
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಢಾಕಾದಲ್ಲಿ ನಡೆಯುತ್ತಿದೆ. ಮೊದಲ ಎರಡು ದಿನಗಳ ಆಟದಲ್ಲಿ ಭಾರತ ತಂಡ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದು ಬೌಲಿಂಗ್‌ನ ಬಳಿಕ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದೆ. ಇದೀಗ ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದೆ.
ಎರಡನೇ ದಿನದಾಟದ ಅಂತ್ಯದಲ್ಲಿ ಬ್ಯಾಟಿಂಗ್ ಆರಂಭಿಸಿರುವ ಬಾಂಗ್ಲಾದೇಶ ಈಗಾಗಲೇ ಒಂದು ವಿಕೆಟ್ ಕಳೆದುಕೊಂಡಿದ್ದು ಮೂರನೇ ದಿನದಾಟ ಆರಂಭಿಸಿದೆ. ಮೂರನೇ ದಿನ ಭಾರತದ ಬೌಲಿಂಗ್ ವಿಭಾಗದ ಪ್ರದರ್ಶನದ ಮೇಲೆ ಕುತೂಹಲ ಮೂಡಿಸಿದ್ದು ಭಾರತದ ಬೌಲಿಂಗ್ ದಾಳಿಯ ವಿರುದ್ಧ ಬಾಂಗ್ಲಾ ಪಡೆ ಎಷ್ಟು ದಿಟ್ಟವಾಗಿ ಆಡಲಿದೆ ಎಂಬುದು ಪ್ರಶ್ನೆಯಾಗಿದೆ.
Live ಸ್ಕೋರ್ ಹೀಗಿದೆ
ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ 227 ರನ್‌ಗಳಿಗೆ ಆಲಟ್ ಮಾಡಿದ ಟೀಮ್ ಇಂಡಿಯಾ ಬಳಿಕ ಬ್ಯಾಟಿಂಗ್‌ನಲ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿತ್ತು. ಆದರೆ ರಿಶಭ್ ಪಂತ್ ಹಾಗೂ ಶ್ರೇಯ್ ಐಯ್ಯರ್ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ನೆರವಾಗಿದ್ದಾರೆ. ಈ ಜೋಡಿ ಭರ್ಜರಿ 159 ರನ್‌ಗಳ ಜೊತೆಯಾಟ ನಿಡುವ ಮೂಲಕ ಭಾರತ ತಂಡಕ್ಕೆ ಆಸರೆಯಾದರು. ರಿಷಭ್ ಪಂತ್ ಈ ಪಂದ್ಯದಲ್ಲಿ 93 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಶ್ರೇಯಸ್ ಐಯ್ಯರ್ 87 ರನ್‌ಗಳಿಗೆ ಔಟಾದರು. ಈ ಜೋಡಿ ಬೇರ್ಪಟ್ಟ ಬಳಿಕ ಮತ್ತೆ ಕುಸಿತ ಕಂಡ ಭಾರತ 314 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 87 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.
ಅಗ್ರ ಕ್ರಮಾಂಕದ ಆಟಗಾರರಿಂದ ನೀರಸ ಪ್ರದರ್ಶನ: ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಆಟಗಾರರಿಂದ ನೀರಸ ಪ್ರದರ್ಶನ ವ್ಯಕ್ತವಾಯಿತು. ನಾಯಕ ರಾಹುಲ್ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರ ಶುಬ್ಮನ್ ಗಿಲ್ 20 ರನ್‌ಗೆ ಔಟಾದರು. ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ತಲಾ 24 ರನ್‌ಗಳಿಸಲಷ್ಟೇ ಶಕ್ತವಾದರು