ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್ 1st ODI: ಕನ್ನಡಿಗ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್ ಪಾಂಡ್ಯ ಪದಾರ್ಪಣೆ

India vs England 1st ODI: Prasidh Krishna and Krunal Pandya debut for India

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಪದಾರ್ಪಣೆಯನ್ನು ಮಾಡಿದ್ದಾರೆ. ಕನ್ನಡಿದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್ ಪಾಂಡ್ಯ ಚೊಚ್ಚಲ ಬಾರಿಗೆ ಏಕದಿನ ಮಾದರಿಯಲ್ಲಿ ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ.

ಕನ್ನಡಿಗ ಪ್ರಸಿದ್ಧ್ ಕೃಷ್ಣ ಇದೇ ಮೊದಲ ಬಾರಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಕರೆಯನ್ನು ಪಡೆದಿದ್ದರು. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೇ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ನೀಡಿದ ಪ್ರದರ್ಶನದ ಕಾ್ರಣದಿಮದಾಗಿ ರಾಷ್ಟ್ರೀಯ ತಂಡದಲ್ಲಿ ಅವಕಾಶವನ್ನು ಪ್ರಸಿದ್ಧ್ ಕೃಷ್ಣ ಗಿಟ್ಟಿಸಿಕೊಂಡಿದ್ದಾರೆ.

ಭಾರತ vs ಇಂಗ್ಲೆಂಡ್, 1ನೇ ಏಕದಿನ, ಪ್ಲೇಯಿಂಗ್ XI, Live ಸ್ಕೋರ್‌ಭಾರತ vs ಇಂಗ್ಲೆಂಡ್, 1ನೇ ಏಕದಿನ, ಪ್ಲೇಯಿಂಗ್ XI, Live ಸ್ಕೋರ್‌

ಪ್ರಸಿದ್ಧ್ ಕೃಷ್ಣ 48 ಲಿಸ್ಟ್ ಎ ಪಂದ್ಯಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ 23.07ರ ಸರಾಸರಿಯಲ್ಲಿ 81 ವಿಕೆಟ್ ಪಡೆದುಕೊಂಡಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಕರ್ನಾಟಕದ ಈ 25ರ ಹರೆಯದ ವೇಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಕೆಲ ಗಮನಾರ್ಹ ಪ್ರದರ್ಶನಗಳನ್ನು ನೀಡಿದ್ದಾರೆ ಪ್ರಸಿದ್ಧ್ ಕೃಷ್ಣ. ಐಪಿಎಲ್‌ನಲ್ಲಿ ಕೆಕೆಆರ್ ಪರವಾಗಿ 21 ಪಂದ್ಯಗಳಲ್ಲಿ ಕಣಕ್ಕಿಳಿದು 18 ವಿಕೆಟ್ ಪಡೆದಿದ್ದಾರೆ.

ರಾಹುಲ್ ಮತ್ತೊಂದು ಅವಕಾಶಕ್ಕೆ ಅರ್ಹ, ಮೂರು ಪಂದ್ಯಗಳಲ್ಲೂ ಆತ ಆಡಬೇಕು: ಗಂಭೀರ್ರಾಹುಲ್ ಮತ್ತೊಂದು ಅವಕಾಶಕ್ಕೆ ಅರ್ಹ, ಮೂರು ಪಂದ್ಯಗಳಲ್ಲೂ ಆತ ಆಡಬೇಕು: ಗಂಭೀರ್

ಇನ್ನು ಕೃನಾಲ್ ಪಾಂಡ್ಯ ಈ ಹಿಂದೆ ಟಿ20 ಮಾದರಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಏಕದಿನ ಮಾದರಿಯಲ್ಲಿ ಆಡುವ ಬಳಗದಲ್ಲಿ ಅವಕಾಶವನ್ನು ಇದೇ ಮೊದಲ ಬಾರಿಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಸೋದರ ಹಾರ್ದಿಕ್ ಪಾಂಡ್ಯ ಜೊತೆಗೆ ಪ್ರಥಮ ಬಾರಿಗೆ ಏಕದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಆಡುವ ಬಳಗ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಶಾರ್ದುಲ್ ಠಾಕೂರ್, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ

Story first published: Tuesday, March 23, 2021, 14:26 [IST]
Other articles published on Mar 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X