ಭಾರತ vs ಇಂಗ್ಲೆಂಡ್: ಮೊದಲ ಟೆಸ್ಟ್‌ನಲ್ಲಿ ಭಾರತಕ್ಕೆ ಸೋಲು

ಚೆನ್ನೈ: ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ಮಧ್ಯೆ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆರಂಭಿಕ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿರುವ ವಿರಾಟ್ ಕೊಹ್ಲಿ ಪಡೆ ದ್ವಿತೀಯ ಇನ್ನಿಂಗ್ಸ್ ಆಡುತ್ತಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ 420 ರನ್‌ಗಳು ಬೇಕಿತ್ತು. ಆದರೆ ಭಾರತ ಪಂದ್ಯದಲ್ಲಿ 227 ರನ್ ಸೋಲನುಭವಿಸಿದೆ.
ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್, ಮೊದಲ ಇನ್ನಿಂಗ್ಸ್‌ನಲ್ಲಿ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 578 ರನ್ ಗಳಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 46.3 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 178 ರನ್ ಗಳಿಸಿತ್ತು. ಭಾರತ ಆರಂಭಿಕ ಇನ್ನಿಂಗ್ಸ್‌ನಲ್ಲಿ 95.5 ಓವರ್‌ಗೆ ಸರ್ವಪತನ ಕಂಡು 337 ರನ್ ಗಳಿಸಿತ್ತು.
ಭಾರತ vs ಇಂಗ್ಲೆಂಡ್, 1ನೇ ಟೆಸ್ಟ್, Live ಸ್ಕೋರ್‌ಕಾರ್ಡ್
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆ), ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಶಹಬಾಜ್ ನದೀಮ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಡೇನಿಯಲ್ ಲಾರೆನ್ಸ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಜೋಸ್ ಬಟ್ಲರ್ (ವಿಕೆ), ಡೊಮಿನಿಕ್ ಬೆಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications