Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN ಭಾರತ-ಬಾಂಗ್ಲಾದೇಶ ಎರಡನೇ ಟೆಸ್ಟ್; ಟಾಸ್ ವರದಿ, ಪ್ಲೇಯಿಂಗ್-11 ತಿಳಿಯಿರಿ

ನಹಿದ್ ರಾಣಾ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಮಾಡಲಿದೆ.

ಕಾನ್ಪುರದಲ್ಲಿ ಮಳೆಯಿಂದಾಗಿ ಔಟ್‌ ಫೀಲ್ಡ್‌ ಒದ್ದೆ ಆಯಿತು. ಈ ಕಾರಣದಿಂದಾಗಿ ಬೆಳಗ್ಗೆ 9:30 ಗಂಟೆಗೆ ನಡೆಯಬೇಕಿದ್ದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ಟಾಸ್ ವಿಳಂಬವಾಗಿದೆ.

India vs Bangladesh Second Test Toss Report

ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು 280 ರನ್‌ಗಳಿಂದ ಸೋಲಿಸಿತ್ತು. ಇದೀಗ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಬಾಂಗ್ಲಾದೇಶವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಲು ಭಾರತ ಸಜ್ಜಾಗಿದೆ.

ಭಾರತ ತಂಡ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಕಾನ್ಪುರ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ತವರಿನಲ್ಲಿ ಕುಲ್‌ದೀಪ್ ಯಾದಬ್ ಆಡುವ ನಿರೀಕ್ಷೆಯಿತ್ತು. ಆದರೆ ನಾಯಕ ರೋಹಿತ್ ಶರ್ಮಾ ಹಳೆಯ ತಂಡದೊಂದಿಗೆ ಎರಡನೇ ಟೆಸ್ಟ್ ಆಡುತ್ತಿದ್ದಾರೆ.

ಮತ್ತೊಂದೆಡೆ ಬಾಂಗ್ಲಾದೇಶ ಮೊದಲ ಟೆಸ್ಟ್ ಸೋಲಿನ ಬಳಿಕ ಎರಡು ಬದಲಾವಣೆ ಮಾಡಿದೆ. ನಹಿದ್ ರಾಣಾ ಮತ್ತು ತಸ್ಕಿನ್ ಅಹ್ಮದ್ ಅವರ ಸ್ಥಾನದಲ್ಲಿ ತೈಜುಲ್ ಇಸ್ಲಾಂ ಮತ್ತು ಖಾಲಿದ್ ಅಹ್ಮದ್ ಅವರಿಗೆ ಪ್ಲೇಯಿಂಗ್-11 ರಲ್ಲಿ ಅವಕಾಶ ನೀಡಲಾಗಿದೆ. ಭಾರತ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ತಸ್ಕಿನ್ ಅಹ್ಮದ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆದರೂ ಅವರನ್ನು ತಂಡದಿಂದ ಕೈ ಬಿಟ್ಟಿರುವುದು ಅಚ್ಚರಿ ತಂದಿದೆ.

ಭಾರತ vs ಬಾಂಗ್ಲಾದೇಶ ಪ್ಲೇಯಿಂಗ್-11

ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ: ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.

Story first published: Friday, September 27, 2024, 10:40 [IST]
Other articles published on Sep 27, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+