Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND VS ZIM: ಮೆಲ್ಬೋರ್ನ್‌ ತಲುಪಿದ ಟೀಂ ಇಂಡಿಯಾ, ಶುಕ್ರವಾರದಿಂದ ಅಭ್ಯಾಸ ಆರಂಭ

India Vs Bangladesh: Team India Reach Melbourne On Nov 3, Players Will Practice On Nov 4

ಅಡಿಲೇಡ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದ ನಂತರ ಟೀಂ ಇಂಡಿಯಾ ಗುರುವಾರ ಮೆಲ್ಬೋರ್ನ್ ತಲುಪಿದೆ. ಭಾನುವಾರ ಮೆಲ್ಬೋನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಜಿಂಬಾಬ್ವೆ ವಿರುದ್ಧ ತನ್ನ ಕೊನೆಯ ಸೂಪರ್ 12 ಪಂದ್ಯದಲ್ಲಿ ಸೆಣಸಲಿದೆ.

ಭಾರತ ಸೆಮಿಫೈನಲ್ ತಲುಪಲು ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸುವುದು ಮುಖ್ಯವಾಗಿದೆ. ಗುರುವಾರ ಮೆಲ್ಬೋರ್ನ್ ತಲುಪಿದ ಬಳಿಕ ವಿಶ್ರಾಂತಿ ಪಡೆಯಲಿರುವ ಟೀಂ ಇಂಡಿಯಾ ಆಟಗಾರರು ಶುಕ್ರವಾರ ಅಭ್ಯಾಸದಲ್ಲಿ ಭಾಗವಹಿಸಲಿವೆ. ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಇತರರು ಐಚ್ಛಿಕ ಅಭ್ಯಾಸವನ್ನು ನಡೆಸಲಿದ್ದಾರೆ.

ಟೀಂ ಇಂಡಿಯಾ ಪರವಾಗಿ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಕೆಎಲ್ ರಾಹುಲ್ ಕೂಡ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಕೂಡ ತಮ್ಮ ಫಾರ್ಮ್‌ ಕಂಡುಕೊಂಡರೆ ಭಾರತಕ್ಕೆ ಜಯ ಸುಲಭವಾಗಲಿದೆ.

ಭಾರತದ ಬೌಲಿಂಗ್ ಸಾಕಷ್ಟು ಸುಧಾರಣೆ ಕಂಡಿದೆ. ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅರ್ಷ್‌ದೀಪ್ ಸಿಂಗ್ ಭಾರತದ ಪ್ರಮುಖ ವಿಕೆಟ್ ಟೇಕರ್ ಆಗಿದ್ದಾರೆ. ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಲ್ಲದೆ ಬ್ಯಾಟ್‌ನಲ್ಲೂ ರನ್ ಗಳಿಸುವ ಕ್ಷಮತೆ ಹೊಂದಿದ್ದಾರೆ.

ಇನ್ನು ಪಂದ್ಯಾವಳಿಯಲ್ಲಿ ಸತತ ವೈಫಲ್ಯ ಅನುಭವಿಸಿರುವ ದಿನೇಶ್ ಕಾರ್ತಿಕ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ. ಪಾಕಿಸ್ತಾನದ ವಿರುದ್ಧದ ಪಂದ್ಯವನ್ನು ಹೊರತುಪಡಿಸಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಉತ್ತಮ ಪ್ರದರ್ಶನ ನೀಡಿಲ್ಲ, ಅವರೂ ಕೂಡ ಲಯ ಕಂಡುಕೊಂಡರೆ ಭಾರತದ ಗೆಲುವು ಸುಲಭವಾಗಲಿದೆ.

India Vs Bangladesh: Team India Reach Melbourne On Nov 3, Players Will Practice On Nov 4

ಮೆಲ್ಬೋರ್ನ್ ಅಂಗಳದಲ್ಲಿ ಟೀಂ ಇಂಡಿಯಾ

ಮೆಲ್ಬೋನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಟೀಂ ಇಂಡಿಯಾ ಇದುವರೆಗೂ ಐದು ಟಿ20 ಪಂದ್ಯಗಳನ್ನು ಆಡಿದೆ. ಇಲ್ಲಿ ಆಡಿದ ಐದು ಪಂದ್ಯಗಳಲ್ಲಿ ಭಾರತ ಮೂರು ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಒಂದು ಪಂದ್ಯದಲ್ಲಿ ಸೋಲನುಭವಿಸಿದೆ. ಇನ್ನೊಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯವಾಗಿದೆ.

2008ರಲ್ಲಿ ಮೆಲ್ಬೋರ್ನ್ ಅಂಗಳದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 74 ರನ್‌ಗಳಿಗೆ ಆಲೌಟ್‌ ಆಗಿದ್ದು, ಇದು ಭಾರತದ ಕಡಿಮೆ ಟಿ20 ಸ್ಕೋರ್ ಆಗಿದೆ. ಎಂಸಿಜಿಯಲ್ಲಿ ನಡೆದ ಟಿ20 ವಿಶ್ವಕಪ್‌ನ ಆರಂಭಿಕ ಮುಖಾಮುಖಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿತ್ತು. ಎಂಸಿಜಿಯಲ್ಲಿ ಆಸ್ಟ್ರೇಲಿಯಾ ನಾಯಕ ಆರನ್ ಫಿಂಚ್ ನಂತರ ವಿರಾಟ್ ಕೊಹ್ಲಿ ರನ್ ಗಳಿಸಿದ ಎರಡನೇ ಪ್ರಮುಖ ಆಟಗಾರ ಎನಿಸಿಕೊಂಡಿದ್ದಾರೆ.

ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್ ಮೊಹಮ್ಮದ್ ಶಮಿ.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

Story first published: Thursday, November 3, 2022, 21:06 [IST]
Other articles published on Nov 3, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+