ಈ ತಿಂಗಳು ಭಾರತ ಹಾಗೂ ಬಾಂಗ್ಲಾದೇಶಗಳ ನಡುವಣ ಟೆಸ್ಟ್ ನಡೆಯಲಿದೆ. ಈ ಸರಣಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತ ಪ್ರವಾಸ ಬೆಳೆಸಲಿರುವ ಬಾಂಗ್ಲಾ ಈ ವೇಳೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ ಕಾನ್ಪುರದಲ್ಲಿ ನಡೆಯಲಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಈ ಟೂರ್ನಿಗೆ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಆಯ್ಕೆದಾರರು ದುಲೀಪ್ ಟ್ರೋಫಿಯ ಮೇಲೆ ಚಿತ್ತ ನೆಟ್ಟಿದ್ದಾರೆ. ತಂಡದಲ್ಲಿ ಖಾಲಿ ಇರುವ ಕೆಲವು ಸ್ಥಾನಗಳಿಗೆ, ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ದುಲೀಪ್ ಟ್ರೋಫಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ತಂಡಕ್ಕೆ ಮರಳಲು ಭರವಸೆಯ ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ಬಿಸಿಸಿಐ ಮೂಲಗಳಿಂದ ತಿಳಿದು ಬಂದ ಮಾಹಿತಿಯ ಪ್ರಕಾರ, ರೋಹಿತ್ ಶರ್ಮಾ ಅವರೇ ಈ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ದೇಶೀಯ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಭಾಗವಹಿಸುತ್ತಿಲ್ಲ. ಆದರೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಕನಸು ಹೊಂದಿರುವ ಆಟಗಾರರು ದುಲೀಪ್ ಟ್ರೋಫಿಯಲ್ಲಿ ಬೆವರು ಹರಿಸುತ್ತಿದ್ದಾರೆ.
ಬಾಂಗ್ಲಾದೇಶ ಹಾಗೂ ಭಾರತ ನಡುವಣ ಟೆಸ್ಟ್ ಪಂದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಆಡಲಾಗುತ್ತಿದೆ. ಮಾರ್ಚ್ ತಿಂಗಳ ಬಳಿಕ ಟೀಮ್ ಇಂಡಿಯಾ ವೈಟ್ ಜೆರ್ಸಿಯಲ್ಲಿ ಕಣಕ್ಕೆ ಇಳಿಯಲಿದೆ. ಇನ್ನು ತಂಡದಲ್ಲಿ ಬಹುತೇಕ ಯಾವುದೇ ಬದಲಾವವಣೆ ಕಾಣಿಸಿಕೊಳ್ಳುವುದು ಡೌಟ್. ಆದರೆ ದುಲೀಪ್ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುವ ಸಾಧ್ಯತೆ ದಟ್ಟವಾಗಿದೆ.
ಈ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವುದು ಟೀಮ್ ಇಂಡಿಯಾಕ್ಕೆ ಅನಿವಾರ್ಯವಾಗಿದೆ. ಇನ್ನು ಉಳಿದ 10 ಪಂದ್ಯಗಳಲ್ಲಿ 6ಕ್ಕೂ ಹೆಚ್ಚು ಪಂದ್ಯಗಳನ್ನು ಗೆದ್ದಾಗ ಮಾತ್ರ ಭಾರತ ಸುಲಭವಾಗಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಬಹುದು. ಈ ಕಾರಣಕ್ಕಾಗಿ ಭಾರತ, ತವರಿನ ಲಾಭ ಪಡೆದು ಅಬ್ಬರಿಸಲು ರಣ ತಂತ್ರವನ್ನು ಹೆಣೆದುಕೊಂಡಿದೆ. ಬಾಂಗ್ಲಾದೇಶದ ವಿರುದ್ಧದ ಸರಣಿಯ ಬಳಿಕ ಭಾರತ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ.
ಪ್ರಸ್ತುತ ಭಾರತ ತಂಡ WTC ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಆದರೆ ಆಸ್ಟ್ರೇಲಿಯಾ ಹಿಂದೆ ಬಿದ್ದಿಲ್ಲ. ಈ ತಂಡ ಸಹ ಸ್ಥಿರ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳ ಚಿತ್ತ ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಬಾರ್ಡರ್, ಗವಾಸ್ಕರ್ ಟೆಸ್ಟ್ ಸರಣಿಯ ಮೇಲೆ ನೆಟ್ಟಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಈ ಬಾರಿ ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಈ ಸರಣಿಯ ಫಲಿತಾಂಶ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯ ಮೇಲೆ ಪರಿಣಾಮ ಬೀರಲಿದೆ.