Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2ನೇ ಟೆಸ್ಟ್ ಪಂದ್ಯದಲ್ಲೇ 10 ವಿಕೆಟ್ ಕಿತ್ತು ಶ್ರೇಷ್ಠ ಸಾಧನೆ ಮಾಡಿದ ಅಕ್ಷರ್ ಪಟೇಲ್

india vs england, 1st 10 wicket haul for Axar Patel

ಟೀಮ್ ಇಂಡಿಯಾದ ಯುವ ಸ್ಪಿನ್ನರ್ ಅಕ್ಷರ್ ಪಟೇಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್ ಕಿತ್ತು ಮಿಂಚು ಹರಿಸಿದ್ದ ಅಕ್ಷರ್ ಎರಡನೇ ಇನ್ನಿಂಗ್ಸ್‌ನಲ್ಲೂ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಿಗೆ ಕಂಟಕವಾಗಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿಯೇ ಅಕ್ಷರ್ ಪಟೇಲ್ 10 ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭದಲ್ಲಿಯೇ ಅಕ್ಷರ್ ಪಟೇಲ್‌ ಅವರನ್ನು ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ದಾಳಿಗೆ ಇಳಿಸಿದ್ದರು. ಇನ್ನಿಂಗ್ಸ್‌ನ ಆರಂಭದ ಎಸೆತದಲ್ಲಿಯೇ ವಿಕೆಟ್ ಪಡೆಯುವಲ್ಲಿ ಅಕ್ಷರ್ ಪಟೇಲ್ ಯಶಸ್ವಿಯಾಗಿದ್ದರು. ಜಾಕ್ ಕ್ರಾವ್ಲಿ ಅಕ್ಷರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ನಂತರ ಅದೇ ಓವರ್‌ನ ಮೂರನೇ ಎಸೆತದಲ್ಲಿ ಜಾನಿ ಬೈರ್‌ಸ್ಟೋವ್ ಕೂಡ ಅಕ್ಷರ್‌ಗೆ ಬೌಲ್ಡ್ ಆದರು.

ಹೀಗೆ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅಕ್ಷರ್ ಪಟೇಲ್ ಇಂಗ್ಲೆಂಡ್ ಬ್ಯಾಟಿಂಗ್ ಪಾಳಯಕ್ಕೆ ಆರಂಭದಿಂದಲೇ ಆಘಾತವನ್ನು ನೀಡಲು ಆರಂಭಿಸಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಆರಂಭದಲ್ಲಿ ಕಳೆದುಕೊಂಡ ಐದು ವಿಕೆಟ್‌ಗಳ ಪೈಕಿ ನಾಲ್ಕು ವಿಕೆಟ್‌ಗಳು ಅಕ್ಷರ್ ಪಟೇಲ್ ಪಾಲಾಗಿದೆ. ಉಳಿದ ಒಂದು ವಿಕೆಟ್ ಆರ್ ಅಶ್ವಿನ್ ಪಡೆದುಕೊಂಡಿದ್ದಾರೆ.

ಅಕ್ಷರ್ ಪಟೇಲ್ ಚೆನ್ನೈನಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪನೆಯನ್ನು ಮಾಡಿದ್ದರು. ಆ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದರು. ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ ಅಕ್ಷರ್ ಅದ್ಭುತ ದಾಳಿಯನ್ನು ಸಂಘಟಿಸಿದ್ದು ಆರು ವಿಕೆಟ್ ಪಡೆದರು. ಈಗ ಎರಡನೇ ಇನ್ನಿಂಗ್ಸ್‌ನಲ್ಲೂ ಐದು ವಿಕೆಟ್‌ಗಳ ಗೊಂಚಲು ಪಡೆಯುವ ಸನಿಹದಲ್ಲಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 112 ರನ್‌ಗಳಿಗೆ ಆಲೌಟ್ ಆದರೆ ಅದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಭಾರತ 145 ರನ್‌ಗಳಿಸಿ ಆಲೌಟ್ ಆಗಿತ್ತು. ಅಲ್ಪ ಮುನ್ನಡೆ ಗಳಿಸಿದ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ದಾಂಡಿಗರನ್ನು ಶೀಘ್ರವೇ ಕಟ್ಟಿ ಹಾಕುವ ಉತ್ಸಾಹದಲ್ಲಿದೆ.

Story first published: Friday, February 26, 2021, 8:49 [IST]
Other articles published on Feb 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+