ಭಾರತ vs ಬಾಂಗ್ಲಾದೇಶ: ಯುವ ವೇಗಿ ಕುಲ್‌ದೀಪ್ ಸೇನ್ ಹೊರಗುಳಿಯಲು ಕಾರಣವಿದು!

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯಿತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ನಿರೀಕ್ಷೆಯಂತೆಯೇ ಅಕ್ಷರ್ ಪಟೇಲ್ ಈ ಪಂದ್ಯದಲ್ಲಿ ಆಡುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದು ಶಹ್ಬಾಜ್ ಅಹ್ಮದ್ ಅವರಿಗೆ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಮತ್ತೊಂದೆಡೆ ಕಳೆದ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವೇಗಿ ಕುಲ್‌ದೀಪ್ ಸೇನ್ ಕೂಡ ಈ ಪಂದ್ಯದ ಆಡುವ ಬಳಗದಿಂದ ಹೊರಗುಳಿದಿದ್ದು ಅವರ ಬದಲಿಗೆ ಉಮ್ರಾನ್ ಮಲಿಕ್‌ಗೆ ಅವಕಾಶ ದೊರೆತಿದೆ.
ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡಿದ್ದ ಕುಲ್‌ದೀಪ್ ಸೇನ್ ಮೊದಲ ಪಂದ್ಯದಲ್ಲಿ ಭರವಸೆಯ ಪ್ರದರ್ಶನ ನೀಡಿದ್ದರು. ಅಲ್ಲದೆ ಒಂದು ವಿಕೆಟ್ ಅಂತರದಿಂದ ಸೋಲು ಅನುಭವಿಸಿದ್ದ ಆ ಪಂದ್ಯದಲ್ಲಿ ಸೇನ್ ಎರಡು ವಿಕೆಟ್ ಪಡೆದುಕೊಂಡಿದ್ದರು. ಹಾಗಿದ್ದರೂ ಈ ಪಂದ್ಯದಲ್ಲಿ ಸೇನ್‌ಗೆ ಅವಕಾಶ ಯಾಕೆ ದೊರೆತಿಲ್ಲ ಎಂಬುದು ಕ್ರಿಕೆಟ್ ಅಭಿಮಾನಿಗಳ ಪ್ರಶ್ನೆ. ಇದಕ್ಕೆ ಬಿಸಿಸಿಐ ಮಾಹಿತಿ ನೀಡಿದೆ.

ಸೇನ್ ಆಯ್ಕೆಗೆ ಲಭ್ಯವಿಲ್ಲ ಎಂದ ರೋಹಿತ್ ಶರ್ಮಾ
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಟಾಸ್ ಸಂದರ್ಭದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಿದರು. ಇದರಲ್ಲಿ ಕುಲ್‌ದೀಪ್ ಸೇನ್ ಆ್ಕೆಗೆ ಲಭ್ಯವಿರಲಿಲ್ಲ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್‌ಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿದೆ.

ಮಾಹಿತಿ ನೀಡಿದ ಬಿಸಿಸಿಐ
ಇನ್ನು ಕುಲ್‌ದೀಪ್ ಸೇನ್ ಈ ಪಂದ್ಯದಲ್ಲಿ ಯಾವ ಕಾರಣಕ್ಕೆ ಲಭ್ಯವಿಲ್ಲ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಕುಲ್‌ದೀಪ್ ಸೇನ್ ಬೆನ್ನು ನೋವಿಗೆ ಒಳಗಾಗಿದ್ದರು. ವೈದ್ಯಕೀಯ ತಂಡ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದ ಕಾರಣ ಅವರು ಈ ಪಂದ್ಯಕ್ಕೆ ಲಭ್ಯವಿರಲಿಲ್ಲ ಎಂದು ಬಿಸಿಸಿಐ ಎರಡನೇ ಪಂದ್ಯದ ಹಿನ್ನೆಲೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಮೊದಲ ಪಂದ್ಯದಲ್ಲಿ ಕುಲ್‌ದೀಪ್ ಸೇನ್ 5 ಓವರ್‌ಗಳ ಬ್ಯಾಟಿಂಗ್ ನಡೆಸಿ 37 ರನ್‌ಗಳನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ಕೆಳ ಕ್ರಮಾಂಕದ ಎರಡು ವಿಕೆಟ್‌ಗಳು ಸೇನ್ ಪಾಲಾಗಿದ್ದವು.

ಗಾಯಗೊಂಡು ಮೈದಾನ ತೊರೆದ ನಾಯಕ
ಇತ್ತ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ. ಫೀಲ್ಡಿಂಗ್ ಸಂದರ್ಭದಲ್ಲಿ ಚೆಂಡು ತಗುಲಿದ ಕಾರಣ ನಾಯಕ ರೋಹಿತ್ ಶರ್ಮಾ ಬೆರಳಿಗೆ ಗಾಯವಾಗಿದೆ. ಹೀಗಾಗಿ ಅವರು ಮೈದಾನವನ್ನು ತೊರೆದಿದ್ದಾರೆ. ನಾಯಕ ರೋಹಿತ್ ಶರ್ಮಾ ಸ್ಕ್ಯಾನಿಂಗ್‌ಗೆ ಒಳಗಾಗುವ ಹಿನ್ನೆಲೆಯಲ್ಲಿ ಮೈದಾನವನ್ನು ತೊರೆದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ನಾಯಕನ ಅನುಪಸ್ಥಿತಿಯಲ್ಲಿ ಉಪ ನಾಯಕ ಕೆಎಲ್ ರಾಹುಲ್ ತಂಡದ ಜವಾಬ್ಧಾರಿ ಹೊತ್ತಿದ್ದಾರೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್
ಬೆಂಚ್: ಶಹಬಾಜ್ ಅಹ್ಮದ್, ಕುಲದೀಪ್ ಸೇನ್, ರಜತ್ ಪಾಟಿದಾರ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ
ಬಾಂಗ್ಲಾದೇಶ ಆಡುವ ಬಳಗ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್ (ನಾಯಕ), ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಎಬಾದತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಹಸನ್ ಮಹಮೂದ್, ಯಾಸಿರ್ ಅಲಿ, ತಸ್ಕಿನ್ ಅಹ್ಮದ್, ನೂರುಲ್ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications