ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

12 ವರ್ಷಗಳ ಬಳಿಕ ಭಾರತದ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್: ಶಮಿ ಬದಲಿಗೆ ಅವಕಾಶ ಗಿಟ್ಟಿಸಿಕೊಂಡ ವೇಗಿ

India vs Bangladesh Test Series: Jaydev Unadkat set to replace Mohammed Shami for 2 match Test series

ಭಾರತ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿದೆ. ಮೂರು ಪಂದ್ಯಗಳ ಏಕದಿನ ಸರಣಿ ಅಂತ್ಯವಾಗುತ್ತಿದ್ದು ಡಿಸೆಂಬರ್ 14 ಬುಧವಾರದಿಂದ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಏಕದಿನ ಸರಣಿಯನ್ನು ಕಳೆದುಕೊಂಡಿರುವ ಟೀಮ್ ಇಂಡಿಯಾ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದಲೂ ಭಾರತಕ್ಕೆ ಈ ಸರಣಿ ಬಹಳ ಮಹತ್ವದ್ದಾಗಿದೆ.

ಈ ಸರಣಿಗೆ ಮುನ್ನ ಟೀಮ್ ಇಂಡಿಯಾ ಕೆಲ ಗಾಯದ ಸಮಸ್ಯೆಯಿಂದ ಬಳಲುತ್ತಿದೆ. ಬೌಲಿಂಗ್‌ನಲ್ಲಿ ಅನುಭವಿ ಆಟಗಾರ ಮೊಹಮ್ಮದ್ ಶಮಿ ಗಾಯದ ಬೆನ್ನು ನೋವಿನ ಕಾರಣ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದರು. ಯುವ ವೇಗಿ ಉಮ್ರಾನ್ ಮಲಿಕ್ ಏಕದಿನ ಮಾದರಿಯಲ್ಲಿ ಬದಲಿ ಆಟಗಾರನಾಗಿ ಅವಕಾಶ ಪಡೆಉದಕೊಂಡಿದ್ದರು. ಆದರೆ ಟೆಸ್ಟ್ ಸರಣಿಗೆ ಯಾರನ್ನೂ ಬದಲಿ ಆಟಗಾರನಾಗಿ ಘೋಷಿಸಿಲ್ಲ. ಈ ಬಗ್ಗೆ ಇದೀಗ ಕುತೂಹಲಕಾರಿ ಮಾಹಿತಿ ಹೊರಬಿದ್ದಿದ್ದು ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆಯುತ್ತಿರುವ ಅನುಭವಿ ಆಟಗಾರ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ.

ಇದು ನಿಜವಾಗಿಯೂ ಭಾರತೀಯ ತಂಡವಾ?: ಮದನ್ ಲಾಲ್ ಟೀಕೆಇದು ನಿಜವಾಗಿಯೂ ಭಾರತೀಯ ತಂಡವಾ?: ಮದನ್ ಲಾಲ್ ಟೀಕೆ

ಮೊಹಮ್ಮದ್ ಶಮಿಗೆ ಉನಾದ್ಕಟ್ ಬದಲಿ ಆಟಗಾರ

ಮೊಹಮ್ಮದ್ ಶಮಿಗೆ ಉನಾದ್ಕಟ್ ಬದಲಿ ಆಟಗಾರ

ಗಾಯದಿಂದಾಗಿ ಬಾಂಗ್ಲಾದೇಶ ಪ್ರವಾಸದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಬದಲಿಗೆ ಟೆಸ್ಟ್ ಸರಣಿಯಲ್ಲಿ ಅನುಭವಿ ವೇಗಿ ಜಯ್‌ದೇವ್ ಉನಾದ್ಕಟ್ ಸ್ಥಾನವನ್ನು ಪಡೆದುಕೊಳ್ಳಲಿದ್ದಾರೆ. ಈಗಾಗಲೇ ಭಾರತ ತಂಡದ ಕರೆ ಸ್ವೀಕರಿಸಿರುವ ಉನಾದ್ಕಟ್ ಶೀಘ್ರದಲ್ಲಿಯೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬಿಸಿಸಿಐ ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಮಾಡಬೇಕಿದ್ದು ಬಿಸಿಸಿಐ ಮೂಲಗಳು ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಉನಾದ್ಕಟ್

ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಉನಾದ್ಕಟ್

ಜಯ್‌ದೇವ್ ಉನಾದ್ಕಟ್ ಐಪಿಎಲ್ ಹಾಗೂ ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯವಾಗಿದ್ದು ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ತಂಡದ ನಾಯಕನಾಗಿ ಮುನ್ನಡೆಸುತ್ತಿದ್ದು ವಿಜಯ್ ಹಜಾರೆ ಟೂರ್ನಿಯಲ್ಲಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಆವೃತ್ತಿಯ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ 19 ವಿಕೆಟ್ ಪಡೆದು ಮಿಂಚಿದ್ದಾರೆ. ಸದ್ಯ ರಾಜ್‌ಕೋಟ್‌ನಲ್ಲಿದ್ದು ವಿಸಾ ಪ್ರಕ್ರಿಯೆ ಮುಗಿದ ಬಳಿಕ ಬಾಂಗ್ಲಾದೇಶಕ್ಕೆ ಪ್ರಯಾಣಿಸಿ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಮೊಹಮ್ಮದ್ ಶಮಿ ಭುಜದ ನೋವಿಗೆ ತುತ್ತಾದ ಕಾರಣ ಈ ಸರಣಿಯಿಂದ ಹೊರಗುಳಿದಿದ್ದು ಉನಾದ್ಕಟ್‌ಗೆ ಇದು ಸುದೀರ್ಘ ಕಾಲದ ಬಳಿಕ ಟೀಮ್ ಇಂಡಿಯಾದ ಟೆಸ್ಟ್ ತಂಡದಲ್ಲಿ ಅವಕಾಶ ದೊರೆಯಲು ಕಾರಣವಾಗಿದೆ.

BAN vs IND 2022: 3ನೇ ಏಕದಿನ ಪಂದ್ಯದಲ್ಲಿ ಬ್ರೇಕ್ ಆಗಬಹುದಾದ 3 ದಾಖಲೆಗಳು

2010ರಲ್ಲಿ ಏಕೈಕ ಟೆಸ್ಟ್ ಪಂದ್ಯ ಆಡಿದ್ದ ಉನಾದ್ಕಟ್

2010ರಲ್ಲಿ ಏಕೈಕ ಟೆಸ್ಟ್ ಪಂದ್ಯ ಆಡಿದ್ದ ಉನಾದ್ಕಟ್

ಜಯ್‌ದೇವ್ ಉನಾದ್ಕಟ್ ತಮ್ಮ ಏಕೈಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು 2010ರಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಂಚೂರಿಯನ್‌ನಲ್ಲಿ ಆಡಿದ್ದರು. ಅದಾದ ಬಳಿಕ 7 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅವಕಾಶ ಪಡೆದುಕೊಂಡ ಇವರು 10 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು. ಆದರೆ ಟೀಮ್ ಇಂಡಿಯಾದಲ್ಲಿ ಸ್ಥಾನವನ್ನು ಭದ್ರಪಡಿಸಲು ಸಾಧ್ಯವಾಗಿರಲಿಲ್ಲ.

ಭಾರತಕ್ಕೆ ಕಾಡುತ್ತಿದೆ ಗಾಯದ ಸಮಸ್ಯೆ

ಭಾರತಕ್ಕೆ ಕಾಡುತ್ತಿದೆ ಗಾಯದ ಸಮಸ್ಯೆ

ಇನ್ನು ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಭಾರತ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ಈಗಾಗಲೇ ಗಾಯದ ಕಾರಣದಿಮದಾಗಿ ಜಸ್ಪ್ರೀತ್ ಬೂಮ್ರಾ, ರವೀಂದ್ರ ಜಡೇಜಾ ಅವರಂತಾ ಪ್ರಮುಖ ಆಟಗಾರರಿಲ್ಲದೆ ಬಾಂಗ್ಲಾದೇಶಕ್ಕೆ ಭಾರತ ಪ್ರವಾಸ ಕೈಗೊಂಡಿತ್ತು. ಬಳಿಕ ಮೊಹಮ್ಮದ್ ಶಮಿ, ನಾಯಕ ರೋಹಿತ್ ಶರ್ಮಾ, ದೀಪಕ್ ಚಹರ್ ಹಾಗೂ ಕುಲ್ದೀಪ್ ಸೇನ್ ಗಾಯಗೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವ ಬಗ್ಗೆ ಇನ್ನೂ ಸ್ಪಷ್ಟತೆಗಳು ದೊರೆತಿಲ್ಲ.

Story first published: Saturday, December 10, 2022, 13:47 [IST]
Other articles published on Dec 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X