Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಲಾರ್ಡ್ಸ್ ಮಾದರಿಯಲ್ಲಿ ಭಾರತ-ಬಾಂಗ್ಲಾದೇಶ ಟೆಸ್ಟ್ ಪ್ರಾರಂಭ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಆರಂಭವಾಗಲಿದೆ. ಈ ಟೆಸ್ಟ್ ಪಂದ್ಯಕ್ಕೆ ಕಾನ್ಪುರದ ಗ್ರೀನ್ ಪಾರ್ಕ್‌ ಸ್ಟೇಡಿಯಂ ಅತಿಥ್ಯೆ ವಹಿಸಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಈ ಪಂದ್ಯವನ್ನು ವಿಶೇಷ ರೀತಿಯಲ್ಲಿ ಪ್ರಾರಂಭಿಸಲು ಕೂಡ ಬಿಸಿಸಿಐ ನಿರ್ಧಾರಿಸಿದೆ.

ಗ್ರೀನ್ ಪಾರ್ಕ್‌ ಸ್ಟೇಡಿಯಂಯಲ್ಲಿ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಲಾರ್ಡ್ಸ್ ಮಾದರಿಯಲ್ಲಿ ಗಂಟೆ ಬಾರಿಸುವ ಮೂಲಕ ಚಾಲನೆ ಸಿಗಲಿದೆ. ಈಗಾಗಲೇ ಗಂಟೆ ಗ್ರೀನ್‌ಪಾರ್ಕ್‌ಗೆ ಆಗಮಿಸಿದೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್ ಮತ್ತು ರವಿಶಾಸ್ತ್ರಿ ಅವರು ಗಂಟೆ ಬಾರಿಸುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಲಿದ್ದಾರೆ. 76 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗ್ರೀನ್ ಪಾರ್ಕ್‌ ಸ್ಟೇಡಿಯಂನಲ್ಲಿ ಗಂಟೆ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಪಂದ್ಯಕ್ಕೆ ಚಾಲನೆ ದೊರೆಯುತ್ತಿರುವುದು.

India vs Bangladesh second Test starts by ringing the bell in Lords style

ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಹಿರಿಯ ಅಧಿಕಾರಿ, 'ವಿಶ್ವದ ಹಲವು ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಪಂದ್ಯವನ್ನು ಗಂಟೆ ಬಾರಿಸುವ ಮೂಲಕ ಪ್ರಾರಂಭಿಸಲಾಗುತ್ತದೆ. ಈ ರೀತಿ ಗಂಟೆ ಬಾರಿಸುವ ಮೂಲಕ ಪಂದ್ಯವನ್ನು ಪ್ರಾರಂಭಿಸುವುದಕ್ಕೆ ಮುಖ್ಯ ಕಾರಣವಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಶೇಷ ಛಾಪು ಮೂಡಿಸಿದ ಮಾಜಿ ದಿಗ್ಗಜ ಆಟಗಾರರನ್ನು ಗೌರವಿಸುವುದು ಇದರ ಮುಖ್ಯ ಉದ್ದೇಶವಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

2007ರಲ್ಲಿ ಕ್ರಿಕೆಟ್‌ನ ಮೆಕ್ಕಾ ಎಂದೇ ಖ್ಯಾತಿ ಪಡೆದಿರುವ ಇಂಗ್ಲೆಂಡ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಗಂಟೆ ಬಾರಿಸಿ ಪಂದ್ಯವನ್ನು ಆರಂಭಿಸುವ ವಿಧಾನವನ್ನು ಪರಿಚಯಿಸಲಾಯಿತು. ಈ ವೇಳೆ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಪಂದ್ಯ ನಡೆದಿತ್ತು. ಆಗ ಹಲವು ಮಾಜಿ ಆಟಗಾರರನ್ನು ಸನ್ಮಾನಿಸಲಾಗಿತ್ತು. ಈಗ ಅಂತಹ ಸ್ಮರಣೀಯ ಕ್ಷಣಕ್ಕೆ ಗ್ರೀನ್ ಪಾರ್ಕ್ ಸಾಕ್ಷಿಯಾಗಲಿದೆ. ಭಾರತೀಯ ಕ್ರಿಕೆಟ್‌ ಅಭಿಮಾನಿಗಳಲ್ಲಿಯೂ ಕುತೂಹಲ ಹೆಚ್ಚಾಗಿದೆ.

ಎರಡನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

Story first published: Wednesday, September 25, 2024, 14:35 [IST]
Other articles published on Sep 25, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+