Ind vs Ban 1st ODI : ಮೊದಲ ಪಂದ್ಯದ ಸಂಭಾವ್ಯ ಆಡುವ ಬಳಗ, ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ತಂಡ ಮತ್ತೊಂದು ದ್ವಿಪಕ್ಷೀಯ ಸರಣಿಗೆ ಸಜ್ಜಾಗಿದೆ. ಬಾಂಗ್ಲಾದೇಶಕ್ಕೆ ಪ್ರವಾಸ ತೆರಳಿರುವ ಟೀಮ್ ಇಂಡಿಯಾ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದದು ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿದೆ. ಈ ಪೈಕಿ ಏಕದಿನ ಸರಣಿ ಡಿಸೆಂಬರ್ 4 ಭಾನುವಾರದಿಂದಲೇ ಆರಂಭವಾಗಲಿದ್ದು ಸರಣಿ ಸಾಕಷ್ಟು ಕುತೂಹಲ ಮೂಡಿಸಿದೆ.
ಬಾಂಗ್ಲಾದೇಶ ಪ್ರವಾಸದಲ್ಲಿ ಟೀಮ್ ಇಂಡಿಯಾ ತನ್ನ ಬಲಿಷ್ಠ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯುತ್ತಿದೆ. ಕಳೆದ ನ್ಯೂಜಿಲೆಂಡ್ ಪ್ರವಾಸದಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮೊದಲಾದ ಆಟಗಾರರು ಈ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಈ ಸರಣಿಯಲ್ಲಿ ಅನುಭವಿಗಳು ಹಾಗೂ ಯುವ ಆಟಗಾರರ ಉತ್ತಮ ಸಂಯೋಜನೆಯಿಂದ ಕೂಡಿರುವುದು ಸ್ಪಷ್ಟ.

ಪಂದ್ಯದ ಸಮಯ, ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಡಿಸೆಂಬರ್ 4 ಭಾನುವಾರ ನಡೆಯಲಿದೆ. ಢಾಕಾದಲ್ಲಿರುವ ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣ ಈ ಪಂದ್ಯಕ್ಕೆ ಆತೀಥ್ಯ ವಹಿಸಿಕೊಳ್ಳಲಿದೆ. ಬೆಳಿಗ್ಗೆ 11:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 11 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಭಾರತದಲ್ಲಿ ಈ ಪಂದ್ಯ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದೆ. ಅಲ್ಲದೆ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿಯೂ ಈ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
ಶೇರ್ ಎ ಬಾಂಗ್ಲಾ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿರಲಿದೆ. ಇಲ್ಲಿ ಕಳೆದ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಮೊತ್ತ 263 ರನ್. ಇನ್ನು ಆರಂಭದಲ್ಲಿ ಇಲ್ಲಿ ವೇಗಿಗಳಿಗೂ ಪಿಚ್ ನೆರವು ನೀಡುವ ನಿರೀಕ್ಷೆಯಿದೆ. ಕಳೆದ ಮೂರು ಪಂದ್ಯಗಳಲ್ಲಿ ಏಳು ವಿಕೆಟ್‌ಗಳು ಪವರ್‌ಪ್ಲೇನಲ್ಲಿ ಕಳೆದುಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇನ್ನು ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ಪಾತ್ರ ನಿರ್ಣಾಯಕವಾಗಿರಲಿದೆ. ಇನ್ನು ಕಳೆದ ಮೂರು ಪಂದ್ಯಗಳಲ್ಲಿಯೂ ಮೊದಲಿಗೆ ಬ್ಯಾಟಿಂಗ್ ನಡೆಸಿದ ತಂಡವೇ ಗೆಲುವು ಸಾಧಿಸಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ದೀಪಕ್ ಚಹಾರ್ ಮತ್ತು ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಲಿಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ ರಿಯಾದ್, ಅಫೀಫ್ ಹುಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್ ಮತ್ತು ಹಸನ್ ಮಹಮೂದ್/ನಸುಮ್ ಅಹ್ಮದ್

ಎರಡು ತಂಡಗಳ ಸಂಪೂರ್ಣ ಸ್ಕ್ವಾಡ್ ಹೀಗಿದೆ
ಬಾಂಗ್ಲಾದೇಶ ಸ್ಕ್ವಾಡ್: ಲಿಟನ್ ದಾಸ್ (ನಾಯಕ), ನೂರುಲ್ ಹಸನ್ (ವಿಕೆಟ್ ಕೀಪರ್), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಮಹಮ್ಮದುಲ್ಲಾ, ಮೆಹಿದಿ ಹಸನ್ ಮಿರಾಜ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಯಾಸಿರ್ ಅಲಿ, ನಜ್ಮುಲ್ ಹೊಸೈನ್ ಶಾಂಟೊ, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications