ಭಾರತ vs ಕೌಂಟಿ ಸೆಲೆಕ್ಟ್: ಅಭ್ಯಾಸ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕ

ಬಹುತೇಕ ಒಂದು ತಿಂಗಳ ವಿರಾಮದ ನಂತರ ಭಾರತ ತಂಡದ ಆಟಗಾರರು ಅಭ್ಯಾಸ ಪಂದ್ಯದಲ್ಲಿ ಆಡುವ ಮೂಲಕ ಮತ್ತೆ ಕಣಕ್ಕಿಳಿದಿದ್ದಾರೆ. ಭಾರತೀಯ ಆಟಗಾರರ ತಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಕೌಂಟಿ ಸೆಲೆಕ್ಟ್ ತಂಡದ ವಿರುದ್ಧ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ.
ಭಾರತೀಯ ತಮಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಈ ಅಭ್ಯಾಸ ಪಂದ್ಯದಲ್ಲಿ ವಿಶ್ರಾಂತಿಯನ್ನು ಪಡೆದಿದ್ದಾರೆ. ಹೀಗಾಗು ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಿದ್ದಾರೆ. ರೋಹಿತ್ ಶರ್ಮಾ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ತಂಡಕ್ಕಿಂತ ಕೆಲ ಪ್ರಮುಖ ಬದಲಾವಣೆಗಳನ್ನು ಈ ತಂಡದಲ್ಲಿ ಮಾಡಿಕೊಳ್ಳಲಾಗಿದೆ. ಕೊರೊನಾವೈರಸ್‌ಗೆ ತುತ್ತಾಗಿರುವ ರಿಷಭ್ ಪಂತ್ ಈ ಪಂದ್ಯದಿಂದ ಅನಿವಾರ್ಯವಾಗಿ ಹೊರಗುಳಿದಿದ್ದು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ.
ರಾಹುಲ್ ಹೊರತುಪಡಿಸಿ ಉಪನಾಯಕ ಅಜಿಂಕ್ಯ ರಹಾನೆ ಸ್ಥಾನಕ್ಕೆ ಹನುಮ ವಿಹಾರಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಗಾಯದಿಂದಾಗಿ ಶುಬ್ಮನ್ ಗಿಲ್ ತಂಡದಿಂದ ಹಿರಬಿದ್ದಿದ್ದು ಆ ಸ್ಥಾನದಲ್ಲಿ ಮಯಾಂಕ್ ಅಗರ್ವಾಲ್ ಅವಕಾಶವನ್ನು ಪಡೆದುಕೊಂಡಿದ್ದಾರೆ.
ಬೌಲಿಂಗ್‌ನಲ್ಲಿ ಕೂಡ ಭಾರತೀಯ ತಂಡ ನಾಲ್ವರು ವೇಗಳೊಂದಿಗೆ ಕಣಕ್ಕಿಳಿದಿದ್ದಾರೆ. ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡಲು ಇಳಿದಿದ್ದಾರೆ. ಎಡಗೈ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇಬ್ಬರು ಕೂಡ ತಂಡದಲ್ಲಿದ್ದಾರೆ.
ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications