ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಏಕದಿನ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ

India vs Bangladesh: Tamim Iqbal led Bangladesh announced full-strength squad for ODI series against India

ನ್ಯೂಜಿಲೆಂಡ್ ಪ್ರವಾಸದ ಬಳಿಕ ಟೀಮ್ ಇಂಡಿಯಾ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು ಏಕದಿನ ಹಾಗೂ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿಗೆ ಟೀಮ್ ಇಂಡಿಯಾ ಪಡೆಯನ್ನು ಈಗಲೇ ಆಯ್ಕೆ ಮಾಡಲಾಗಿದ್ದು ಇದೀಗ ಆತಿಥೇಯ ಬಾಂಗ್ಲಾದೇಶ ತಂಡದ ಆಟಗಾರರ ಬಳಗವನ್ನು ಕೂಡ ಘೋಷಣೆ ಮಾಡಲಾಗಿದೆ.

ಸಂಪೂರ್ಣ ಸಾಮರ್ಥ್ಯದ ತಂಡವನ್ನು ಬಾಂಗ್ಲಾದೇಶ ಘೋಷಣೆ ಮಾಡಿದ್ದು ತಮೀಮ್ ಇಕ್ಬಾಲ್ ಬಾಂಗ್ಲಾ ಪಡೆಯನ್ನು ಈ ಸರಣಿಯಲ್ಲಿ ಮುನ್ನಡೆಸಲಿದ್ದಾರೆ. ಇನ್ನು ಬಾಂಗ್ಲಾದೇಶದ ಅನುಭವಿ ಆಟಗಾರರಾದ ಶಕೀಬ್ ಅಲ್ ಹಸನ್ ಹಾಗೂ ಮುಸ್ತಫಿಜುರ್ ರಹ್ಮಾನ್ ಈ ಸರಣಿಗೆ ಲಭ್ಯವಿದ್ದಾರೆ. ಈ ಸರಣಿಗೆ ಟೀಮ್ ಇಂಡಿಯಾ ಡಿಸೆಂಬರ್ 1ರಂದು ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದ್ದು ಕಿಬೀಸ್ ಪ್ರವಾಸದಿಂದ ಹೊರಗುಳಿದಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಕಮ್‌ಬ್ಯಾಕ್ ಮಾಡಲಿದ್ದಾರೆ.

ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಅಮಾನತು ಶಿಕ್ಷೆ ನೀಡಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಏಕದಿನ ಸರಣಿಗೆ ಆಯ್ಕೆಯಾದ ಬಾಂಗ್ಲಾದೇಶ ತಂಡ: ತಮೀಮ್ ಇಕ್ಬಾಲ್ (ನಾಯಕ), ಯಾಸಿರ್ ಅಲಿ, ಮುಶ್ಫಿಕರ್ ರಹೀಮ್, ನಜ್ಮುಲ್ ಹೊಸೈನ್, ಲಿಟ್ಟನ್ ದಾಸ್, ಅನಾಮುಲ್ ಹಕ್, ನೂರುಲ್ ಹಸನ್, ಶಾಕಿಬ್ ಅಲ್ ಹಸನ್, ಮೆಹಿದಿ ಹಸನ್, ಮಹಮ್ಮದುಲ್ಲಾ, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ನಸುಮ್ ಅಹ್ಮದ್

ಭಾರತ ತಂಡದಲ್ಲಿ ಎರಡು ಬದಲಾವಣೆ: ಇನ್ನು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಆಯ್ಕೆ ಮಾಡಿರುವ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಸಂಪೂರ್ಣವಾಗಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ಸರಣಿಯಿಂದಲೂ ಹೊರಗುಳಿಯುತ್ತಿದ್ದಾರೆ. ಹೀಗಾಗಿ ಅವರ ಬದಲಿಗೆ ಶಹ್ಬಾಜ್ ಅಹ್ಮದ್‌ಗೆ ಅವಕಾಶ ದೊರೆತಿದ್ದು ಯುವ ಆಟಗಾರ ಯಶ್ ದಯಾಳ್ ಬದಲಿಗೆ ಕುಲ್‌ದೀಪ್ ಸೇನ್‌ಗೆ ಅವಕಾಶ ದೊರೆತಿದೆ.

ಜಿಂಬಾಬ್ವೆ ವಿರುದ್ಧ ನಾಯಕತ್ವ ಕಿತ್ತುಕೊಂಡು ಕೆಎಲ್ ರಾಹುಲ್‌ಗೆ ನೀಡಿದ್ದಕ್ಕೆ ಶಿಖರ್ ಧವನ್ ಏನೆಂದರು?ಜಿಂಬಾಬ್ವೆ ವಿರುದ್ಧ ನಾಯಕತ್ವ ಕಿತ್ತುಕೊಂಡು ಕೆಎಲ್ ರಾಹುಲ್‌ಗೆ ನೀಡಿದ್ದಕ್ಕೆ ಶಿಖರ್ ಧವನ್ ಏನೆಂದರು?

ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೇನ್

Story first published: Thursday, November 24, 2022, 20:39 [IST]
Other articles published on Nov 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X