ಭಾರತ vs ಬಾಂಗ್ಲಾದೇಶ: ಟೀಮ್ ಇಂಡಿಯಾದಲ್ಲಿ 5 ಬದಲಾವಣೆ: ವಾಟರ್ ಬಾಯ್ ಆದ ವಿರಾಟ್ ಕೊಹ್ಲಿ
ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯ ಇಂದು ಶ್ರೀಲಂಕಾದ ಕೊಲಂಬೋದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರೀ ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು ತೀವ್ರ ಕುತೂಹಲ ಮೂಡಿಸಿದೆ. ಭಾರತ ತಂಡ ಈಗಾಗಲೇ ಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ಕಾರಣ ಪ್ರಮುಕ ಆಟಗಾರರಿಗೆ ವಿಶ್ರಾಂತಿ ನೀಡಿ ಅವಕಾಶ ದೊರೆಯದ ಕೆಲ ಆಟಗಾರರಿಗೆ ಆಡುವ ಬಳಗದಲ್ಲಿ ಸ್ಥಾನವನ್ನು ನೀಡಲಾಗಿದೆ.
ಟೀಮ್ ಇಂಡಿಯಾದಲ್ಲಿ ಈ ಪಂದ್ಯದಕ್ಕಾಗು ಬರೊಬ್ಬರಿ ಐದು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಯುವ ಆಟಗಾರ ತಿಲಕ್ ವರ್ಮಾ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಏಕದಿನ ಮಾದರಿಗೆ ಪದಾರ್ಪಣೆ ಮಾಡಿದ್ದು ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಕೂಡ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಬೆಂಚ್ ಸಾಮರ್ಥ್ಯವನ್ನು ಪರೀಕ್ಷಿಸುವ ನಿರೀಕ್ಷೆಯಿತ್ತು. ಈಗಾಗಲೇ ಭಾರತ ಫೈನಲ್‌ಗೆ ಅರ್ಹತೆ ಪಡೆದುಕೊಂಡಿರುವ ಕಾರಣ ಮ್ಯಾನೇಜ್‌ಮೆಂಟ್ ಈ ಯೋಜನೆ ಮಾಡಿದ್ದು ಐದು ಬದಲಾವಣೆ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಂದಿನ ಆಡುವ ಬಳಗದಿಂದ ಹೊರಗುಳಿದಿರುವ ಆಟಗಾರರಾಗಿದ್ದಾರೆ. ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಹಾಗೂ ಪ್ರಸಿದ್ಧ್ ಕೃಷ್ಣಗೆ ಆಡುವ ಬಳಗದಲ್ಲಿ ಸ್ಥಾನ ದೊರೆತಿದೆ.
ಇನ್ನು ಏಷ್ಯಾಕಪ್‌ನಲ್ಲಿ ಆಡುತ್ತಿರುವ 17 ಆಟಗಾರರ ಪೈಕಿ 15 ಆಟಗಾರರು ವಿಶ್ವಕಪ್‌ಗೆ ಆಯ್ಕೆಯಾಗಿದ್ದಾರೆ. ತಿಲಕ್ ವರ್ಮಾ ಹಾಗೂ ಪ್ರಸಿದ್ಧ್ ಕೃಷ್ಣ ಮಾತ್ರವೇ ವಿಶ್ವಕಪ್ ತಂಡದಿಂದ ಹೊರಗುಳಿದಿರುವ ಇಬ್ಬರು ಆಟಗಾರರು. ಈ ಆಟಗಾರರಿಗೂ ಈ ಪಂದ್ಯದಲ್ಲಿ ಅವಕಾಶ ದೊರೆತಿದೆ. ಈ ಮೂಲಕ ಈ ಟೂರ್ನಿಯಲ್ಲಿ ಎಲ್ಲಾ ಆಟಗಾರರಿಗೂ ಆಡುವ ಅವಕಾಶ ದೊರೆತಂತಾಗಿದೆ.
ವಾಟರ್ ಬಾಯ್ ಆದ ವಿರಾಟ್ ಕೊಹ್ಲಿ
ಇನ್ನು ಟೀಮ್ ಇಂಡಿಯಾ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದು ವಿಶ್ರಾಂತಿ ಪಡೆದುಕೊಂಡಿದ್ದಾರೆ. ಆದರೆ ಡ್ರಿಂಕ್ಸ್ ವಿರಾಮದ ಅವಧಿಯಲ್ಲಿ ಸ್ವತಃ ವಿರಾಟ್ ಕೊಹ್ಲಿ ವಾಟರ್ ಬಾಯ್ ಆಗಿ ಮೈದಾನಕ್ಕಿಳಿದು ಆಟಗಾರರಿಗೆ ಪಾನೀಯ ನೀಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಹೀಗಾಗಿ ಬಾಂಗ್ಲಾದೇಶ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ
ಬೆಂಚ್: ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್
ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್ (ವಿಕೆಟ್ ಕೀಪರ್), ತನ್ಜಿದ್ ಹಸನ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್ (ನಾಯಕ), ತೌಹಿದ್ ಹೃದಯೋಯ್, ಶಮೀಮ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ನಸುಮ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಮೊಹಮ್ಮದ್ ನಯಿಮ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹಮೂದ್, ಅಫೀಫ್ ಹೊಸೈನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications