ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND Vs BAN 2nd ODI : 2ನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲು ಮುಂದಾದ ಭಾರತ

IND Vs BAN: Umran Malik Will Play In 2nd ODI, Know Probable XI

ಭಾನುವಾರ ಢಾಕಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಸೋಲನುಭವಿಸಿದ ಬಳಿಕ ಸರಣಿಯಲ್ಲಿ 0-1 ರಲ್ಲಿ ಹಿನ್ನಡೆ ಸಾಧಿಸಿದೆ. ಸರಣಿಯಲ್ಲಿ ಸೋಲನ್ನು ತಪ್ಪಿಸಿಕೊಳ್ಳಲು ಎರಡನೇ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ.

ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಹಲವು ಬದಲಾವಣೆ ಮಾಡಲು ಮುಂದಾಗಿದೆ. ಉಮ್ರಾನ್ ಮಲಿಕ್ ಈಗ ಆಯ್ಕೆಗೆ ಲಭ್ಯವಾಗಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ. ಶಾರ್ದುಲ್ ಠಾಕೂರ್ ಸ್ನಾಯುವಿನ ದೌರ್ಬಲ್ಯವನ್ನು ಹೊಂದಿದ್ದು ಎರಡನೇ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಕುಲದೀಪ್ ಸೇನ್ ಚೊಚ್ಚಲ ಪಂದ್ಯ ಆಡಿದ ನಂತರ ಎರಡನೇ ಪಂದ್ಯದಲ್ಲಿ ಅವರು ಆಡುವ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಮೊಹಮ್ಮದ್ ಶಮಿ ಬದಲಿಗೆ ಉಮ್ರಾನ್ ಮಲಿಕ್ ತಂಡಕ್ಕೆ ಆಯ್ಕೆಯಾಗಿದ್ದು, ಕಣಕ್ಕಿಳಿಯುವುದು ಖಚಿತ, 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವ ಅವರು, ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿಹಾಕಲು ತಂತ್ರ ರೂಪಿಸಲಿದ್ದಾರೆ.

ENG Vs PAK: ಮೊದಲ ಟೆಸ್ಟ್ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಾಣ, 5 ದಿನಗಳಲ್ಲಿ ಬಂದ ರನ್ ಎಷ್ಟು ಗೊತ್ತಾ?ENG Vs PAK: ಮೊದಲ ಟೆಸ್ಟ್ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಾಣ, 5 ದಿನಗಳಲ್ಲಿ ಬಂದ ರನ್ ಎಷ್ಟು ಗೊತ್ತಾ?

ಮೊದಲನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್ ಗಳು ಉತ್ತಮವಾಗಿ ಪ್ರದರ್ಶನ ನೀಡಿದರು. ಆದರೆ, ಫೀಲ್ಡಿಂಗ್‌ನಲ್ಲಿ ಮಾಡಿದ ಎಡವಟ್ಟುಗಳಿಂದ ಬಾಂಗ್ಲಾದೇಶ 1 ವಿಕೆಟ್‌ನ ರೋಚಕ ಜಯ ಸಾಧಿಸಲು ಕಾರಣವಾಯಿತು. ತಂಡಕ್ಕೆ ಉಮ್ರಾನ್ ಮಲಿಕ್ ಸೇರ್ಪಡೆ, ಮಧ್ಯಮ ಓವರ್ ಗಳಲ್ಲಿ ಭಾರತದ ಬೌಲಿಂಗ್ ಮತ್ತಷ್ಟು ಬಲಿಷ್ಠವಾಗಿದೆ.

IND Vs BAN: Umran Malik Will Play In 2nd ODI, Know Probable XI

ಕುಲದೀಪ್ ಸೇನ್‌ಗೆ ಮತ್ತೊಂದು ಅವಕಾಶ

ಕುಲದೀಪ್ ಸೇನ್ ತಾವು ಆಡಿದ ಚೊಚ್ಚಲ ಪಂದ್ಯದಲ್ಲಿ ಸಾಧಾರಣ ಬೌಲಿಂಗ್ ಮಾಡಿದರು. ಓವರ್‌ಗೆ 6 ರನ್‌ಗಳಿಗಿಂತ ಹೆಚ್ಚು ರನ್ ಸೋರಿಕೆ ಮಾಡಿದರೂ ಕೂಡ ಪ್ರಮುಖ ಎರಡು ವಿಕೆಟ್ ಪಡೆದರು. ಎರಡನೇ ಏಕದಿನ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಢಾಕಾ ಪಿಚ್‌ ಅವರ ಬೌಲಿಂಗ್ ಶೈಲಿಗೆ ಸಹಕಾರಿಯಾಗಿದೆ.

ಶಾರ್ದೂಲ್ ಠಾಕೂರ್ ಮೊದಲನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅವರು ಗಾಯದಿಂದ ಬಳಲುತ್ತಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಅವರು ವಿಶ್ರಾಂತಿ ಪಡೆಯಲಿದ್ದು, ಉಮ್ರಾನ್ ಮಲಿಕ ಆಡಲಿದ್ದಾರೆ.

ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಕುಲದೀಪ್ ಸೇನ್ ಎರಡನೇ ಏಕದಿನ ಪಂದ್ಯದಲ್ಲಿ ಆಡುವ ವೇಗಿಗಳಾಗಿದ್ದಾರೆ.

ಭಾರತ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ದೀಪಕ್ ಚಹಾರ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್

Story first published: Tuesday, December 6, 2022, 5:40 [IST]
Other articles published on Dec 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X