ಭಾರತ vs ಇಂಗ್ಲೆಂಡ್, 1ನೇ ಏಕದಿನ: ಬೌಲಿಂಗ್‌ನಲ್ಲಿ ಮಿಂಚಿದ ಪ್ರಸಿದ್ಧ್ ಕೃಷ್ಣ, ಭಾರತಕ್ಕೆ ಭರ್ಜರಿ ಗೆಲುವು

ಪೂಣೆ: ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾ ನೀಡಿದ ಬೃಹತ್ ಗುರಿಯನ್ನು ಆರಂಭದಲ್ಲಿ ಅದ್ಭುತವಾಗಿ ಬೆನ್ನಟ್ಟಲು ಆರಂಭಿಸಿದ ಇಂಗ್ಲೆಂಡ್ ಬಳಿಕ ಕುಸಿಯಲು ಆರಂಭಿಸಿತು. ಕನ್ನಡಿಗ ಪ್ರಸಿದ್ಧ್ ಕೃಷ್ಣ ನಾಲ್ಕು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಶಾರ್ದೂಲ್ ಠಾಕೂರ್ ಠಾಕೂರ್ 3, ಭುವನೇಶ್ವರ್ ಕುಮಾರ್ 2 ಹಾಗೂ ಕೃನಾಲ್ ಪಾಂಡ್ಯ 1 ವಿಕೆಟ್ ಪಡೆದು ಮಿಂಚಿದರು
ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ (2-1), ಐದು ಪಂದ್ಯಗಳ ಏಕದಿನ ಸರಣಿ (3-2) ಗೆದ್ದಿರುವ ಟೀಮ್ ಇಂಡಿಯಾ ಇಂದು ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂ ಪೂಣೆಯಲ್ಲಿ ಪ್ರವಾಸಿಗರ ವಿರುದ್ಧ ಮೊದಲನೇ ಏಕದಿನ ಪಂದ್ಯ ಆಡುತ್ತಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದೆ.
ಟೆಸ್ಟ್, ಟಿ20ಐ ಸರಣಿಯಲ್ಲಿ ಆಂಗ್ಲರಿಗೆ ಮುಖಭಂಗ ನೀಡಿರುವ ಭಾರತ, ಏಕದಿನ ಸರಣಿಯನ್ನೂ ಕೈ ವಶವಾಗಿಸುವ ಯೋಜನೆಯಲ್ಲಿದೆ. ಭಾರತ-ಇಂಗ್ಲೆಂಡ್ ಎರಡೂ ತಂಡಗಳಲ್ಲೂ ಸಣ್ಣ ಬದಲಾವಣೆಗಳಾಗಿವೆ. ಉಳಿದ ಇನ್ನೆರಡು ಪಂದ್ಯಗಳೂ ಇದೇ ಸ್ಟೇಡಿಯಂನಲ್ಲಿ 1.30 pmಗೆ ಆರಂಭಗೊಳ್ಳಲಿದೆ.
ಭಾರತ vs ಇಂಗ್ಲೆಂಡ್, 1ನೇ ಏಕದಿನ ಪಂದ್ಯ, Live ಸ್ಕೋರ್‌ಕಾರ್ಡ್

ಪ್ರಮುಖ ಬದಲಾವಣೆಗಳು
ಇಂಗ್ಲೆಂಡ್ ತಂಡದಲ್ಲಿ ವೇಗಿ ಜೋಫ್ರಾ ಆರ್ಚರ್ ಆಡುತ್ತಿಲ್ಲ. ಆದರೆ ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್ ಮತ್ತು ಮೊಯೀನ್ ಅಲಿ ಕಾಣಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ ಯುವ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ ಕೂಡ ಆಡುತ್ತಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ಸಿ), ಜೋಸ್ ಬಟ್ಲರ್ (ವಿಕೆ), ಬೆನ್ ಸ್ಟೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮೊಯೀನ್ ಅಲಿ, ಸ್ಯಾಮ್ ಕರನ್, ಟಾಮ್ ಕರನ್, ಆದಿಲ್ ರಶೀದ್, ಮಾರ್ಕ್ ವುಡ್.

ಭಾರತ ಪ್ಲೇಯಿಂಗ್ XI
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಸಿ), ಕೆ.ಎಲ್. ರಾಹುಲ್ (ವಿಕೆ), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications