For Quick Alerts
ALLOW NOTIFICATIONS  
For Daily Alerts
 

ಮೂರನೇ ಏಕದಿನ ಪಂದ್ಯಕ್ಕೆ ರೋಹಿತ್ ಅಲಭ್ಯ ಸಾಧ್ಯತೆ: ಟೆಸ್ಟ್ ಸರಣಿಗೂ ಅನುಮಾನ!

India vs Bangladesh: Rohit Sharma likely to miss final ODI of series

ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ನಡೆಯುತ್ತಿದ್ದು ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಭಾರೀ ಪೈಪೋಟಿ ಎದುರಾಗಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಪಂದ್ಯದ ಆರಂಭದಲ್ಲಿಯೇ ಗಾಯಕ್ಕೊಳಗಾಗಿದ್ದು ಅಂತಿಮ ಪಂದ್ಯಕ್ಕೆ ಪಂದ್ಯಕ್ಕೆ ಅಲಭ್ಯವಾಗುವ ಸಾಧ್ಯತೆಯಿದೆ. ಅಲ್ಲದೆ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೂ ರೋಹಿತ್ ಶರ್ಮಾ ಅನುಮಾನ ಎನ್ನಲಾಗಿದೆ.

ಟಾಸ್ ಗೆದ್ದ ಬಾಂಗ್ಲಾದೇಶ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಈ ಸಂದರ್ಭದಲ್ಲಿ ಫೀಲ್ಡಿಂಗ್ ನಡೆಸುತ್ತಿದ್ದ ರೋಹಿತ್ ಶರ್ಮಾ ಚೆಂಡು ಹಿಡಿಯುವ ಸಂದರ್ಭದಲ್ಲಿ ಕೈಬೆರಳಿಗೆ ಗಾಯಮಾಡಿಕೊಂಡಿದ್ದರು. ಅತಿಯಾದ ನೋವು ಕಾಣಿಸಿಕೊಂಡ ಕಾರಣ ರೋಹಿತ್ ಶರ್ಮಾ ಶರ್ಮಾ ತಕ್ಷಣವೇ ಮೈದಾನವನ್ನು ತೊರೆದು ಸ್ಕ್ಯಾನಿಂಗ್‌ಗಾಗಿ ತೆರಳಿದ್ದರು.

ಬ್ಯಾಟಿಂಗ್‌ಗೆ ಇಳಿದ ರೋಹಿತ್ ಶರ್ಮಾ: ಇನ್ನು ಬೆರಳಿಗೆ ಗಾಯವಾಗಿರುವ ಹೊರತಾಗಿಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ರೋಹಿತ್ ಶರ್ಮಾ ಕಣಕ್ಕಿಳಿದು ಬ್ಯಾಟಿಂಗ್ ನಡೆಸಿದ್ದಾರೆ. ಟೀಮ್ ಇಂಡಿಯಾ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಬಳಿಕ ರೋಹಿತ್ ಶರ್ಮಾ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಬ್ಯಾಟಿಂಗ್ ನಡೆಸಿದ್ದಾರೆ.

ಶನಿವಾರ ನಡೆಯಲಿದೆ ಅಂತಿಮ ಪಂದ್ಯ: ಇನ್ನು ಈ ಸರನಿಯ ಅಂತಿಮ ಪಂದ್ಯ ಶನಿವಾರ ನಡೆಯಲಿದ್ದು ಚಿತ್ತಗಾಂಗ್‌ನಲ್ಲಿ ಈ ಪಂದ್ಯ ನಡೆಯಲಿದೆ. ಗಾಯಗೊಂಡಿರುವ ರೋಹಿತ್ ಶರ್ಮಾ ಈ ಪಂದ್ಯದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ಸಂಪೂರ್ಣವಾಗಿ ಸಜ್ಜಾಗುವ ಪ್ರಯತ್ನ ನಡೆಸಲಿದ್ದಾರೆ.

ಟೆಸ್ಟ್ ಸರಣಿಗೂ ಅನುಮಾನ?: ಇನ್ನು ಟೀಮ್ ಇಂಡಿಯಾ ಏಕದಿನ ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಡಿಸೆಂಬರ್ 14ರಿಂದ ಈ ಸರಣಿ ಆರಂಬವಾಗಲಿದ್ದು ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಟೀಮ್ ಇಂಡಿಯಾ ಕಣಕ್ಕಿಳಿಯಬೇಕಾಗಿತ್ತು. ಆದರೆ ರೋಹಿತ್ ಶರ್ಮಾ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಟೆಸ್ಟ್ ಸರಣಿಯಲ್ಲಿ ಶರ್ಮಾ ಭಾಗವಹಿಸಲಿದ್ದಾರಾ ಎಂಬುದು ಪ್ರಶ್ನೆಯಾಗಿದೆ. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ನಡೆಸಿರುವ ಕಾರಣ ಅವರ ಬೆರಳಿನ ಮೂಳೆ ಮುರಿತಕ್ಕೊಳಗಾಗಿರುವ ಸಾಧ್ಯತೆಯಿಲ್ಲ. ಹೀಗಾಗಿ ಒಂದು ವಾರದಲ್ಲಿ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಮುಂದಿನ ಪಂದ್ಯಗಳಿಗೆ ಲಭ್ಯತೆ ಬಗ್ಗೆ ಇನ್ನಷ್ಟೇ ಸ್ಪಷ್ಟತೆಗಳು ದೊರೆಯಬೇಕಿದೆ.

Story first published: Wednesday, December 7, 2022, 19:58 [IST]
Other articles published on Dec 7, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+