ಭಾರತ vs ಇಂಗ್ಲೆಂಡ್, ಟೆಸ್ಟ್, Live: ಭಾರತ ಗೆಲ್ಲಲು 420 ರನ್ ಗುರಿ

ಚೆನ್ನೈ: ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಮೊದಲನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 578 ರನ್ ಕಲೆ ಹಾಕಿತ್ತು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 337 ರನ್ ಬಾರಿಸಿ 241 ರನ್ ಹಿನ್ನಡೆ ಅನುಭವಿಸಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕಡಿಮೆ ಟೋಟಲ್ (178 ರನ್) ಮಾಡಿ, ಭಾರತ ಗೆಲ್ಲಲು 420 ರನ್ ಗುರಿ ನೀಡಿತ್ತು.
ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ ಇಂಗ್ಲೆಂಡ್ 190.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 578 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ರಿಷಭ್ ಪಂತ್ 91 (88 ಎಸೆತ), ಚೇತೇಶ್ವರ ಪೂಜಾರ 73, ವಾಷಿಂಗ್ಟನ್ ಸುಂದರ್ ಅಜೇಯ 85 ರನ್‌ನೊಂದಿಗೆ 95.5 ಓವರ್‌ನಲ್ಲಿ ಎಲ್ಲಾ ವಿಕೆಟ್ ಕಳೆದು 337 ರನ್ ಗಳಿಸಿತ್ತು.
ಭಾರತ vs ಇಂಗ್ಲೆಂಡ್, 1ನೇ ಟೆಸ್ಟ್, Live ಸ್ಕೋರ್ ಕಾರ್ಡ್
ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ಮಾರಕ ಬೌಲಿಂಗ್ ಪ್ರದರ್ಶಿಸಿತು. ಹೀಗಾಗಿ ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್‌ನಲ್ಲಿ 46.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 178 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 420 ರನ್ ಗುರಿ ನೀಡಿತ್ತು. ಭಾರತ ಸದ್ಯ ದ್ವಿತೀಯ ಇನ್ನಿಂಗ್ಸ್ ಆಡುತ್ತಿದೆ. ಅಂದ್ಹಾಗೆ ಭಾರತದ ಅಶ್ವಿನ್ 6+3, ಜಸ್‌ಪ್ರೀತ್ ಬೂಮ್ರಾ 3+1 ವಿಕೆಟ್‌ನಿಂದ ಗಮನ ಸೆಳೆದಿದ್ದಾರೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಶಹಬಾಜ್ ನದೀಮ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆ), ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications