Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs ENG Test: ಶುಭಮನ್‌ ಗಿಲ್‌ ಪಡೆಗೆ ಮೊದಲ ಸವಾಲು: ಎಷ್ಟು ಕನ್ನಡಿಗರಿಗೆ ಸಿಗುತ್ತೆ ಸ್ಥಾನ?

ಭಾರತ, ಇಂಗ್ಲೆಂಡ್ ಪ್ರವಾಸದಲ್ಲಿ ಮೊದಲ ಟೆಸ್ಟ್‌ ಪಂದ್ಯವನ್ನು ಶುಕ್ರವಾರ ಆಡಲಿದೆ. ಈ ವೇಳೆ ಟೀಮ್ ಇಂಡಿಯಾಕ್ಕೆ ಅನುಭವಿಗಳ ಅನುಪಸ್ಥಿತಿ ಬಹುವಾಗಿ ಕಾಡುತ್ತಿದೆ. ಟೀಮ್ ಇಂಡಿಯಾ ಯುವ ಆಟಗಾರರೊಂದಿಗೆ ಕಣಕ್ಕೆ ಇಳಿಯಲಿದೆ. ಯುವ ತಂಡವನ್ನು ಶುಭಮನ್‌ ಗಿಲ್ ಮುನ್ನಡೆಸುತ್ತಿದ್ದಾರೆ. ಟೀಮ್ ಇಂಡಿಯಾ ಪ್ಲೇಯಿಂಗ್‌ ಇಲೆವೆನ್‌ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಆತಿಥೇಯ ಇಂಗ್ಲೆಂಡ್ ತಂಡ ಈಗಾಗಲೇ ತನ್ನ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ.

ಹೆಡಿಂಗ್ಲಿಯಲ್ಲಿ ನಡೆಯಲಿರುವ ಟೆಸ್ಟ್‌ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಇರಾದೆಯನ್ನು ಹೊಂದಿದೆ. ಮೊದಲ ಟೆಸ್ಟ್‌ ನಡೆಯುವ ಪಿಚ್‌ ಬ್ಯಾಟರ್‌ಗಳಿಗೆ ಸಹಾಯ ನೀಡುವ ಸಾಧ್ಯತೆ ಇದೆ. ಅಲ್ಲದೆ ಸ್ಪಿನ್ ಬೌಲರ್‌ಗಳಿಗೂ ಕೊಂಚ ನೆರವು ನೀಡಬಲ್ಲದು. ಹೀಗಾಗಿ ತಂಡ ಯಾವ ಸಂಯೋಜನೆಯಿಂದ ಕಣಕ್ಕೆ ಇಳಿಯಲಿದೆ ಎಂಬ ಬಗ್ಗೆ ವರದಿ ಇಲ್ಲಿದೆ.

India vs England 1st Test Karnataka Players in Focus

ಆರಂಭಿಕರಾಗಿ ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್‌ ಇನಿಂಗ್ಸ್‌ ಆರಂಭಿಸುವುದು ಪಕ್ಕಾ ಆದಂತೆ ಆಗಿದೆ. ಆದ್ರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಸಾಯಿ ಸುದರ್ಶನ್‌, ಅಭಿಮನ್ಯು ಈಶ್ವರನ್‌, ಕರುಣ್‌ ನಾಯರ್‌ ಈ ಸ್ಥಾನದಲ್ಲಿ ಬ್ಯಾಟ್ ಮಾಡುವ ಕನಸು ಕಾಣುತ್ತಿದ್ದಾರೆ. ಇನ್ನು ನಾಲ್ಕನೇ ಕ್ರಮಾಂದಲ್ಲಿ ಶುಭಮನ್‌ ಗಿಲ್‌ ಬ್ಯಾಟ್‌ ಮಾಡುವುದು ಸಹ ನಿಶ್ಚಿತ ಎಂದು ಹೇಳಲಾಗುತ್ತಿದೆ. ವಿಕೆಟ್‌ ಕೀಪರ್ ಬ್ಯಾಟರ್‌ ಆಗಿ ರಿಷಭ್ ಪಂತ್ ಅವಕಾಶ ಪಡೆಯಬಹುದು.

ಪ್ರಸಿದ್ಧಗೆ ಸಿಗುತ್ತಾ ಅವಕಾಶ?

ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರು ಈ ಪಿಚ್‌ ಮೇಲೆ ಮೊದಲ ಆಯ್ಕೆಯ ಆಟಗಾರರಾಗಿದ್ದಾರೆ. ಇನ್ನೊಂದು ಆಲ್‌ರೌಂಡರ್‌ ಕೋಟಾದ ಮೇಲೆ ನಿತೀಶ್‌ ಕುಮಾರ್‌ ರೆಡ್ಡಿ, ಶಾರ್ದೂಲ್ ಠಾಕೂರ್, ವಾಶಿಂಗ್ಟನ್ ಸುಂದರ್, ಕಣ್ಣು ನೆಟ್ಟಿದ್ದಾರೆ. ಇನ್ನು ಈ ಪಿಚ್‌ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡುವುದರಿಂದ ಕುಲ್‌ದೀಪ್ ಯಾದವ್‌ಗೂ ಈ ಪಿಚ್ ಸಹಾಯ ಮಾಡಬಹುದು. ವೇಗದ ಬೌಲರ್‌ಗಳಾಗಿ ಜಸ್ಪ್ರಿತ್ ಬುಮ್ರಾ ತಂಡದಲ್ಲಿ ಸ್ಥಾನ ಪಡೆಯುವುದು ಫಿಕ್ಸ್‌. ಇನ್ನೊಬ್ಬ ವೇಗಿಯ ಸ್ಥಾನದಲ್ಲಿ ಮೊಹಮ್ಮದ್ ಸಿರಾಜ್‌ ಆಡಲಿದ್ದಾರೆ. ಮೂರನೇ ವೇಗಿಯ ಸ್ಥಾನವನ್ನು ಯಾರು ತುಂಬುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದ್ದು, ಕನ್ನಡಿಗ ಪ್ರಸಿದ್ಧ ಕೃಷ್ಣ ಸಹ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ.

India vs England 1st Test Karnataka Players in Focus

ಭಾರತದ ಸಂಭಾವ್ಯ ಇಲೆವೆನ್: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ರಿಷಭ್ ಪಂತ್, ಸಾಯಿ ಸುದರ್ಶನ್ / ನಿತೀಶ್ ಕುಮಾರ್ ರೆಡ್ಡಿ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್ ತಂಡ ಟೆಸ್ಟ್‌ ಪಂದ್ಯಕ್ಕೂ ಮುನ್ನ ಒಂದು ದಿನ ಮುಂಚಿತವಾಗಿಯೇ ತಂಡವನ್ನು ಪ್ರಕಟಿಸಿದ್ದಾರೆ. ಅಲ್ಲದೆ ತಂಡದಲ್ಲಿ ಜೇಮೀ ಸ್ಮಿತ್, ಬ್ರೈಡೆನ್ ಕಾರ್ಸೆ ಮತ್ತು ಜೋಶ್ ಟಂಗ್ ಕೂಡ ಸೇರ್ಪಡೆಗೊಂಡಿದ್ದಾರೆ.

ಪ್ರಕಟಿತ ಇಂಗ್ಲೆಂಡ್‌ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್.

Story first published: Thursday, June 19, 2025, 11:26 [IST]
Other articles published on Jun 19, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+