ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Virat Kohli 72ನೇ ಅಂತಾರಾಷ್ಟ್ರೀಯ ಶತಕ ಸಿಡಿಸಿ ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ

India vs Bangladesh: Virat Kohli hits 72nd international century leaves behind Ponting

ಭಾರತ ಹಾಗೂ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ರನ್ ಮಳೆ ಹರಿಸಿದೆ. ಟೀಮ್ ಇಂಡಿಯಾದ ಯುವ ಆಟಗಾರ ಇಶಾನ್ ಕಿಶನ್ ಈ ಪಂದ್ಯದಲ್ಲಿ ದ್ವಿ ಶತಕ ಸಿಡಿಸಿದರೆ ಬಳಿಕ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸುದೀರ್ಘ ಕಾಲದ ಬಳಿಕ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಟೀಮ್ ಇಂಡಿಯಾದ ದಿಗ್ಗಜ ಆಟಗಾರನ 72ನೇ ಅಂತಾರಾಷ್ಟ್ರೀಯ ಶತಕವಾಗಿದ್ದು ಏಕದಿನ ಮಾದರಿಯಲ್ಲಿ 44ನೇ ಶತಕವಾಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಲ್ಲಿ ಫಾರ್ಮ್ ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ಗೂ ಮುನ್ನ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಅಫ್ಘಾನಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಶತಕ ಸಿಡಿಸಿ ಶತಕದ ಕೊರತೆಯನ್ನು ನೀಗಿಸಿದ್ದರು. ಇದೀಗ ಏಕದಿನ ಮಾದರಿಯಲ್ಲಿಯೂ ವಿರಾಟ್ ಕೊಹ್ಲಿ ತಮ್ಮ ಫಾರ್ಮ್ ಕಂಡುಕೊಂಡಿದ್ದಾರೆ. ಬರೊಬ್ಬರಿ 1214 ದಿನಗಳ ಬಳಿಕ ಏಕದಿನ ಮಾದರಿಯಲ್ಲಿ ವಿರಾಟ್ ಕೊಹ್ಲಿ ಶತಕದ ಸಾಧನೆ ಮಾಡಿದ್ದಾರೆ.

Ishan Kishan : ಇಶಾನ್ ಕಿಶನ್ ವಿಶ್ವದಾಖಲೆಯ ದ್ವಿಶತಕ: ದಿಗ್ಗಜರ ಸಾಲಿಗೆ ಸೇರಿದ ಯುವ ಆಟಗಾರIshan Kishan : ಇಶಾನ್ ಕಿಶನ್ ವಿಶ್ವದಾಖಲೆಯ ದ್ವಿಶತಕ: ದಿಗ್ಗಜರ ಸಾಲಿಗೆ ಸೇರಿದ ಯುವ ಆಟಗಾರ

ಪಾಂಟಿಂಗ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಪಾಂಟಿಂಗ್ ದಾಖಲೆ ಹಿಂದಿಕ್ಕಿದ ಕೊಹ್ಲಿ

2019ರ ಬಳಿಕ ವಿರಾಟ್ ಕೊಹ್ಲಿ ನಾಲ್ಕು ಬಾರಿ ಶತಕದ ಅಂಚಿಗೆ ಬಂದು ತಲುಪಿದ್ದರು. ಆದರೆ ಮೂರಂಕಿಯ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಕೊಹ್ಲಿ ತಮ್ಮ 72ನೇ ಅಂತಾರಾಷ್ಟ್ರೀ ಶತಕವನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿದ ಕೊಹ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮಾತ್ರವೇ ಕೊಹ್ಲಿಗಿಂತ ಮುಂದಿದ್ದಾರೆ.

ದ್ವಿಶತಕ ಸಿಡಿಸಿದ ಇಶಾನ್ ಕಿಶನ್

ದ್ವಿಶತಕ ಸಿಡಿಸಿದ ಇಶಾನ್ ಕಿಶನ್

ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. 131 ಎಸೆತಗಳನ್ನು ಎದುರಿಸಿದ ಕಿಶನ್ 24 ಬೌಂಡರಿ ಹಾಗೂ 10 ಸಿಕ್ಸರ್ ಸಿಡಿಸಿದ್ದಾರೆ. ಇಶಾನ್ ಕಿಶನ್ 85 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅದಾದ ಬಳಿಕ ರನ್‌ ವೇಗವನ್ನು ಮತ್ತಷ್ಟು ಹೆಚ್ಚಿಸಿದ ಇಶಾನ್ ಕಿಶನ್ ರನ್ ವೇಗವನ್ನು ಭಾರೀ ಪ್ರಮಾಣದಲ್ಲಿ ಏರಿಸಿದರು. ಈ ಮೂಲಕ ಅತ್ಯಂತ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ ಇಶಾನ್ ಕಿಶನ್

ಬೃಹತ್ ಗುರಿ ನೀಡಿದ ಭಾರತ

ಬೃಹತ್ ಗುರಿ ನೀಡಿದ ಭಾರತ

ಚಿತ್ತಗಾಂಗ್‌ನ ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರವಾಗಿ ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಜೋಡಿ ರನ್ ಮಳೆ ಹರಿಸಿದ್ದಾರೆ. ಇಶಾನ್ ಕಿಶನ್ ದಾಖಲೆಯ ದ್ವಿಶತಕ ಸಿಡಿಸಿದರೆ ಕೊಹ್ಲಿ ಶತಕದ ಸಾಧನೆ ಮಾಡಿದರು. ಈ ಇಬ್ಬರು ಆಟಗಾರರು ಎರಡನೇ ವಿಕೆಟ್‌ಗೆ ಬರೊಬ್ಬರಿ 290 ರನ್‌ಗಳ ಜೊತೆಯಾಟವನ್ನು ನೀಡಿದ್ದಾರೆ. ಬಾಂಗ್ಲಾದೇಶದ ಪ್ರತಿಯೊಬ್ಬ ಬೌಲರ್ ಮೇಲೆಯೂ ಈ ಜೋಡಿ ದಂಡೆತ್ತಿ ಹೋಗಿದ್ದು ರನ್ ಮಳೆ ಹರಿಸಿದರು. ಇದರ ಪರಿಣಾಮವಾಗಿ ಈ ಪಂದ್ಯದಲ್ಲಿ ಭಾರತ ಬರೊಬ್ಬರಿ 409 ರನ್‌ಗಳಿಸಿ ಬೃಹತ್ ಗುರಿ ನಿಗದಿಪಡಿಸಿದೆ.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟನ್ ದಾಸ್ (ನಾಯಕ), ಯಾಸಿರ್ ಅಲಿ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್
ಬೆಂಚ್: ಹಸನ್ ಮಹಮೂದ್, ನೂರುಲ್ ಹಸನ್, ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂತೋ

ಟೀಮ್ ಇಂಡಿಯಾ: ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

Story first published: Saturday, December 10, 2022, 14:54 [IST]
Other articles published on Dec 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X