ಭಾರತ vs ಇಂಗ್ಲೆಂಡ್ 1st ಟಿ20: ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತದ ಸಂಭಾವ್ಯ ಆಡುವ ತಂಡ

ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾ ಭರ್ಜರಿಯಾಗಿ ಸಿದ್ಧತೆಯನ್ನು ನಡೆಸುತ್ತಿದೆ. ಮಾರ್ಚ್ 12ರಿಂದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಟಿ20 ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿರುವ ಇಂಗ್ಲೆಂಡ್ ತಂಡದಲ್ಲಿ ಅತ್ಯುತ್ತಮ ಆಟಗಾರರಿದ್ದು ಭಾರತದ ನೆಲದಲ್ಲಿ ಭರ್ಜರಿಯಾಗಿ ಪ್ರದರ್ಶನ ನೀಡಲು ಸಿದ್ದರಾಗಿದ್ದಾರೆ. ಟೆಸ್ಟ್ ಸರಣಿಯನ್ನು ಕಳೆದುಕೊಂಡ ಇಂಗ್ಲೆಂಡ್ ಟಿ20 ಸರಣಿಯನ್ನು ವಶಕ್ಕೆ ಪಡೆಯುವ ಹುಮ್ಮಸ್ಸಿನಲ್ಲದೆ. ಹೀಗಾಗಿ ಪ್ರವಾಸಿಗರ ವಿರುದ್ಧ ರಣತಂತ್ರವನ್ನು ಹೆಣೆಯುತ್ತಿದೆ ಟೀಮ್ ಇಂಡಿಯಾ.
ಈ ಮಹತ್ವದ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಬಳಗ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಹೀಗಾಗಿ ಸಂಭಾವ್ಯ ಟೀಮ್ ಇಂಡಿಯಾ ತಂಡವನ್ನು ನಿಮ್ಮ ಮುಂದಿಡುತ್ತಿದ್ದೇವೆ.

ರೋಹಿತ್‌ಗೆ ಸಾಥ್ ನೀಡಲಿದ್ದಾರೆ ಕೆಎಲ್ ರಾಹುಲ್
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ತಂಡದ ಆರಂಭಿಕನಾಗಿ ಕಣಕ್ಕಿಳಿಯುವುದು ಪಕ್ಕಾ. ಆದರೆ ಅವರ ಜೊತೆಗೆ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಮಧ್ಯೆ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ. ಆದರೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದು ಶಿಖರ್ ಧವನ್ ಮೊದಲ ಪಂದ್ಯದಿಂದ ಹೊರಗುಳಿಯುವುದು ಬಹುತೇಕ ಖಚಿತ.

ಕೊಹ್ಲಿ- ಐಯ್ಯರ್- ಪಂತ್
ಇನ್ನು ಅಗ್ರ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಐಯ್ಯರ್‌ಗೆ ಸೂರ್ಯಕುಮಾರ್ ಯಾದವ್ ತೀವ್ರ ಪೈಪೋಟಿಯನ್ನು ನಡೆಸಲಿದ್ದಾರೆ. ಐಯ್ಯರ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಇನ್ನು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದ ರಿಷಭ್ ಪಂತ್ ಈ ಸರಣಿಯ ಮೂಲಕ ಟಿ20 ತಂಡದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆ.

ಹಾರ್ದಿಕ್-ಸುಂದರ್-ಅಕ್ಷರ್
ಇನ್ನು ಟೀಮ್ ಇಂಡಿಯಾದ ಆರನೇ ಕ್ರಮಾಂಕದ ಆಟಗಾರನಾಗಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದಾರೆ. ಈ ಟೂರ್ನಿಯಲ್ಲಿ ಬೌಲಿಂಗ್ ಮೂಲಕವೂ ಪಾಂಡ್ಯ ಕಮಾಲ್ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಇನ್ನು ಆಲ್‌ರೌಂಡರ್ ಆಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೆಚ್ಚುಗೆ ಗಳಿಸಿದ ವಾಶಿಂಗ್ಟನ್ ಸುಂದರ್ ಟಿ20 ಆಡುವ ಬಳಗದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇವರ ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಬೌಲಿಂಗ್‌ನಲ್ಲಿ ಮಿಂಚಿದ ಅಕ್ಷರ್ ಪಟೇಲ್ ಕೂಡ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಭುವನೇಶ್ವರ್- ಶಾರ್ದೂಲ್- ಚಾಹಲ್
ಇನ್ನು ಗಾಯದ ಕಾರಣದಿಂದಾಗಿ ಸುದೀರ್ಘ ಕಾಲದಿಂದ ಟೀಮ್ ಇಂಡಿಯಾದಿಂದ ದೂರವಿದ್ದ ಭುವನೇಶ್ವರ್ ಕುಮಾರ್ ವೇಗದ ಬೌಲಿಂಗ್ ವಿಭಾಗದ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್‌ಗಳ ಹಾಗೂ ಟೆಸ್ಟ್ ಸರಣಿಯಲ್ಲಿ ಮಿಂಚಿದ ಶಾರ್ದೂಲ್ ಠಾಕೂರ್ ಎರಡನೇ ವೇಗಿಯಾಗಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಯುಜುವೇಂದ್ರ ಚಾಹಲ್ ಸ್ಪಿನ್ನರ್ ಆಗಿ ತಂಡದಲ್ಲಿ ಇರಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications