
ಗಾಯದ ಸಮಸ್ಯೆಗೆ ಒಳಗಾದ ಬೌಲರ್‌ಗಳು
ಇನ್ನು ಟೀಮ್ ಇಂಡಿಯಾದ ಯುವ ಬೌಲರ್ ಕುಲ್‌ದೀಪ್ ಸೇನ್ ಈ ಸರಣಿಯ ಮೊದಲ ಪಂದ್ಯದಲ್ಲಿ ಚೊಚ್ಚಲ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು. ಆದರೆ ಈ ಪಂದ್ಯದ ಸಂದರ್ಭದಲ್ಲಿಯೇ ಸೇನ್ ಬೆನ್ನು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಎರಡನೇ ಪಂದ್ಯಕ್ಕೂ ಸೇನ್ ಅಲಭ್ಯವಾಗಿದ್ದರು. ಇದೀಗ ಅಂತಿಮ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂಬುದನ್ನು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಮತ್ತೊಂದೆಡೆ ಆಲ್‌ರೌಂಡರ್ ದೀಪಕ್ ಚಹರ್ ಕೂಡ ಗಾಯದ ಸಮಸ್ಯೆಗೆ ಒಳಗಾಗಿದ್ದು ಅವರು ಕೂಡ ಅಂತಿಮ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ.

ಕುಲ್‌ದೀಪ್ ಯಾದವ್ ಸೇರ್ಪಡೆ
ಮೂವರು ಆಟಗಾರರು ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಅಂತಿಮ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಸ್ಪಿನ್ನರ್ ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಂತಿಮ ಪಂದ್ಯದಲ್ಲಿ ಕುಲ್‌ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆಯೇ ಎಂಬುದು ಮಾತ್ರ ಕುತೂಹಲವಾಗಿದೆ.
ಇನ್ನು ಟೀಮ್ ಇಂಡಿಯಾ ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಎರಡು ಸೋಲು ಅನುಭವಿಸಿದ್ದು ಅಂತಿಮ ಪಂದ್ಯದಲ್ಲಿ ಗೆದ್ದು ವೈಟ್‌ವಾಶ್ ಅವಮಾನದಿಂದ ಪಾರಾಗಲು ಸರ್ವಪ್ರಯತ್ನ ನಡೆಸಲಿದೆ.

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ
ಕೆಎಲ್ ರಾಹುಲ್ (ನಾಯಕ) (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್