ಭಾರತ vs ಇಂಗ್ಲೆಂಡ್: ಮೊದಲ ಟೆಸ್ಟ್‌ನ 3ನೇ ದಿನದಾಟ, Live ಸ್ಕೋರ್ ವಿವರ

ನಾಟಿಂಗ್‌ಹ್ಯಾಮ್, ಆಗಸ್ಟ್ 6: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂರನೇ ದಿನದಾಟ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಎರಡನೇ ದಿನ ಪಂದ್ಯಕ್ಕೆ ಮಳೆ ಅಡ್ಡಿಯಾದ ಪರಿಣಾಮವಾಗಿ ಪೂರ್ಣ ಪ್ರಮಾನದ ಪಂದ್ಯ ನಡೆಯಲು ಸಾಧ್ಯವಾಗಿಲ್ಲ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ತನ್ನ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿದ್ದು 125 ರನ್‌ಗಳನ್ನು ಗಳಿಸಿತ್ತು.

ಮೂರನೇ ದಿನದಾಟವನ್ನು ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಆರಂಭಿಸಿದ್ದಾರೆ. ಸುದೀರ್ಘ ಕಾಲದ ಬಳಿಕ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿರುವ ಕೆಎಲ್ ರಾಹುಲ್ ಅರ್ಧ ಶತಕಗಳಿಸಿ ಮಿಂಚಿದ್ದಾರೆ. ಮೂರನೇ ದಿನಕ್ಕೆ ಆಟವನ್ನು ಕಾಯ್ದುಕೊಂಡಿದ್ದಾರೆ. ಮತ್ತೊಂದು ತುದಿಯಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಇದ್ದು ಇನಿಂಗ್ಸ್ ಮುಂದುವರಿಸಿದ್ದಾರೆ.

ಮೂರನೇ ದಿನದಾಟದ Live ಸ್ಕೋರ್ ಮಾಹಿತಿ ಇಲ್ಲಿದೆ:

1
49712

ಉತ್ತಮ ಆರಂಭ ಪಡೆದ ಭಾರತ: ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಕ್ರಿಕೆಟ್ ತಂಡ ಉತ್ತಮ ಆರಂಭವನ್ನು ಪಡೆಯುವಲ್ಲಿ ಯಶಸ್ವಿಯಾಗಿತ್ತು. ಅನುಭವಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಇನ್ನಿಂಗ್ಸ್‌ ಆರಂಭಿಸಲು ಇಳಿದಿದ್ದು ಮೊದಲ ವಿಕೆಟ್‌ಗೆ 97 ರನ್‌ಗಳ ಜಿತೆಯಾಟವನ್ನು ನೀಡಿದ್ದರು. ಆದರೆ ಎರಡನೇ ದಿನದಾಟದ ಭೋಜನ ವಿರಾಮದ ಅಂತ್ಯದ ವೇಳೆಗೆ ರೋಹಿತ್ ಶರ್ಮಾ ಫುಲ್‌ಶಾಟ್ ಬಾರಿಸಲು ಹೋಗಿ ವಿಕೆಟ್ ಒಪ್ಪಿಸಿಕೊಂಡರು.

ಹಠಾತ್ ಕುಸಿತ: ರೋಹಿತ್ ಶರ್ಮಾ ವಿಕೆಟ್ ಕಳೆದುಕೊಳ್ಳುವವರೆಗೂ ಉತ್ತಮ ಸ್ಥಿತಿಯಲ್ಲಿದ್ದ ಭಾರತೀಯ ತಂಡ ತಕ್ಷಣವೇ ಹಠಾತ್ ಕುಸಿತಕ್ಕೆ ಒಳಗಾಯಿತು. ಚೇತೇಶ್ವರ್ ಪೂಜಾರ ಆಂಡರ್ಸನ್ ಎಸೆತದಲ್ಲಿ ವಿಕೆಟ್ ಕೀಪರ್ ಜೋಸ್ ಬಟ್ಲರ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಮುಂದಿನ ಎಸೆತದಲ್ಲಿಯೇ ನಾಯಕ ವಿರಾಟ್ ಕೊಹ್ಲಿ ಕೂಡ ಶೂನ್ಯಕ್ಕೆ ಆಂಡರ್ಸನ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡರು. ಈ ಮೂಲಕ ಟೀಮ್ ಇಂಡಿಯಾ 104 ರನ್‌ಗಳಿಗೆ 3ನೇ ವಿಕೆಟ್ ಕಳೆದುಕೊಂಡಿತು. ಅದಾದ ಬಳಿಕ ಉಪ ನಾಯಕ ಅಜಿಂಕ್ಯ ರಹಾನೆ ಬೇಡದ ರನ್ ಕದಿಯುವ ಪ್ರಯತ್ನಕ್ಕೆ ಮುಂದಾಗಿ ರನ್‌ಔಟ್ ಆದರು. ಈ ಮೂಲಕ 112 ರನ್‌ ಆಗುವಷ್ಟರಲ್ಲಿ ಭಾರತ 4ನೇ ವಿಕೆಟ್ ಕಳೆದುಕೊಂಡಿದೆ.

ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 183 ರನ್‌ಗಳನ್ನ ಗಳಿಸಿದ್ದು ಭಾರತ ಇನ್ನು 58 ರನ್‌ಗಳ ಹಿನ್ನೆಡೆಯನ್ನು ಅನುಭವಿಸುತ್ತಿದೆ. ಉತ್ತಮ ಮೊತ್ತ ಪೇರಿಸಿ ಪಂದ್ಯದಲ್ಲಿ ಹಿಡಿತವನ್ನು ಬಿಗಿಗೊಳಿಸುವ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾಗೆ ಪ್ರಮುಖ ಆಟಗಾರರು ಕೈಕೊಟ್ಟಿರುವುದು ಹಿನ್ನೆಡೆಯಾಗಿದೆ. ಇನ್ನು ಅನುಭವು ವೇಗಿ ಆಂಡರ್ಸನ್ ಭಾರತ ತಂಡದ ಇಬ್ಬರು ಆಟಗರರನ್ನು ಈಗಾಗಲೇ ಫೆವಿಲಿಯನ್‌ಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತಕ್ಕೆ ಮಾರಕವಾಗುವ ಮುನ್ಸೂಚನೆಯನ್ನು ನೀಡಿದ್ದಾರೆ.

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ

ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಜಾಕ್ ಕ್ರಾವ್ಲಿ, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಡೇನಿಯಲ್ ಲಾರೆನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, August 6, 2021, 15:24 [IST]
Other articles published on Aug 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X