Ind vs Ban 2ನೇ ಟೆಸ್ಟ್: ಕ್ಲೀನ್ ಸ್ವೀಪ್ ಮೇಲೆ ಭಾರತದ ಕಣ್ಣು: ಟಾಸ್ ವರದಿ, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ಬಾಂಗ್ಲಾದೇಶ ತಣಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದಿನಿಂದ ಆರಂಭವಾಗಿದೆ. ಢಾಕಾದ ಶೇರ್ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿಯೂ ಗೆಲುವು ಸಾಧಿಸುವತ್ತ ಟೀಮ್ ಇಂಡಿಯಾ ಚಿತ್ತನೆಟ್ಟಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯದದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಕುಲ್ದೀಪ್ ಯಾದವ್ ಆಡುವ ಬಳಗದಿಂದ ಹೊರಗುಳಿದಿದ್ದು ಜಯ್‌ದೇವ್ ಉನಾದ್ಕಟ್‌ಗೆ ಆಡುವ ಬಳಗದಲ್ಲಿ ಸ್ಥಾನ ದೊರೆತಿದೆ. ಇನ್ನು ಬಾಂಗ್ಲಾದೇಶ ಎರಡು ಬದಲಾವಣೆ ಮಾಡಿಕೊಂಡಿದ್ದು ಟಸ್ಕಿನ್ ಮಹಮ್ಮದ್ ಹಾಗೂ ಮಾಮಿನುಲ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
Live score ಹೀಗಿದೆ

12 ವರ್ಷಗಳ ಬಳಿಕ ಅವಕಾಶ ಪಡೆದ ಉನಾದ್ಕಟ್
ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಗಾಯದಿಂದಾಗಿ ಈ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು. ಆದರೆ ಶಕೀಬ್ ತಂಡವನ್ನು ಮುನ್ನಡೆಸಲು ಕಣಕ್ಕಿಳಿದಿದ್ದಾರೆ. ಇನ್ನು ಭಾರತ ತಂಡ ಹಂಗಾಮಿ ನಾಯಕ ಕೆಎಲ್ ರಾಹುಲ್‌ಗೆ ಅಭ್ಯಾಸದ ಸಂದರ್ಭದಲ್ಲಿ ಗಾಯಕ್ಕೆ ಒಳಗಾದ ಕಾರಣ ಆತಂಕಕ್ಕೆ ಒಳಗಾಗಿತ್ತು. ಆದರೆ ರಾಹುಲ್ ಆಡಲು ಸಮರ್ಥವಾಗಿದ್ದಾರೆ. ಇನ್ನು ಸುದೀರ್ಘ 12 ವರ್ಷಗಳ ಬಳಿಕ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದ ಜಯ್‌ದೇವ್ ಉನಾದ್ಕಟ್‌ಗೆ ಈ ಸರಣಿಯಲ್ಲಿ ಅವಕಾಶ ದೊರೆತಿದ್ದು ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಬಾಂಗ್ಲಾದೇಶ ಸಂಭಾವ್ಯ ಆಡುವ ಬಳಗ
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications