ಭಾರತ vs ಬಾಂಗ್ಲಾದೇಶ ಏಕದಿನ ಸರಣಿ: ಈ ಮೂವರ ಸ್ಥಾನದ ಮೇಲೆ ನೇತಾಡುತ್ತಿದೆ ತೂಗುಗತ್ತಿ!

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಏಕದಿನ ಸರಣಿ ಈಗ ಕ್ರಿಕೆಟ್ ಅಭಿಮಾನಿಗಳ ಕುತೂಹಲ ಕೆರಳಿಸಿದ್ದು ಬಾಂಗ್ಲಾದೇಶದ ಆತಿಥ್ಯದಲ್ಲಿ ಈ ಸರಣಿ ನಡೆಯಲಿದೆ. ಮುಂದಿನ ವರ್ಷಾಂತ್ಯದಲಕ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ದೃಷ್ಟಿಯಿಂದ ಈ ಸರಣಿ ಮಹತ್ವ ಪಡೆದುಕೊಂಡಿದ್ದು ಆಟಗಾರರ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ.
ಈ ಸರಣಿಯಲ್ಲಿ ಟೀಮ್ ಇಂಡಿಯಾ ಅನುಭವಿ ಆಟಗಾರರ ಹಾಗೂ ಯುವ ಆಟಗಾರರ ಅತ್ಯುತ್ತಮ ಸಂಯೋಜನೆಯೊಂದಿಗೆ ಕಣಕ್ಕಿಳಿಯುತ್ತಿದೆ. ಅದರಲ್ಲೂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಅವರಂತಾ ಆಟಗಾರರು ಈ ಸರಣಿಯಲ್ಲಿ ಭಾಗಿಯಾಗುತ್ತಿದ್ದಾರೆ. ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ದೊರೆಯುವಂತೆ ಮಾಡಿದೆ.
ಇನ್ನು ಬಾಂಗ್ಲಾದೇಶದ ವಿರುದ್ಧ ಏಕದಿನ ಸರಣಿ ಟೀಮ್ ಇಂಡಿಯಾದ ಕೆಲ ಆಟಗಾರರಿಗೆ ಮಹತ್ವದ್ದಾಗಿದ್ದು ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಪ್ರದರ್ಶಿಸಲು ಇದ ಅತ್ಯುತ್ತಮ ವೇದಿಕೆಯಾಗಿದೆ. ಅದರಲ್ಲೂ ಈ ಮೂವರು ಆಟಗಾರರ ಪಾಲಿಗೆ ಬಾಂಗ್ಲಾದೇಶ ವಿರುದ್ಧ ಈ ಏಕದಿನ ಸರಣಿ ಮುಂದಿನ ವಿಶ್ವಕಪ್ ದೃಷ್ಟಿಯಿಂದ ಬಹಳ ಮಹತ್ವದ್ದಾಗಿರಲಿದೆ. ಹಾಗಾದರೆ ಆ ಮೂವರು ಆಟಗಾರರು ಯಾರು? ಮುಂದೆ ಓದಿ..

ಕನ್ನಡಿಗ ಕೆಎಲ್ ರಾಹುಲ್
ಟೀಮ್ ಇಂಡಿಯಾದ ಅನುಭವಿ ಆಟಗಾರ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿದ್ದ ಕೆಎಲ್ ರಾಹುಲ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಟೀಕೆಯನ್ನು ಎದುರಿಸುತ್ತಿದ್ದಾರೆ. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಆರಂಭದಲ್ಲಿಯೇ ಸಾಕಷ್ಟು ಭರವಸೆ ಮೂಡಿಸಿದ್ದ ರಾಹುಲ್ ದೊಡ್ಡ ನಿರೀಕ್ಷೆಗೆ ಹುಟ್ಟುಹಾಕಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು ತಂಡಕ್ಕೆ ಹೊರೆಯಾಗಿ ಪರಿಣಮಿಸಿದ್ದಾರೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಪ್ರಮುಖ ಪಂದ್ಯಗಳಲ್ಲಿ, ಮಹತ್ವದ ಘಟ್ಟಗಳಲ್ಲಿ ರಾಹುಲ್ ಸುಲಭವಾಗಿ ವಿಕೆಟ್ ಒಪ್ಪಿಸುತ್ತಿರುವುದು ಕೂಡ ಈ ಟೀಕೆಗೆ ಮತ್ತೊಂದು ಕಾರಣ.
ಇದೀಗ ಏಕದಿನ ಕ್ರಿಕೆಟ್ ಮಾದರಿಯಲ್ಲಿಯೂ ಕೆಎಲ್ ರಾಹುಲ್‌ಗೆ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ತಮ್ಮ ಸಾಮರ್ಥ್ಯಕ್ಕೆ ತಕ್ಕನಾದ ಪ್ರದರ್ಶನವನ್ನು ನೀಡಿ ಮ್ಯಾನೇಜ್‌ಮೆಂಟ್ ತನ್ನ ಮೇಲಿಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ. ಹೀಗಾಗಿ ಈ ಸರಣಿಯನ್ನು ರಾಹುಲ್ ಆ ದೃಷ್ಟಿಕೋನದಿಂದ ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಂಡರೆ ಒಳಿತು.

ಅನುಭವಿ ಶಿಖರ್ ಧವನ್
ಟೀಮ್ ಇಂಡಿಯಾದ ಅನುಭವಿ ಆಟಗಾರ ಶಿಖರ್ ಧವನ್ ಸದ್ಯ ಏಕದಿನ ಮಾದರಿಯಲ್ಲಿ ಮಾತ್ರವೇ ಭಾರತ ತಂಡದಲ್ಲಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಶಿಖರ ಧವನ್‌ಗೆ ಈ ಸ್ಥಾನಕ್ಕೆ ಭಾರೀ ಪೈಪೋಟಿ ಎದುರಾಗಿದೆ. ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಲು ಕೆಎಲ್ ರಾಹುಲ್ ಜೊತೆಗೆ ಪೈಪೋಟಿಗೆ ಬಿದ್ದಿರುವಾಗಲೇ ಮತ್ತೊಂದೆಡೆ ಯುವ ಆಟಗಾರ ಶುಬ್ಮನ್ ಗಿಲ್ ಸಿಕ್ಕ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡು ಮಿಂಚಿದ್ದಾರೆ. ಹೀಗಾಗಿ ಈ ಸರಣಿಯಲ್ಲಿ ಶಿಖರ್ ಧವನ್ ತಾನು ಟೀಮ್ ಇಂಡಿಯಾದ ಆರಂಭಿಕ ಸ್ಥಾನಕ್ಕೆ ಅನಿವಾರ್ಯ ಆಯ್ಕೆ ಎಂನಭ ಭಾವನೆ ಮೂಡಿಸುವಂತಾ ಪ್ರದರ್ಶನ ನೀಡಬೇಕಾದ ಅಗತ್ಯವಿದೆ.

ಯುವ ಆಟಗಾರ ರಿಷಭ್ ಪಂತ್
ರಿಷಭ್ ಪಂತ್ ಸಿಕ್ಕ ಅವಕಾಶವನ್ನು ಪದೇ ಪದೇ ಹಾಳು ಮಾಡಿಕೊಂಡು ಸಾಕಷ್ಟು ಟೀಕೆಗೆ ಗುರಿಯಾಗಿರುವ ಆಟಗಾರ. ಚುಟುಕು ಮಾದರಿಯಲ್ಲಿ ಭಾರೀ ಟಿಖೆಗೆ ಗುರಿಯಾಗಿರುವ ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಪ್ರದರ್ಶನ ನೀಡಬೇಕಿದೆ. ಏಕದಿನ ಮಾದರಿಯಲ್ಲಿ ಈ ಹಿಂದೆ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದ ವೇಳೆ ಒಂದು ಅದ್ಭುತ ಶತಕ ಸಿಡಿಸಿ ಮಿಂಚಿದ್ದ ಪಂತ್ ಆ ರೀತಿಯ ಇನ್ನಿಂಗ್ಸನ್ನು ಬಾಂಗ್ಲಾದೇಶದ ವಿರುದ್ಧವೂ ನೀಡಬೇಕಿದೆ. ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿರುವ ಕಾರಣ ಪಂತ್ ಏಕದಿನ ಮಾದರಿಯ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು. ಇಲ್ಲವಾದಲ್ಲಿ ಪಂತ್ ಟೆಸ್ಟ್ ಮಾದರಿಗೆ ಮಾತ್ರವೇ ಸೀಮಿತವಾದರೆ ಅಚ್ಚರಿಯಿಲ್ಲ.

ಟೀಮ್ ಇಂಡಿಯಾ ಸ್ಕ್ವಾಡ್ ಹೀಗಿದೆ
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications