಿದೆ. ಮೊದಲ ದಿನದಾಟ ಅಂತ್ಯವಾಗಿದ್ದು ಭಾರತ ಸಂಪೂರ್ಣ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ 227 ರನ್‌ಗಳಿಗೆ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರವಾಗಿ ಬೌಲಿಂಗ್‌ನಲ್ಲಿ ಉಮೇಶ್ ಯಾದವ್ ಹಾಗೂ ಆರ್ ಅಶ್ವಿನ್ ಅದ್ಬುತ ಪ್ರದರ್ಶನ ನೀಡಿ ಮಿಂಚಿದ್ದಾರೆ.
ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಆತಿಥೇಯ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಗೆದ್ದು ಸರಣಿ ಸಮಬಲಗೊಳಿಸುವ ಗುರಿಯೊಂದಿಗೆ ಕಣಕ್ಕಿಳಿದಿದೆ. ಆದರೆ ಮೊದಲ ದಿನ ಅಂದುಕೊಂಡಂತೆ ಪ್ರದರ್ಶನ ನೀಡಲು ವಿಫಲವಾಗಿರುವ ಬಾಂಗ್ಲಾದೇಶ ತಂಡ ನಿರಾಸೆ ಅನುಭವಿಸಿದೆ.

ವಿಫಲವಾದ ಬಾಂಗ್ಲಾ ದಾಂಡಿಗರು
ಭಾರತದ ಬೌಲಿಂಗ್ ವಿಭಾಗದ ದಾಳಿಗೆ ಬಾಂಗ್ಲಾದೇಶದ ದಾಂಡಿಗರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲವಾಗಿದ್ದಾರೆ. ಮಾಮ್ಯುನಲ್ ಹಕ್ ಮಾತ್ರವೇ ಬಾಂಗ್ಲಾದೇಶ ತಂಡದ ಪರವಾಗಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು 84 ರನ್‌ಗಳ ಕೊಡುಗೆ ನೀಡಿದ್ದಾರೆ. ಉಳಿದಂತೆ ಯಾವ ಆಟಗಾರನಿಂದಲೂ ಉತ್ತಮ ಪ್ರದರ್ಶನ ಬಂದಿಲ್ಲ.

ಭಾರತದ ಬೌಲರ್‌ಗಳ ಅಬ್ಬರ
ಢಾಕಾದಲ್ಲಿ ನಡೆದ ಈ ಪಂದ್ಯದ ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿದೆ. 12 ವರ್ಷಗಳ ಬಳಿಕ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಜಯ್‌ದೇವ್ ಉನಾದ್ಕಟ್ ಈ ಪಂದ್ಯದಲ್ಲಿ ಎರಡು ವಿಕೆಟ್ ಕಿತ್ತು ಮಿಂಚಿದ್ದಾರೆ. ಇನ್ನು ವೇಗಿ ಉಮೇಶ್ ಯಾದವ್ ಹಾಗೂ ಆರ್ ಅಶ್ವಿನ್ ತಲಾ ನಾಲ್ಕು ವಿಕೆಟ್ ಪಡೆದುಕೊಂಡಿದ್ದಾರೆ. ಈ ಮೂಲ ಬಾಂಗ್ಲಾದೇಶ ತಂಡ ಕೇವಲ 227 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications