Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪುಣೆಯಲ್ಲಿ ಸುರಿಯುತ್ತಿರುವ ಮಳೆ: ಭಾರತ vs ಬಾಂಗ್ಲಾದೇಶ ಪಂದ್ಯಕ್ಕೆ ಆಗಲಿದೆಯಾ ಅಡ್ಡಿ?

ವಿಶ್ವಕಪ್ ಟೂರ್ನಿಯಲ್ಲಿ ಗುರುವಾರ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯ ಭಾರೀ ಕುತೂಹಲ ಮೂಡಿಸಿದ್ದು ಸತತ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಭಾರತ ತಂಡಕ್ಕೆ ಶಕೀಬ್ ಅಲ್ ಹಸನ್ ಪಡೆ ತಡೆಯೊಡ್ಡಲು ಪಣತೊಟ್ಟಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಮುನ್ಸೂಚನೆಗಳು ಕಂಡುಬರುತ್ತಿದೆ. ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಈ ಪಂದ್ಯಕ್ಕೂ ಹಿಂದಿನ ದಿನ ಬುಧವಾರ ಪುಣೆಯಲ್ಲಿ ಮಳೆಯಾಗಿದೆ. ಹೀಗಾಗಿ ಪಂದ್ಯ ನಡೆಯುವ ಗುರುವಾರವೂ ಮಳೆಯಾಗಲಿದ್ದು ಪಂದ್ಯಕ್ಕೆ ಅಡ್ಡಿಯುಂಟು ಮಾಡಲಿದೆಯಾ ಎನ್ನುವ ಆತಂಕ ಮೂಡಿಸಿದೆ.

India vs Bangladesh: It is drizzling in Pune! weather update of ind vs Bangla match

ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಹಿಂದಿನ ದಿನ ರಾತ್ರಿ ಪುಣೆಯಲ್ಲಿ ಮಳೆಯಾಗುತ್ತಿದ್ದರೂ ಬಹು ನಿರೀಕ್ಷಿತ ಪಂದ್ಯಕ್ಕೆ ಮಳೆಯ ಆತಂಕವಿಲ್ಲ ಎನ್ನುತ್ತಿದೆ ಹವಾಮಾನ ವರದಿ. ಆಕ್ಯುವೆದರ್ ಮಾಹಿತಿಯ ಪ್ರಕಾರ ಭಾರತ ಹಾಗೂ ಬಾಂಗ್ಲಾದೇಶ ತಮಡಗಳ ನಡುವಿನ ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಕೇವಲ 3 ಶೇಕಡಾ ಮಾತ್ರವಿದೆ. ಈ ಅವಧಿಯಲ್ಲಿ 33 ಸೆಲ್ಸಿಯಸ್ ಉಷ್ಣಾಂಶವಿರಲಿದ್ದು 41 ಶೇಕಡಾ ಆರ್ದ್ರತೆಯಿರಲಿದೆ.

ಪುಣೆಯ ಎಂಸಿಎ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಗಿ ಪಿಚ್ ಎನಿಸಿಕೊಂಡಿದೆ. ಪಂದ್ಯದುದ್ದಕ್ಕೂ ಬ್ಯಾಟರ್‌ಗಳು ಬೌಲರ್‌ಗಳ ಮೇಲೆ ಮೇಲುಗೈ ಸಾಧಿಸುವ ನಿರೀಕ್ಷಿಯಿದ್ದು ಮೈದಾನದ ಎಲ್ಲಾ ಭಾಗಕ್ಕೂ ಚೆಂಡನ್ನು ಅಟ್ಟುವ ಅವಕಾಶವಿದೆ. ಹಾಗಾಗಿ ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಇಲ್ಲಿ ಏಳು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು ಇವುಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 307 ರನ್ ಆಗಿದೆ. ಅಲ್ಲದೆ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಇಲ್ಲಿ 4 ಬಾರಿ ಗೆದ್ದುಕೊಂಡಿರುವುದು ಮತ್ತೊಂದು ಗಮನಾರ್ಹ ಅಂಶ.

ಸಂಪೂರ್ಣ ಸ್ಕ್ವಾಡ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತನ್ಜಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ಉಪನಾಯಕ), ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್

Story first published: Wednesday, October 18, 2023, 23:33 [IST]
Other articles published on Oct 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+