World cup 2023: ಪುಣೆಗೆ ಬಂದಿಳಿದು ನೇರವಾಗಿ ಅಭ್ಯಾಸ ಆರಂಭಿಸಿದ ಕೊಹ್ಲಿ, ರೋಹಿತ್
ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಪಂದ್ಯಕ್ಕೆ ಸಿದ್ಧವಾಗುತ್ತಿದೆ. ಕಳೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿರುವ ಟೀಮ್ ಇಂಡಿಯಾಗೆ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ಎದುರಾಳಿಯಾಗಿರಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಭಾರತ ತಂಡ ಈಗಾಗಲೇ ಪುಣೆಗೆ ಬಂದಿಳಿದಿದೆ.
ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಮಂಗಳವಾರ ಪುಣೆಗೆ ಬಂದಿಳಿಯಿತು. ಇಲ್ಲಿಗೆ ಬಂದಿಳಿದ ಕೆಲವೇ ಕ್ಷಣಗಳಲ್ಲಿ ಟೀಮ್ ಇಂಡಿಯಾ ಆಟಗಾರರು ವಿರ್ಶರಾಂತಿಯ ಮೊರೆ ಹೋಗದೆ ನೇರವಾಗಿ ನೆಟ್ ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಟೀಮ್ ಇಂಡಿಯಾ ಆಟಗಾರರು ಅಭ್ಯಾಸದಲ್ಲಿ ಭಾಗಿಯಾಗಿದ್ದರು.

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯಕ್ಕೂ ಮುನ್ನ ಭಾರತದ ನಾಯಕ ರೋಹಿತ್ ಶರ್ಮಾ ಇತರ ತಂಡದ ಸದಸ್ಯರೊಂದಿಗೆ ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಕೂಡ ಅಭ್ಯಾಸಲ್ಲಿ ಭಾಗಿಯಾಗಿದ್ದಾರೆ. ವಿರಾಟ್ ಕೊಹ್ಲಿ ಕೆಲವು ಲ್ಯಾಪ್ ಮತ್ತು ರಿವರ್ಸ್ ಸ್ವೀಪ್ ಹೊಡೆತಗಳನ್ನು ಪ್ರಯತ್ನಿಸಿದ್ದು ನೆಟ್ಸ್‌ನಲ್ಲಿ ಪರಿಣಾಮಕಾರಿಯಾಗಿ ಸಮಯ ಕಳೆದಿದ್ದಾರೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.
ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ಕುಮಾರ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ಉಪನಾಯಕ), ತೌಹಿದ್ ಹೃದಯ್, ಮುಶ್ಫಿಕುರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications