ಭಾರತ vs ಇಂಗ್ಲೆಂಡ್ ಪ್ರಥಮ ಟೆಸ್ಟ್: ಪ್ರಿವ್ಯೂ, ಹವಾಮಾನ ವರದಿ, ಸಂಭಾವ್ಯ ತಂಡ ಹಾಗೂ ಪಿಚ್ ರಿಪೋರ್ಟ್

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶುಕ್ರವಾರ ಮುಖಾಮುಖಿಯಾಗಲಿದೆ. ಎರಡು ತಂಡಗಳು ಕೂಡ ಅಂತಿಮ ಹಂತದ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು ಪಂದ್ಯವನ್ನು ಗೆಲ್ಲು ತೀವ್ರ ಕಸರತ್ತು ನಡೆಸಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವನ್ನು ವಹಿಸಿಕೊಂಡಿದೆ.
ಇಂಗ್ಲೆಂಡ್ ತಂಡ ಜೋ ರೂಟ್ ನಾಯಕತ್ವದಲ್ಲಿ ಇತ್ತೀಚೆಗೆ ಶ್ರೀಲಂಕಾ ವಿರುದ್ಧ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯವನ್ನು ಕೂಡ ಭರ್ಜರಿಯಾಗಿ ಗೆದ್ದಕೊಂಡ ಉತ್ಸಾಹದಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ಗಾಯದ ಸಮಸ್ಯೆಗಳ ಮಧ್ಯೆ ಪ್ರಮುಖ ಆಟಗಾರರ ಅಲಭ್ಯತೆಯ ಮಧ್ಯೆಯೂ ಆಸ್ಟ್ರೇಲಿಯಾ ನೆಲದಲ್ಲಿ ಅದ್ಭುತ ಆಟವನ್ನು ಪ್ರದರ್ಶಿಸಿ ಸರಣಿ ಗೆದ್ದು ತವರಿಗೆ ಮರಳಿದೆ. ಹೀಗಾಗಿ ಎರಡು ತಂಡಗಳ ಮಧ್ಯೆ ತೀವ್ರ ಪೈಪೋಟಿಯನ್ನು ನಿರೀಕ್ಷಿಸಲಾಗುತ್ತಿದೆ.

ಚೆನ್ನೈನ ಹವಾಮಾನ ವರದಿ
ಹವಾಮಾನ ಇಲಾಖೆಯ ವರದಿಯ ಪ್ರಕಾರ ಚೆನ್ನೈ ಮುಂದಿನ ಐದು ದಿನಗಳ ಕಾಲವೂ ಸಾಕಷ್ಟು ಬಿಸಿಲಿನಿಂದ ಕೂಡಿರಲಿದೆ. ಈವರೆಗಿನ ಮಾಹಿತಿಯ ಪ್ರಖಾರ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಯಾವ ಮುನ್ಸೂಚನೆಯೂ ಇಲ್ಲ. ಮಧ್ಯಾಹ್ನದ ಬಳಿಕ ಬಿಸಿಲಿನ ಪ್ರಖರತೆ ತೀವ್ರ ಏರಿಕೆಯಾಗಲಿದ್ದು ಆಟಗಾರರಿಗೂ ನಿಜಕ್ಕೂ ಇದು ಪರೀಕ್ಷೆಯಾಗಿರಲಿದೆ.

ಪಿಚ್ ರಿಪೋರ್ಟ್
ಚೆನ್ನೈನ ಪಿಚ್ ಫ್ಲ್ಯಾಟ್ ಆಗಿದ್ದು ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳಿಗೆ ಸಾಕಷ್ಟು ನೆರವು ನೀಡುತ್ತದೆ. ಮೊದಲ ದಿನ ಸ್ವಲ್ಪ ಬೌನ್ಸಿ ಎನಿಸಲಿದ್ದು ಎರಡು ಹಾಗೂ ಮೂರನೇ ದಿನ ಬ್ಯಾಟ್ಸ್‌ಮನ್‌ಗಳಿಗೆ ಪೂರಕವಾಗಿರುತ್ತದೆ. ಅಂತಿಮ ಎರಡು ದಿನದಾಟದಲ್ಲಿ ಸ್ಪಿನ್ನರ್‌ಗಳು ಮಿಂಚುವ ಸಾಧ್ಯತೆ ಹೆಚ್ಚಿದೆ.

ಸಮಯ ಹಾಗೂ ನೇರಪ್ರಸಾರ ಮಾಹಿತಿ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಫೆಬ್ರವರಿ 5ರಂದು ಶುಕ್ರವಾರ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ. ಭಾರತದಲ್ಲಿ ಪಂದ್ಯಗಳು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಿರಲಿದೆ.

ಟೀಮ್ ಇಂಡಿಯಾ ಸಂಭಾವ್ಯ ಆಡುವ ಬಳಗ
ಶುಬ್ಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ / ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಆಕ್ಷರ್ ಪಟೇಲ್ / ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ
ಡೊಮಿನಿಕ್ ಸಿಬ್ಲಿ, ರಾರಿ ಬರ್ನ್ಸ್, ಡಾನ್ ಲಾರೆನ್ಸ್, ಜೋ ರೂಟ್ (ನಾಯಕ) ಬೆನ್ ಫೋಕ್ಸ್, ಜೋಸ್ ಬಟ್ಲರ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಮೊಯೀನ್ ಅಲಿ, ಜೇಮ್ಸ್ ಆಂಡರ್ಸನ್ / ಸ್ಟುವರ್ಟ್ ಬ್ರಾಡ್, ಡೊಮ್ ಬೆಸ್ / ಜ್ಯಾಕ್ ಲೀಚ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications