ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ ಸರಣಿ ಸಾಕಷ್ಟು ಆಟಗಾರರಿಗೆ ಮುಖ್ಯ: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಬಗ್ಗೆ ಡಿಕೆ ಮಾತು

India vs Bangladesh: Dinesh Karthik statement On The Importance ODI series against Bangladesh

ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಭಾನುವಾರ ಮುಖಾಮುಖಿಯಾಗಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸರಣಿಯ ಹಿನ್ನೆಲೆಯಲ್ಲಿ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಯ ಮುಂದಿನ ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಭಾರತ ತಂಡಕ್ಕೆ ಬಹಳ ಮುಖ್ಯವಾಗಲಿದೆ ಎಂದಿದ್ದಾರೆ. ಕ್ರಿಕ್ ಬಜ್ ಜೊತೆಎ ಸಂವಾದದಲ್ಲಿ ಭಾಗಿಯಾಗಿದ್ದ ಡಿಕೆ ಭಾರತದ ಕೆಲ ಆಟಗಾರರಿಗೆ ಈ ಸರಣಿ ಅತ್ಯಂತ ಮಹತ್ವದ್ದಾಗಿರಲಿದೆ ಎಂದಿದ್ದಾರೆ.

ಇನ್ನು ಏಷ್ಯಾ ಉಪಖಂಡದಲ್ಲಿ ಈ ಸರಣಿ ನಡೆಯುತ್ತಿರುವುದರಿಂದಾಗಿ ಟೀಮ್ ಇಂಡಿಯಾ ಸಾಕಷ್ಟು ಸ್ಪಷ್ಟತೆಯೊಂದಿಗೆ ಆಡುವ ಅಗತ್ಯವಿದೆ ಎಂದಿದ್ದಾರೆ. "ಇಲ್ಲಿಂದ 2023ರ ಏಕದಿನ ವಿಶ್ವಕಪ್‌ನ ಪ್ರಯಾಣ ಆರಂಭವಾಗಲಿದೆ. ವಿಶ್ವಕಪ್ ನಡೆಯುವುದು ಮುಂದಿನ ಅಕ್ಟೋಬರ್ ನವೆಂಬರ್ ತಿಣಗಳಿನಲ್ಲಿ ಹಾಗಾಗಿ ಸಾಕಷ್ಟು ಸಮಯಾವಕಾಶವಿದ್ದರೂ ಇದು ಕೆಲ ಆಟಗಾರರಿಗೆ ಈ ಸರಣಿ ಬಹಳಷ್ಟು ಮಹತ್ವದ್ದಾಗಿರಲಿದೆ" ಎಂದಿದ್ದಾರೆ ಡಿಕೆ.

ಟೆಸ್ಟ್‌ನಲ್ಲಿ ಪಾಕ್ ವಿರುದ್ಧ ಇಂಗ್ಲೆಂಡ್ ಅಬ್ಬರದ ಬ್ಯಾಟಿಂಗ್: ಮೆಚ್ಚುಗೆ ಸೂಚಿಸಿದ ಪಿಸಿಬಿ ಅಧ್ಯಕ್ಷಟೆಸ್ಟ್‌ನಲ್ಲಿ ಪಾಕ್ ವಿರುದ್ಧ ಇಂಗ್ಲೆಂಡ್ ಅಬ್ಬರದ ಬ್ಯಾಟಿಂಗ್: ಮೆಚ್ಚುಗೆ ಸೂಚಿಸಿದ ಪಿಸಿಬಿ ಅಧ್ಯಕ್ಷ

ಈ ತಿಂಗಳಿನಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ಬಾಂಗ್ಲಾದೇಶದ ವಿರುದ್ಧ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳು ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಸರಣಿಯ ಮೊದಲ ಏಕದಿನ ಪಂದ್ಯ ಡಿಸೆಂಬರ್ 4 ಭಾನುವಾರ ಢಾಕಾದ ಶೇರ್ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನ್ನಿಂಗ್ಸ್ ಆರಂಭಿಸಬೇಕು ಎಂದು ದಿನೇಶ್ ಕಾರ್ತಿಕ್ ಹೇಳಿದ್ದು ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ ನಿಸ್ಸಂಶಯವಾಗಿ ಈ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.

ಎರಡು ತಂಡಗಳ ಸಂಪೂರ್ಣ ಸ್ಕ್ವಾಡ್ ಹೀಗಿದೆ
ಬಾಂಗ್ಲಾದೇಶ ಸ್ಕ್ವಾಡ್: ಲಿಟನ್ ದಾಸ್ (ನಾಯಕ), ನೂರುಲ್ ಹಸನ್ (ವಿಕೆಟ್ ಕೀಪರ್), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮಹಮ್ಮದುಲ್ಲಾ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಯಾಸಿರ್ ಅಲಿ, ನಜ್ಮುಲ್ ಹೊಸೈನ್ ಶಾಂಟೊ, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್

ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್

Story first published: Sunday, December 4, 2022, 5:35 [IST]
Other articles published on Dec 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X